ಮೈಸೂರು | ಅ.20ರಂದು ಸೀರತ್ ಅಭಿಯಾನದ ಸರ್ವಧರ್ಮ ಸಮಾವೇಶ

Date:

ಜಮಾಅತೆ ಇಸ್ಲಾಮಿ ಹಿಂದ್ ಮೈಸೂರು ಶಾಖೆ ಹಾಗೂ ಸೀರತ್ ಸಮಾವೇಶ ಸ್ವಾಗತ ಸಮಿತಿಯಿಂದ ಅಕ್ಟೋಬರ್‌ 20ರಂದು ಕಲಾ ಮಂದಿರದಲ್ಲಿ ಬೆಳಿಗ್ಗೆ 10-30ಕ್ಕೆ ʼಸೀರತ್ ಅಭಿಯಾನʼದ ಸರ್ವಧರ್ಮ ಸಮಾವೇಶ ಹಾಗೂ ಪ್ರವಾದಿ ಮುಹಮ್ಮದ್(ಸ) ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ ಎಂದು ವಲಯ ಸಂಚಾಲಕ ಅಬ್ದುಲ್ ಸಲಾಂ ಯು ಮಾಹಿತಿ ನೀಡಿದರು.

ಮೈಸೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಗತ್ತಿಗೆ ಆಗತರಾದ ಎಲ್ಲ ಪ್ರವಾದಿಗಳು ಹಾಗೂ ಮಹಾ ಪುರುಷರು ಆಯಾ ಕಾಲಕ್ಕೆ ಮತ್ತು ಆಯಾ ಧರ್ಮಗಳಿಗೆ ಮಾತ್ರ ಸೀಮಿತರಾದವರಲ್ಲ. ಅವರು ಇಡೀ ಪ್ರಪಂಚದ ಸಂಪತ್ತು. ಅವರು ಪ್ರತಿಪಾದಿಸಿರುವ ತತ್ವ ಬೋಧನೆಗಳು ಸರ್ವರಿಗೂ ಅನ್ವಯವಾಗುವಂತಹವು. ಈ ನಿಟ್ಟಿನಲ್ಲಿ ಮುಹಮ್ಮದ್(ಸ) ಪೈಗಂಬರರೂ ಕೂಡ ಇಡೀ ಜಗತ್ತಿಗೆ ಮಾರ್ಗದರ್ಶಕರಾಗಿ ಬಂದವರು” ಎಂದು ತಿಳಿಸಿದರು.

“ಪ್ರಪಂಚದ ಸೃಷ್ಟಿಕರ್ತನಾದ ದೇವನು ಪೈಗಂಬರರಿಗೆ ಅವತೀರ್ಣಗೊಳಿಸಿದ ಪವಿತ್ರ ಕುರಾನ್‌ನಲ್ಲಿ ಅವರನ್ನು ಸಮಸ್ತ ಲೋಕಕ್ಕೆ ಕಾರುಣ್ಯಭೂತರಾಗಿ ಕಳುಹಿಸಲಾಗಿದೆಯೆಂದು ಉಲ್ಲೇಖೀಸಲಾಗಿದೆ. ಅದೇ ರೀತಿ ಅವರನ್ನು ಅತ್ಯುನ್ನತ ಮಟ್ಟದ ಚಾರಿತ್ರ್ಯವಂತ ವ್ಯಕ್ತಿಯೆಂದು ಪರಿಚಯಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರವಾದಿಯವರು ಜಗತ್ತಿಗೆ ತೋರಿಸಿಕೊಟ್ಟ ಬದುಕಿನ ಚಿತ್ರಣಕ್ಕೆ ಸೀರತ್ ಎನ್ನಲಾಗುತ್ತದೆ. ಅರೇಬಿಕ್ ಕ್ಯಾಲೆಂಡರಿನ ಪ್ರಕಾರ 3ನೇ ತಿಂಗಳಾದ ರಬೀವುಲ್ ಅವ್ವಲ್ ತಿಂಗಳಲ್ಲಿ ಮುಹಮ್ಮದ್ ಪೈಗಂಬರರು ಅರಬ್ ನಾಡಿನ ಮೆಕ್ಕಾದಲ್ಲಿ ಜನಿಸಿರುತ್ತಾರೆ. ಪ್ರಸ್ತುತ ತಿಂಗಳಲ್ಲಿ ಪ್ರತಿವರ್ಷ ಕರ್ನಾಟಕ ರಾಜ್ಯಾದ್ಯಂತ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಮುಹಮ್ಮದ್ ಪೈಗಂಬರರು ಜಗತ್ತಿಗೆ ಸಾರಿದ ಅತ್ಯುನ್ನತವಾದ ಮಾನವೀಯ ಮೌಲ್ಯಗಳನ್ನು ಕನ್ನಡ ನಾಡಿನ ಜನತೆಗೆ ಪರಿಚಯಿಸುವ ಸಲುವಾಗಿ ಸೀರತ್ ಅಭಿಯಾನ ಆಚರಿಸಿಕೊಂಡು ಬರುತ್ತಿದ್ದೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಅಪರಾಧ ಪ್ರಕರಣಗಳ ವಿಮರ್ಶನ ಸಭೆ; ಅಧಿಕಾರಿಗಳಿಗೆ ಎಸ್‌ಪಿ ಖಡಕ್ ಸೂಚನೆ

“ಆದಿಚುಂಚನಗಿರಿ ಮೈಸೂರು ಮಠದ ಮಠಾಧೀಶ ಸೋಮನಾಥೇಶ್ವರ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರೆ. ಫಾ ಸ್ಟ್ಯಾನಿ ಡಿ ಅಡಾ ಧರ್ಮಗುರುಗಳು ಸೆಂಟ್ ಫಿಲೋಮಿನಸ್ ಚರ್ಚ್, ಮೈಸೂರು ಜನಾಬ್ ಮೌಲನಾ ಮುಹಮ್ಮದ್ ಉಸ್ಮಾನ್ ಷರೀಫ್ ಸ‌ಖಾಝಿ, ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಹಾಗೂ ಚಿಂತಕರಾದ ಡಾ ಬಂಜಗೆರೆ ಜಯಪ್ರಕಾಶ್, ಮುಹಮ್ಮದ್ ಕುಂಞ, ಶಾಸಕ ತನ್ವೀರ್ ಸೇಠ್, ಹರೀಶ್‌ಗೌಡ, ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಆಶಾದುರ್ ರಹಮಾನ್ ಶರೀಫ್‌, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್ ಸೇರಿದಂತೆ ಪ್ರಮುಖರು ಉಪಸ್ಥಿತರಿರುತ್ತಾರೆ” ಎಂದು ಮಾಹಿತಿ ಕೊಟ್ಟರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ ದೀಪಕ್, ಅಹಿಂದ ಶಿವರಾಂ, ಅಬ್ದುಲ್ ಖಾದರ್, ಮುಹಮ್ಮದ್ ಅಸ್ಲಾಂ, ಮೊಹಮ್ಮದ್ ಫಾರೂಕ್, ನೂರ್ ಮಹಮ್ಮದ್ ಮರ್ಚೆಂಟ್, ಕಲೀಮ್ ಅಹಮ್ಮದ್, ಅಸಾದುಲ್ಲಾ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...