ಮೈಸೂರು | ಮಹಿಳೆಯರ ಸಬಲೀಕರಣಕ್ಕೆ ಸಂಜೀವಿನಿ ಕಾರ್ಯಕ್ರಮ

Date:

ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲರಾಗಲು ಸಂಜೀವಿನಿಯಾಗಿರುವ ಸುತ್ತು ನಿಧಿ, ಸಮುದಾಯ ಬಂಡವಾಳ ನಿಧಿ ಹಾಗೂ ಸರ್ಕಾರದ ಆರ್ಥಿಕ ನೆರವು ಕಾರ್ಯಕ್ರಮಗಳು ಅತ್ಯಂತ ಪ್ರಮುಖ ಪಾತ್ರ ವಹಿಸಿವೆ ಎಂದು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತೆ ಡಾ ಅರುಂಧತಿ ಚಂದ್ರಶೇಖರ್ ತಿಳಿಸಿದರು.

ಮೈಸೂರು ನಗರದಲ್ಲಿ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಕೌಶಲ್ಯಾಭಿವೃದ್ದಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಅವರ ಸಹಯೋಗದೊಂದಿಗೆ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ “ದೀಪ ಸಂಜೀವಿನಿ” ಕಾರ್ಯಕ್ರಮ‌ ಉದ್ಘಾಟಿಸಿ ಮಾತನಾಡಿದರು.

“ಮೈಸೂರು ಜಿಲ್ಲೆಯಲ್ಲಿ ಒಟ್ಟು 16,407 ಸ್ವ-ಸಹಾಯ ಸ್ತ್ರೀ ಶಕ್ತಿ ಸಂಘಗಳಿದ್ದು, ಸುಮಾರು 2,02,696 ಸದಸ್ಯರಿರುತ್ತಾರೆ. ಸ್ವ-ಸಹಾಯ ಸಂಘದ ಮಹಿಳೆಯರು ಈವರೆಗೆ ಸುಮಾರು 239 ಕೋಟಿ ಆರ್ಥಿಕ ಚಟುವಟಿಕೆಗಳನ್ನು ಮಾಡಿರುವುದು ತುಂಬಾ ಸಂತೋಷ ತರುವಂತಹದ್ದಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ ಮಾತನಾಡಿ, “ಜಿಲ್ಲೆಯಲ್ಲಿ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಮೂಲಕ ಕರಕುಶಲ ಕಲೆ ಬಳಸಿ ದೀಪಗಳನ್ನು ತಯಾರು ಮಾಡಿ ಮಾರಾಟ ಮಾಡಲಾಗುತ್ತಿದೆ. ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚಿ ಆಚರಿಸುವ ಬದಲು ದೀಪ ಹಚ್ಚಿ ಆಚರಿಸಬೇಕು. ಪಟಾಕಿಗಳು ಪರಿಸರಕ್ಕೆ ಹಾನಿಕಾರಕ ಹಾಗೂ ಶಬ್ದ ಮಾಲಿನ್ಯ ಉಂಟು ಮಾಡುತ್ತದೆ. ಇದರ ಬದಲು ದೀಪವನ್ನು ಹಚ್ಚಿ ಆಚರಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ದಲಿತ ದೌರ್ಜನ್ಯ ತಡೆಗೆ ವಿಶೇಷ ಪೊಲೀಸ್ ಠಾಣೆ ತೆರೆಯುವಂತೆ ದಸಂಸ ಆಗ್ರಹ

“ಸ್ವ ಸಹಾಯ ಸಂಘಗಳ ಮೂಲಕ ಗ್ರಾಮಿಣ ಭಾಗದಲ್ಲಿ ಕಸ ಸಂಗ್ರಹಣೆ, ಮಾಡಿ ಗೊಬ್ಬರ ಮಾಡಿ ಪುನರ್ ಬಳಕೆ ಮಾಡುವುದರಿಂದ ಸಂಘಗಳು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ” ಎಂದು ಸಲಹೆ ನೀಡಿದರು.

“ದೀಪಾವಳಿ ಹಬ್ಬದ ಅಂಗವಾಗಿ ಇಂದಿನಿಂದ ಒಂದು ವಾರಗಳ ಕಾಲ ದೀಪ ಸಂಜೀವಿನಿ ಕಾರ್ಯಕ್ರಮ ಆಯೋಜಿಸಿ, ಸ್ವ-ಸಹಾಯ ಸಂಘದ ಸದಸ್ಯರ ಆರ್ಥಿಕ ಚಟುವಟಿಕೆಗೆ ಒತ್ತು ನೀಡಿ ಸಾರ್ವಜನಿಕರಿಗೆ ಅರಿವು ಉಂಟು ಮಾಡಿರುವುದು ತುಂಬಾ ಸಂತೋಷವಾಗಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

ಸದರಿ ಮಳಿಗೆಗಳನ್ನು ಕೆ ಎಂ ಗಾಯತ್ರಿ, ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ ಹಾಗೂ ಕಾರ್ಮಿಕ ಇಲಾಖೆಯ ಆಯುಕ್ತರು ವೀಕ್ಷಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...