ಮೈಸೂರು | ನೀಡಿರುವ ಜಮೀನನ್ನು ನಿವೇಶನಕ್ಕಾಗಿ ಮೀಸಲಿಡಲು ಒತ್ತಾಯಿಸಿ ಧರಣಿ ಸತ್ಯಾಗ್ರಹ

Date:

ಕರ್ನಾಟಕ ರಾಜ್ಯ ರೈತ ಸಂಘ ಗುರುವಾರ ಮೈಸೂರು ತಾಲೂಕು ಕಚೇರಿ ಮುಂದೆ ನಿವೇಶನಕ್ಕಾಗಿ ನೀಡಿರುವ ಜಮೀನನ್ನು ನಿವೇಶನಕ್ಕಾಗಿಯೇ ಮೀಸಲಿಡುವಂತೆ ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸಿದರು.

ಮೈಸೂರು ತಾಲೂಕಿನ ಕೆಂಚಲಗೂಡು ಗ್ರಾಮದ ಸರ್ವೆ ನಂ: 14ರ 27 ಎಕರೆ 26 ಗುಂಟೆ ಪ್ರದೇಶದಲ್ಲಿ ಸುಮಾರು 70 ಕುಟುಂಬಗಳು ಬಗರ್ ಹುಕುಂ ಸಾಗುವಳಿಯನ್ನು ಸುಮಾರು 70 ವರ್ಷಗಳ ಹಿಂದಿನಿಂದಲೂ ಅನುಭವಿಸುತ್ತಿದ್ದಾರೆ. ದರಖಾಸ್ತು ಮಂಜೂರಾಗಿ ಫಾರಂ ನಂ: 50ರ ನಮೂನೆ ಅರ್ಜಿಯನ್ನು ಕೂಡ ಸಲ್ಲಿಸಿದ್ದರು. ಮುನ್ಸಿಪಲ್ ವ್ಯಾಪ್ತಿಯಿಂದ ಕಡಿಮೆ ಅಂತರದಲ್ಲಿದೆ ಎಂದು ಸಾಗುವಳಿ ಮಂಜೂರು ಮಾಡಲು ಸಾಧ್ಯವಿಲ್ಲ ಎಂದಿದೆ ಎಂದು ದೂರಿದರು.

WhatsApp Image 2024 11 14 at 3.39.11 PM

ಸಂಬಂಧಪಟ್ಟ ಸಮಿತಿಯು ತೀರ್ಮಾನಿಸಿದ ಹಿನ್ನೆಲೆಯಲ್ಲಿ ಸಾಗುವಳಿ ಮಾಡುತ್ತಿದ್ದ ರೈತರ ಕುಟುಂಬಕ್ಕೆ ನಿವೇಶನವನ್ನಾದರು ಸದರಿ ಸರ್ವೆ ನಂಬರ್‌ನಲ್ಲಿ ನೀಡಬೇಕೆಂಬ ಉದ್ದೇಶದಿಂದ ಜಿಲ್ಲಾಡಳಿತ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ 5 ಎಕರೆ 20 ಗುಂಟೆ ಪ್ರದೇಶವನ್ನು ನಿವೇಶನಕ್ಕಾಗಿ ಮೀಸಲಿಡಲು ಸರ್ಕಾರಕ್ಕೆ ಶಿಫಾರಸ್ಸನ್ನು ಸಹ ಕಳುಹಿಸಲಾಗಿದ್ದು, ಮುಂದಿನ ಕ್ರಮಗಳ ಹಂತದಲ್ಲಿದೆ. ಈ ನಡುವೆ ನಿವೇಶನಕ್ಕಾಗಿ ಕಾಯ್ದಿರಿಸಿರುವ ಸ್ಥಳದಲ್ಲಿಯೇ ಒಂದು ಎಕರೆ ಪ್ರದೇಶವನ್ನು ಸ್ಮಶಾನಕ್ಕಾಗಿ ಕಾಯ್ದಿರಿಸಿ ಆದೇಶ ಹೊರಡಿಸಲಾಗಿದೆ. ಇದನ್ನ ವಿರೋಧಿಸಿ ಈಗಿರುವ ಭೂಮಿಯನ್ನು ನಿವೇಶನಕ್ಕೆ ಮೀಸಲಿಡಬೇಕು, ಸ್ಮಶಾನಕ್ಕೆ ಬೇರೆ ಪರ್ಯಾಯ ಜಾಗದಲ್ಲಿ ಒಂದು ಎಕರೆ ವ್ಯವಸ್ಥೆ ಕಲ್ಪಿಸಬೇಕು ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮೈಸೂರು | ನ.15 ರಿಂದ 25ರವರೆಗೆ ರೈತ, ಕಾರ್ಮಿಕ ವಿರೋಧಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಬಡಗಲಪುರ ನಾಗೇಂದ್ರ

ಪ್ರತಿಭಟನೆಯಲ್ಲಿ ಜಿಲ್ಲಾ ಮುಖಂಡ ಪಿ ಮರಂಕಯ್ಯ, ಬಸಪ್ಪ ನಾಯಕ, ರಾಜ್ಯ ಸಮಿತಿ ಸದಸ್ಯ ನಾಗನಹಳ್ಳಿ ವಿಜೇಂದ್ರ, ತಾಲೂಕು ಕಾರ್ಯದರ್ಶಿ ಮಂಡಕಳ್ಳಿ ಮಹೇಶ್, ತಾಲೂಕು ಅಧ್ಯಕ್ಷ ಅನಂದೂರು ಪ್ರಭಾಕರ ಸೇರಿದಂತೆ ರೈತ ಸಂಘಟನೆಯ ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...