ಮೈಸೂರು | ಅಕ್ರಮ ಪ್ರಶ್ನಿಸಿದ ರೈತ; ಬೂಟಿನಲ್ಲಿ ಹೊಡೆಯಲು ಮುಂದಾದ ತಂಬಾಕು ಮಂಡಳಿ ಅಧಿಕಾರಿ

Date:

ತಂಬಾಕು ಹರಾಜು ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಪ್ರಶ್ನೆ ಮಾಡಿದ್ದಕ್ಕೆ ರೈತನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚಿಲ್ಕುಂದದಲ್ಲಿ ನಡೆದಿದೆ.

ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದ ಕೃಷ್ಣಕುಮಾರ್ ಅವರು ತಂಬಾಕು ಹರಾಜು ಮಾರುಕಟ್ಟೆಯ ಸೂಪರಿಂಟೆಂಡೆಂಟ್ ಬ್ರಿಜ್ ಭೂಷಣ್ ಅವರಿಗೆ ಕರೆ ಮಾಡಿ, “ನಮ್ಮ ಕುಟುಂಬಕ್ಕೆ ಸೇರಿದ ಬ್ಯಾರನ್ ಅನ್‌ಫಿ‌ಟ್‌ ಇದ್ದು, ಅದನ್ನು ಮೂರು ವರ್ಷಗಳಿಂದ ಹೇಗೆ ರಿನೀವಲ್ ಮಾಡುತ್ತಿದ್ದೀರಿ. ಕ್ಷೇತ್ರ ಸಹಾಯಕ ಪ್ರಮೋದ್ ಸರಿಯಾಗಿ ಪರಿಶೀಲನೆ ಮಾಡದೆ ಹಣ ಪಡೆದು ಪ್ರತಿ ವರ್ಷ ರಿನೀವಲ್ ಮಾಡುತ್ತಿದ್ದಾರೆ. ಈ ಕುರಿತು ನಿಮ್ಮ ಗಮನಕ್ಕೆ ಇಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ರೈತನ ಪ್ರಶ್ನೆಗೆ ಕುಪಿತಗೊಂಡ ಬ್ರಿಜ್ ಭೂಷಣ್, ಶನಿವಾರ ಬೆಳಿಗ್ಗೆ ಕೊತ್ತೆಗಾಲದ ಕೃಷ್ಣಕುಮಾರ್ ಮನೆ ಬಳಿ ಕ್ಷೇತ್ರ ಸಹಾಯಕ ಪ್ರಮೋದ್ ಎಂಬುವವರನ್ನು ಕಳುಹಿಸಿ ರೈತನನ್ನು ಅಡ್ಡಗಟ್ಟಿಸಿದ್ದು, ಬ್ರಿಜ್‌ ಭೂಷಣ್‌ ಸೇರಿದಂತೆ ಫೀಲ್ಡ್ ಅಸಿಸ್ಟೆಂಟ್ ಸಮೇತರಾಗಿ ಬಂದು ಅವಾಚ್ಯವಾಗಿ ನಿಂದಿಸಿದ್ದಾರೆ. ಅಲ್ಲದೆ, ಅದನ್ನು ಕೇಳಲು ನೀನು ಯಾರು? ನಿನ್ನನ್ನು ಸುಮ್ಮನೆ ಬಿಡುವುದಿಲ್ಲವೆಂದು ಧಮ್ಕಿ ಹಾಕಿ ಕಾಲಿನ ಬೂಟು ಕಳಚಿಕೊಂಡು ಹೊಡೆಯಲು ಮುಂದಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಮಹರ್ಷಿ ವಾಲ್ಮೀಕಿ ಎಲ್ಲರಿಗೂ ಆದರಣೀಯ ಪುರುಷ: ಎಚ್ ಸಿ ಮಹದೇವಪ್ಪ

ಬ್ರಿಜ್ ಭೂಷಣ್ ಒಬ್ಬ ಅಧಿಕಾರಿಯಾಗಿ ಕರ್ತವ್ಯಲೋಪ ಎಸಗಿದ್ದಾರೆ; ತಪ್ಪನ್ನು ಪ್ರಶ್ನಿಸಿದ ರೈತನ ಮೇಲೆ ಹಲ್ಲೆಗೆ ಮುಂದಾಗಿರುವುದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...