ಮೈಸೂರು‌ | ಬವೇರಿಯಾ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ವಿಚಾರ ಸಂಕಿರಣ

Date:

ಮೈಸೂರು ನಗರದ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಜರ್ಮನಿ ದೇಶದ ಬವೇರಿಯಾ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಅಕ್ಟೋಬರ್‌ 23 ಮತ್ತು 24 ರಂದು ಎರಡು ದಿನಗಳ ವಿಚಾರ ಸಂಕಿರಣ ನಡೆಯಿತು

ಕರ್ನಾಟಕ ಸರ್ಕಾರ ಮತ್ತು ಜರ್ಮನಿ ದೇಶಗಳ ಬಾಂಧವ್ಯ ವೃದ್ಧಿ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಜರ್ಮನಿ ದೇಶದ ಬವೇರಿಯಾ ರಾಜ್ಯದ ಪೊಲೀಸ್ ಇಲಾಖೆಯೊಂದಿಗೆ 2016ರಿಂದ ತರಬೇತಿ ವಿಭಾಗದಲ್ಲಿ ಪರಸ್ಪರ ಮಾಹಿತಿ, ಕೌಶಲ್ಯ ಅಭಿವೃದ್ಧಿ ಮತ್ತು ವೃತ್ತಿಪರತೆ, ಕುರಿತು ಸಹಕಾರ ವೃದ್ಧಿಸಲು ಒಪ್ಪಂದ ಮಾಡಿಕೊಂಡಿದ್ದು, ಅದರ ಅನ್ವಯ ಎರಡು ರಾಜ್ಯಗಳ ಅಧಿಕಾರಿಗಳು ತರಬೇತಿ ಕುರಿತು ಭೇಟಿ ಹಾಗೂ ಸನ್ನಿವೇಶ ಆಧಾರಿತ ತರಬೇತಿ(Scenario Based Learning) ಅಭಿವೃದ್ಧಿಪಡಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ಎರಡೂ ರಾಜ್ಯಗಳ ಪೊಲೀಸ್ ಅಧಿಕಾರಿಗಳಿಗೆ ಕಾನೂನು ಮತ್ತು ಸುವ್ಯವಸ್ಥೆ, ಅಪರಾಧಗಳ ಪತ್ತೆ ಮತ್ತು ನಿಯಂತ್ರಣ, ಮಹಿಳೆಯರ ಮತ್ತು ಮಕ್ಕಳ ವಿರುದ್ಧದ ಅಪರಾಧಗಳು, ಸಂಚಾರ ನಿರ್ವಹಣೆ ಹಾಗೂ ಸೈಬರ್ ಅಪರಾಧಗಳ ಪತ್ತೆ ಮತ್ತು ತಡೆಗಟ್ಟುವಿಕೆ ಕುರಿತು ಪರಿಣಾಮಕಾರಿಯಾಗಿ ಅಧಿಕಾರಿಗಳಿಗೆ ಸನ್ನಿವೇಶ ಆಧಾರಿತ ತರಬೇತಿ ನೀಡುವ ಕುರಿತು ಕೌಶಲ್ಯ ಅಭಿವೃದ್ಧಿಪಡಿಸುವ ಬಗ್ಗೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬವೇರಿಯಾ ರಾಜ್ಯದ ತರಬೇತಿ ಮುಖ್ಯಸ್ಥ ಆಂಡ್ರಿಯನ್ ವೈಟೆಲ್‌ರವರು ಕರ್ನಾಟಕ ಪೊಲೀಸ್‌ ತರಬೇತಿ ಶಾಲೆಗಳ ಮುಖ್ಯಸ್ಥರೊಂದಿಗೆ ವಿಚಾರ ವಿನಿಮಯ ಮಾಡಿದರು.

ವಿಚಾರ ಸಂಕಿರಣದಲ್ಲಿ ಜರ್ಮನಿಯ ಬವೇರಿಯಾ ಮತ್ತು ಕರ್ನಾಟಕ ರಾಜ್ಯದ ಮಧ್ಯ ಸಮನ್ವಯ ಸಾಧಿಸುವ ಸಂಸ್ಥೆಯಾದ ಹ್ಯಾನ್ ಸೀಡಲ್ ಫೌಂಡೇಶನ್ ಅಧಿಕಾರಿಗಳಾದ ಜುಡಿತ್ ವೇಸ್‌ ಬರ್ಗರ್ ಹಾಗೂ ನಾಂಡಿಕುಲ್ ರವರು ಭಾಗಿಯಾಗಿದ್ದು,

ಬವೇರಿಯಾ ರಾಜ್ಯದಲ್ಲಿ ಅಂದಾಜು 7 ಕೋಟಿಯಷ್ಟು ಜನಸಂಖ್ಯೆ ಹೊಂದಿದ್ದು, ಯುರೋಪಿನಲ್ಲಿಯೇ ಉತ್ತಮ ಪೊಲೀಸ್ ವ್ಯವಸ್ಥೆಯನ್ನು ಹೊಂದಿದೆ. ಎರಡೂ ರಾಜ್ಯಗಳ ಪೊಲೀಸ್ ಅಧಿಕಾರಿಗಳಿಗೆ ಕಾನೂನು ಮತ್ತು ಸುವ್ಯವಸ್ಥೆ, ಅಪರಾಧಗಳ ಪತ್ತೆ ಮತ್ತು ನಿಯಂತ್ರಣ, ಮಹಿಳೆಯರ ಮತ್ತು ಮಕ್ಕಳ ವಿರುದ್ಧದ ಅಪರಾಧಗಳು, ಸಂಚಾರ ನಿರ್ವಹಣೆ ಹಾಗೂ ಸೈಬರ್ ಅಪರಾಧಗಳ ಪತ್ತೆ ಮತ್ತು ತಡೆಗಟ್ಟುವಿಕೆ ಕುರಿತು ಪರಿಣಾಮಕಾರಿಯಾಗಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಓದಿನ ಜತೆಗೆ ಉದ್ಯೋಗಾಧಾರಿತ ಕೌಶಲ್ಯ ರೂಢಿಸಿಕೊಳ್ಳಿ: ಶಾಸಕ ಡಾ. ಮಂತರ್ ಗೌಡ

ಸನ್ನಿವೇಶ ಆಧಾರಿತ ತರಬೇತಿ ನೀಡುವ ಕುರಿತು ಕೌಶಲ್ಯ ಅಭಿವೃದ್ಧಿಪಡಿಸುವ ಬಗ್ಗೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಬವೇರಿಯಾ ರಾಜ್ಯದ ತರಬೇತಿ ಮುಖ್ಯಸ್ಥ ಆಂಡ್ರಿಯನ್ ಡೈಟೆಲ್‌, ಕರ್ನಾಟಕ ಪೊಲೀಸ್‌ನ ಎಲ್ಲ ತರಬೇತಿ ಶಾಲೆಗಳ ಮುಖ್ಯಸ್ಥರೊಂದಿಗೆ ವಿಚಾರ ವಿನಿಮಯ ಮಾಡಿದರು.

ಸದರಿ ವಿಚಾರ ಸಂಕಿರಣದಲ್ಲಿ ತರಬೇತಿ ವಿಭಾಗದ ನೇತೃತ್ವವನ್ನು ಎಡಿಜಿಪಿ ಅಲೋಕ್ ಕುಮಾರ್ ವಹಿಸಿದ್ದರು. ಡಿಐಜಿಪಿ ಬೋರಲಿಂಗಯ್ಯ, ಕೆಪಿಎ ನಿರ್ದೇಶಕ ಚೆನ್ನಬಸವಣ್ಣ ಎಸ್ ಎಲ್, ಉಪ ನಿರ್ದೇಶಕರುಗಳು, ರಾಜ್ಯದ 11 ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರುಗಳು ಹಾಗೂ ಕೆಪಿಎನ ಸಹಾಯಕ ನಿರ್ದೇಶಕರುಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...