ಮೈಸೂರಿನಲ್ಲಿ ಎಸ್ಡಿಪಿಐ ಕಾರ್ಯಕರ್ತ ಹಾಗೂ ಧಾರ್ಮಿಕ ನೇತಾರರಾಗಿದ್ದ ವ್ಯಕ್ತಿಯೋರ್ವರರನ್ನು ನಡುರಸ್ತೆಯಲ್ಲೇ ಅಪರಿಚಿತ ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದ ಬಗ್ಗೆ ವರದಿಯಾಗಿದೆ.
ಹತ್ಯೆಗೊಳಗಾದ ವ್ಯಕ್ತಿಯನ್ನು ಎಸ್ಡಿಪಿಐ ಸಕ್ರಿಯ ಕಾರ್ಯಕರ್ತ ಹಾಗೂ ಮೈಸೂರು ನಗರದಲ್ಲಿ ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದ ಮೌಲಾನಾ ಹಾಫಿಲ್ ಅಕ್ಮಲ್ ಪಾಷಾ ಎಂದು ಗುರುತಿಸಲಾಗಿದೆ.
ಇಲ್ಲಿನ ರಾಜೀವ್ ನಗರದ ನಿಮ್ರಾ ಮಸೀದಿ ಬಳಿ ಶುಕ್ರವಾರ ರಾತ್ರಿ 9ರ ಸುಮಾರಿಗೆ ಈ ಘಟನೆ ನಡೆದಿದೆ. ಹತ್ಯೆಗೀಡಾದ ಅಕ್ಮಲ್ ಅವರು ಮಾಜಿ ಕಾರ್ಪೊರೇಟರ್ ಅಯಾಝ್ ಪಂಡು ಅವರ ಸಹೋದರ ಎಂದು ತಿಳಿದುಬಂದಿದೆ.
ರಾಜೀವ್ ನಗರದ ಮಾದೇಗೌಡ ಸರ್ಕಲ್ ಸಮೀಪವಿರುವ ನಿಮ್ರಾ ಮಸೀದಿ ಬಳಿಯ ಬೇಕರಿವೊಂದರ ಮುಂಭಾಗ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.
ಸ್ಕೂಟರ್ ನಲ್ಲಿ ತೆರಳುತ್ತಿದ್ದ ಅಕ್ಮಲ್ರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ, ಸ್ಥಳದಿಂದ ಪರಾರಿಯಾಗಿದ್ದಾರೆ.ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಮೃತಪಟ್ಟಿದ್ದಾರೆ. ಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಈ ಸಂಬಂಧ ಉದಯಗಿರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಯ ಮುಂದೆ ನೂರಾರು ಮಂದಿ ಸೇರಿದ್ದರು.





