ಮೈಸೂರು | ರಂಗಭೂಮಿ ಶಿಕ್ಷಣದ ದಿಕ್ಕು ಬದಲಿಸುವ ಶಕ್ತಿ: ಪ್ರೊ ವಿಜಯಲಕ್ಷ್ಮಿ

Date:

ಮೈಸೂರು ನಗರದ ಕಲಾಮಂದಿರದ, ಕಿರುರಂಗಮಂದಿರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ‘ನಿರಂತರ ರಂಗ ಉತ್ಸವ’ದಲ್ಲಿ ದೇವಾನಂದ್ ವರಪ್ರಸಾದ್ ಹಾಗೂ ನಿರಂತರದ ಗೆಳೆಯರಿಂದ ಮಂಟೇಸ್ವಾಮಿ ಕಾವ್ಯ ಮತ್ತು ಇತರ ಜನಪದ ಗೀತೆಗಳ ಸಂಗೀತ ಕಾರ್ಯಕ್ರಮ ಪ್ರಸ್ತುತಗೊಂಡು, ಪ್ರೇಕ್ಷಕರ ಗಮನ ಸೆಳೆಯಿತು.

ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ‘ನಮ್ಮ ಊರಿನ ರಸಿಕರು’ ಸೇರಿದಂತೆ ಇತರೆ ಕೃತಿಗಳ ಆಧಾರಿತ ನಾಟಕ ‘ಗೊರೂರು’ ನ್ನು ನಿರಂತರ ರಂಗ ತಂಡ ಪ್ರದರ್ಶಿಸಿತು. ಮಂಜುನಾಥ್ ಬಡಿಗೇರ್ ಅವರ ನಿರ್ದೇಶನ ಹಾಗೂ ದಿಗ್ವಿಜಯ ಹೆಗ್ಗೋಡು ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಈ ನಾಟಕ ಸಾಹಿತ್ಯ ಮತ್ತು ರಂಗಭೂಮಿಯ ಒಗ್ಗೂಡಿಕೆಯನ್ನು ಪರಿಣಾಮಕಾರಿಯಾಗಿ ನಿರೂಪಿಸಿ, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

ಮಹಾರಾಜ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಪ್ರೊ. ವಿಜಯಲಕ್ಷ್ಮಿ ಮಾತನಾಡಿ, ರಂಗಭೂಮಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಮಾತ್ರವಲ್ಲದೆ, ಸಾಮಾಜಿಕ ಜವಾಬ್ದಾರಿ ಮತ್ತು ಜಾಗೃತ ಪ್ರಜ್ಞೆ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ದಿಕ್ಕು ತಪ್ಪುತ್ತಿರುವ ಸಂದರ್ಭದಲ್ಲಿ, ರಂಗಭೂಮಿ ಶಿಕ್ಷಣದ ಕ್ರಮವನ್ನು ಬದಲಿಸುವ ಶಕ್ತಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪದವಿಗೆ ಪ್ರವೇಶಿಸುವ ವಿದ್ಯಾರ್ಥಿಗಳು ಗೊಂದಲಭರಿತ ಮನಸ್ಥಿತಿಯಲ್ಲಿ ಕಾಲೇಜಿಗೆ ಬರುತ್ತಿದ್ದು, ಪರೀಕ್ಷೆಗಳ ಸಮಯದಲ್ಲೂ ವಿದ್ಯಾರ್ಥಿಗಳ ಗೈರುಹಾಜರಾತಿ ಹೆಚ್ಚುತ್ತಿರುವುದು ಚಿಂತಾಜನಕವಾಗಿದೆ. ಇಂತಹ ಸಂದರ್ಭದಲ್ಲಿ ನಿರಂತರದಂತಹ ಸಂಘಟನೆಗಳು ನಡೆಸುತ್ತಿರುವ ಸಹಜರಂಗ ತರಬೇತಿ ಶಿಬಿರಗಳು, ಕಾವ್ಯ ಓದು, ಸಾಹಿತ್ಯ ಹಾಗೂ ನಾಟಕಗಳ ಅಧ್ಯಯನದ ಮೂಲಕ ವಿದ್ಯಾರ್ಥಿಗಳನ್ನು ಸರಿಯಾದ ದಿಕ್ಕಿನತ್ತ ಕರೆದೊಯ್ಯುತ್ತಿವೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿಗೆ ಚಾರ್ ಸೌ ಪಾರ್ ಗದ್ದುಗೆ ಹಿಡಿಯುವ ಸಂಖ್ಯೆಯಲ್ಲ; ಸಂವಿಧಾನ ಬದಲಾಯಿಸಲು ಬೇಕಿರುವ ಸಂಖ್ಯೆ: ನೂರ್ ಶ್ರೀಧರ್

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, ಸಾಮಾಜಿಕ ಮಾಧ್ಯಮಗಳ ಅತಿಯಾದ ಬಳಕೆಯಿಂದ ಯುವಕರು ಸತ್ಯ–ಮಿತ್ಯದ ನಡುವಿನ ಗೊಂದಲದಲ್ಲಿ ಸಿಲುಕುತ್ತಿರುವ ಈ ಕಾಲಘಟ್ಟದಲ್ಲಿ, ಜನಪರ ಚಳುವಳಿಯ ಒಳಧಾರೆಯನ್ನು ಉಳಿಸಿಕೊಂಡು ಬಂದಿರುವ ನಿರಂತರ ರಂಗ ತಂಡದ ಕಾರ್ಯ ಶ್ಲಾಘನೀಯವಾಗಿದೆ ಎಂದರು. ಇಂತಹ ರಂಗೋತ್ಸವಗಳು ನಿರಂತರವಾಗಿ ನಡೆಯಬೇಕು ಎಂದರು.

ಈ ಸುದ್ದಿ ಓದಿದ್ದೀರಾ? ಎಸ್.ಐ.ಆರ್: ಮೌನವಾಗಿ ಬೆನ್ನಿಗೆ ಇರಿದ ಸರ್ಕಾರ: ಚಿಂತಕ ಶಿವಸುಂದರ್

ನಾಟಕೋತ್ಸವದಲ್ಲಿ ದಾವಣಗೆರೆಯ ವೃತ್ತಿ ರಂಗಭೂಮಿಯ ನಿರ್ದೇಶಕರಾದ ಮಲ್ಲಿಕಾರ್ಜುನ ಕಡಕೋಳ, ಬರಹಗಾರ ರಾಜಪ್ಪ ದಳವಾಯಿ, ಖ್ಯಾತ ಹಾಡುಗಾರ, ನಟ ನವೀನ್ ಸಜ್ಜು, ಶ್ರೀನಿವಾಸ್ ಪಾಲಳ್ಳಿ, ಪ್ರಸಾದ್ ಕುಂದೂರು, ಲೋಕೇಶ್ ಮೊಸಳೆ, ದೇವಾನಂದ್ ವರಪ್ರಸಾದ್, ಸುಗುಣ ಎಂ.ಎಂ. ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...