ಮೈಸೂರು | ಪ್ರಾಣಿ,ಪಕ್ಷಿ ಸಂಕುಲ ಉಳಿಸಿ : ನಟ ಪ್ರಜ್ವಲ್ ದೇವರಾಜ್

Date:

ಮೈಸೂರು ನಗರದ ಚಾಮುಂಡಿ ಪುರಂನಲ್ಲಿರುವ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಎರಡು ತಿಂಗಳ ಕಾಲ ‘ ನೀರುಣಿಸಿ – ಜೀವವನ್ನುಳಿಸಿ ‘ ಅಭಿಯೋಜನೆಯ ಮೂಕ ಸ್ಪಂದನ ಅಭಿಯಾನದ ಪೋಸ್ಟರನ್ನು ನಟ ಪ್ರಜ್ವಲ್ ದೇವರಾಜ್ ಬಿಡುಗಡೆ ಮಾಡಿ ‘ ಪ್ರಾಣಿ ಪಕ್ಷಿ ಸಂಕುಲ ಉಳಿಸಿ ‘ಎಂದು ಕರೆ ನೀಡಿದರು.

” ಬೇಸಿಗೆಯ ತಾಪಮಾನದ ತೀವ್ರತೆಯಿಂದಾಗಿ ಪ್ರಾಣಿ, ಪಕ್ಷಿ ಸಂಕುಲ ಬಳಲುತ್ತವೆ. ಕುಡಿಯುವ ನೀರು, ಆಹಾರಕ್ಕಾಗಿ ಪರಿತಪಿಸುತ್ತವೆ. ಆದ್ದರಿಂದ ‘ ಪರಿಸರ ರಕ್ಷತಿ ರಕ್ಷಿತಃ ‘ ಪರಿಸರ ಸ್ನೇಹಿ ತಂಡ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಎರಡು ತಿಂಗಳ ಕಾಲ ‘ನೀರುಣಿಸಿ-ಜೀವವನ್ನುಳಿಸಿ ‘ ಅಭಿಯೋಜನೆಯನ್ನು ಮೈಸೂರು ನಗರದ ಸುತ್ತಮುತ್ತ ಪ್ರದೇಶಗಳಲ್ಲಿ ರೂಪಿಸುತ್ತಿರುವುದು ಅತ್ಯುತ್ತಮವಾದ ಕೆಲಸ, ಬೇಸಿಗೆಯ ದಿನ ಇನ್ನೇನು ಆರಂಭಗೊಂಡಿದ್ದು ಪ್ರಾಣಿ, ಪಕ್ಷಿಗಳು ತಮ್ಮ ಅಸ್ಥಿತ್ವಕ್ಕಾಗಿ ಹೋರಾಟ ನಡೆಸುವ ಹಾದಿಯಲ್ಲಿರುತ್ತವೆ. ಇಂತಹ ಸಮಯದಲ್ಲಿ ನೆರವಿಗೆ ದಾವಿಸುವುದು ಶ್ಲಾಘನಿಯ. ಸಮಾಜಮುಖಿ ಕೆಲಸ ಯಶಸ್ವಿಗೊಳ್ಳಲಿ ಸಾರ್ವಜನಿಕರು ಸಹ ಸೇವಾ ಕಾರ್ಯಕ್ಕೆ ಕೈ ಜೋಡಿಸಲಿ ” ಎಂದರು.

ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್ ಮಾತನಾಡಿ ” ಪ್ರಾಣಿ, ಪಕ್ಷಿಗಳಿಗೆ ನೀರುಣಿಸುವ ಅಭಿಯಾನಕ್ಕೆ ಸಾರ್ವಜನಿಕರು ಸಹ ಸಹಕರಿಸಬೇಕು. ಮೈಸೂರು ನಗರದ ಪ್ರತಿಯೊಂದು ವಾರ್ಡ್‌ ನಲ್ಲಿ ಪ್ರಾಣಿ,ಪಕ್ಷಿಗಳಿಗೆ ನೀರಿನ ತೊಟ್ಟಿ,ಮರಗಳಿಗೆ ನೀರಿನ ತಟ್ಟೆ, ಆಹಾರದ ತಟ್ಟೆ ಅಳವಡಿಸಿ, ಸುತ್ತಮುತ್ತ ಇರುವವರು ಪ್ರತಿನಿತ್ಯ ಪ್ರಾಣಿ, ಪಕ್ಷಿಗಳಿಗೆ ಆಹಾರ ನೀಡುವಂತೆ ಜಾಗೃತಿ ಮೂಡಿಸಲಾಗುವುದು ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ದಲಿತರ ಮೇಲಿನ ದೌರ್ಜನ್ಯ; ಆರೋಪಿಗಳನ್ನು ಕೂಡಲೇ ಬಂಧಿಸಿ : ಪ್ರಗತಿಪರ ಸಂಘಟನೆಗಳಿಂದ ಪಾದಯಾತ್ರೆ

ಪೋಸ್ಟರ್ ಬಿಡುಗಡೆ ವೇಳೆ ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಪರಿಸರ ಪ್ರೇಮಿ ಪ್ರದೀಪ್ ಗೌಡ,ಅಮಿತ್ ಕುಮಾರ್, ಮಹಾನ್ ಶ್ರೇಯಸ್, ಸಚಿನ್ ನಾಯಕ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...