ಮೈಸೂರು ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲೆಯ ಎಲ್ಲ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಅವರು ಸೂಚನೆ ನೀಡಿದರು.
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಬಳಿಕ, ಜಿಲ್ಲಾಧಿಕಾರಿಯವರು ತಮ್ಮ ಕಚೇರಿಯಲ್ಲಿ ಅಧಿಕಾರಿಗಳನ್ನು ಭೇಟಿಯಾಗಿ ಚುನಾವಣೆಯನ್ನು ಸುಗಮವಾಗಿ ನಡೆಸಲು ಸಲಹೆಗಳನ್ನು ನೀಡಿದರು.
“ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಮತಗಟ್ಟೆಗಳಿಗೆ ಭೇಟಿ ನೀಡಿ ಅಲ್ಲಿ ವಿದ್ಯುತ್, ಉತ್ತಮ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಕನಿಷ್ಟ ಮೂಲ ಸೌಲಭ್ಯಗಳನ್ನು ಒದಗಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಪತ್ರಿಕಾ ಭವನ ನವೀಕರಣ ಕಾಮಗಾರಿಗೆ ಚಾಲನೆ; ಪಾಲಿಕೆಯಿಂದ ಅಗತ್ಯ ಅನುದಾನದ ಭರವಸೆ
“ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಫ್ಲೆಕ್ಸ್ ಮತ್ತು ಬ್ಯಾನರ್‌ಗಳ ಬಳಕೆಯನ್ನು ನಿರ್ಬಂಧಿಸಲಾಗಿದೆ. ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕೆಲಸ ಮಾಡಬೇಕು. ಎಲ್ಲ ಚುನಾವಣಾ ಚೆಕ್ ಪೋಸ್ಟ್‌ಗಳಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಬೇಕು” ಎಂದು ಹೇಳಿದರು.




