ಮೈಸೂರು | ಎಸ್‌ಡಿಪಿಐ ಕಾರ್ಯಕರ್ತ, ಧಾರ್ಮಿಕ ಮುಖಂಡನ ಭೀಕರ ಹತ್ಯೆ

Date:

ಮೈಸೂರಿನಲ್ಲಿ ಎಸ್‌ಡಿಪಿಐ ಕಾರ್ಯಕರ್ತ ಹಾಗೂ ಧಾರ್ಮಿಕ ನೇತಾರರಾಗಿದ್ದ ವ್ಯಕ್ತಿಯೋರ್ವರರನ್ನು ನಡುರಸ್ತೆಯಲ್ಲೇ ಅಪರಿಚಿತ ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದ ಬಗ್ಗೆ ವರದಿಯಾಗಿದೆ.

ಹತ್ಯೆಗೊಳಗಾದ ವ್ಯಕ್ತಿಯನ್ನು ಎಸ್ಡಿಪಿಐ ಸಕ್ರಿಯ ಕಾರ್ಯಕರ್ತ ಹಾಗೂ ಮೈಸೂರು ನಗರದಲ್ಲಿ ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದ ಮೌಲಾನಾ ಹಾಫಿಲ್ ಅಕ್ಮಲ್ ಪಾಷಾ ಎಂದು ಗುರುತಿಸಲಾಗಿದೆ.

ಇಲ್ಲಿನ ರಾಜೀವ್ ನಗರದ ನಿಮ್ರಾ ಮಸೀದಿ ಬಳಿ ಶುಕ್ರವಾರ ರಾತ್ರಿ 9ರ ಸುಮಾರಿಗೆ ಈ ಘಟನೆ ನಡೆದಿದೆ. ಹತ್ಯೆಗೀಡಾದ ಅಕ್ಮಲ್ ಅವರು ಮಾಜಿ ಕಾರ್ಪೊರೇಟ‌ರ್ ಅಯಾಝ್ ಪಂಡು ಅವರ ಸಹೋದರ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜೀವ್ ನಗರದ ಮಾದೇಗೌಡ ಸರ್ಕಲ್ ಸಮೀಪವಿರುವ ನಿಮ್ರಾ ಮಸೀದಿ ಬಳಿಯ ಬೇಕರಿವೊಂದರ ಮುಂಭಾಗ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.

ಸ್ಕೂಟರ್ ನಲ್ಲಿ ತೆರಳುತ್ತಿದ್ದ ಅಕ್ಮಲ್‌ರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ, ಸ್ಥಳದಿಂದ ಪರಾರಿಯಾಗಿದ್ದಾರೆ.ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಮೃತಪಟ್ಟಿದ್ದಾರೆ. ಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಈ ಸಂಬಂಧ ಉದಯಗಿರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಯ ಮುಂದೆ ನೂರಾರು ಮಂದಿ ಸೇರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...