ಮೈಸೂರು | ಅಧಿಕಾರಿಗಳ ಅಮಾನತು; ಅನಾಥವಾದ ಕೃಷಿ ಇಲಾಖೆ

Date:

ರಾಜ್ಯದ ಕೃಷಿ ಸಚಿವರ ವಿರುದ್ಧ ಮಂಡ್ಯ ಜಿಲ್ಲೆಯ ಸಹಾಯಕ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ಕೆ.ಆರ್‌ ನಗರ ತಾಲೂಕಿನ ಇಬ್ಬರು ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಅವರನ್ನು ಬಂಧಿಸಿ, ಅಮಾನತು ಮಾಡಲಾಗಿತ್ತು. ಆ ಅಧಿಕಾರಿಗಳು ಜಾಮೀನಿನ ಮೇಲೆ ಹೊರಬಂದಿದ್ದಾರೆ. ಆದರೆ, ಕೆ.ಆರ್‌ ನಗರ ಕೃಷಿ ಇಲಾಖೆಗೆ ಬೇರಾವುದೇ ಅಧಿಕಾರಿಗಳ ನೇಮಕವಾಗದೆ, ಇಲಾಖೆ ಖಾಲಿ ಉಳಿದಿದೆ.

ಕೆ.ಆರ್‌ ನಗರ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್ ಮತ್ತು ಸುದರ್ಶನ್ ಅವರು ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದರು. ಪ್ರಕರಣ ನಡೆದು 3ರಿಂದ 4 ತಿಂಗಳುಗಳಾಗಿವೆ. ಆದರೆ, ಕೆ.ಆರ್ ನಗರ ಮತ್ತು ಸಾಲಿಗ್ರಾಮ ಅವಳಿ ತಾಲೂಕುಗಳ ಕೃಷಿ ಇಲಾಖೆಯಲ್ಲಿ ಯಾವುದೇ ಅಧಿಕಾರಿಗಳು ಇಲ್ಲದೆ ಕಚೇರಿ ಅನಾಥವಾಗಿದೆ.

ಈ ದೂರಿನ ಹಿಂದೆ ರಾಜಕೀಯ ದುರುದ್ದೇಶವಿದೆಯೇ? ಅಥವಾ ರಾಜಕೀಯ ದ್ವೇಷ ಸಾಧನೆಗಾಗಿ ಅಧಿಕಾರಿಗಳ ಮೂಲಕ ಪತ್ರ ಬರೆಸಿದ್ದಾರೆಯೇ ಅಥವಾ ಕೃಷಿ ಇಲಾಖೆಯಲ್ಲಿರುವ ಅಧಿಕಾರಿಗಳ ನಡುವಿನ ವೈಷಮ್ಯ ಇದಕ್ಕೆ ಪ್ರೇರಣೆಯಾಗಿರಬಹುದೇ? ಎಂಬ ವಿಚಾರಗಳು ಬಹಿರಂಗವಾಗಬೇಕಿದೆ. ಆದರೆ, ಅಧಿಕಾರಿಗಳ ಹೆಸರಿನಲ್ಲಿ ಪತ್ರ ಬರೆಸಿದವರು ಯಾರು ಎನ್ನುವುದು ಈವರೆಗೆ ರಹಸ್ಯವಾಗಿಯೇ ಉಳಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | 19 ವರ್ಷಗಳೇ ಕಳೆದರೂ ಬಡಾವಣೆಗಿಲ್ಲ ಮೂಲ ಸೌಕರ್ಯ

ಮೈಸೂರಿನಿಂದ ಆಗೊಮ್ಮೆ ಈಗೊಮ್ಮೆ ಬಂದು ಹೋಗುವ ಕೃಷಿ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ತಾಲೂಕಿನಲ್ಲಿ ಇಬ್ಬರು ಅಧಿಕಾರಿಗಳು ಅಮಾನತುಗೊಂಡ ನಂತರ ರೈತರ ಕೆಲಸ ಕಾರ್ಯಗಳಿಗೆ ಹಿನ್ನಡೆಯಾಗಿದ್ದು, ಸರ್ಕಾರ ಕೂಡಲೇ ಖಾಯಂ ಅಧಿಕಾರಿಗಳ ನೇಮಕಕ್ಕೆ ಮುಂದಾಗಬೇಕು” ಎಂದು ಈ ಭಾಗದ ರೈತರು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...