ಮೈಸೂರು | ಕಳವು ಪ್ರಕರಣ; ಸೊತ್ತು ಸಹಿತ ಆರೋಪಿಯ ಬಂಧನ

Date:

ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಯವರು ಠಾಣೆಯಲ್ಲಿ ದಾಖಲಾಗಿದ್ದ ಕಳುವು ಪ್ರಕರಣಗಳಲ್ಲಿ ಮಾಲು ಸಹಿತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರು ನಗರದ ಶ್ರೀರಾಂಪುರ ಚೆಕ್‌ಪೋಸ್ಟ್ ಬಳಿ ಗುಮಾನಿ ಮೇರೆಗೆ ವಾಹನಗಳನ್ನು ಚೆಕ್ ಮಾಡುತ್ತಿದ್ದಾಗ ಒಬ್ಬ ಸ್ಕೂಟರ್ ಸವಾರ ವಾಪಸ್ ತಿರುಗಿಸಿಕೊಂಡು ಹೋಗುತ್ತಿದ್ದವನ ಮೇಲೆ ಅನುಮಾನ ಬಂದು ಆತನನ್ನು ವಶಕ್ಕೆ ಪಡೆದು ಸ್ಕೂಟರ್‌ ಪರಿಶೀಲಿಸಿದಾಗ ಚಿನ್ನಾಭರಣಗಳು ಮತ್ತು ಬೆಳ್ಳಿ ಪದಾರ್ಥಗಳು ಇರುವುದು ಕಂಡು ಬಂದಿವೆ.

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ, ಆರೋಪಿಯು ಮತ್ತೊಬ್ಬ ಸಹಚರನೊಂದಿಗೆ ಸೇರಿ ದಿನಾಂಕ ನ.10ರಂದು ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿಯಲ್ಲಿ ಕಳವು ಮಾಡಿರುವ ಆಭರಣಗಳಾಗಿರುವುದಾಗಿ ತಿಳಿಸಿದ್ದಾನೆ. ಆರೋಪಿಯಿಂದ ಒಟ್ಟು 36,22,000 ರೂಪಾಯಿ ಮೌಲ್ಯದ ಸುಮಾರು 516 ಗ್ರಾಂ ತೂಕದ ಚಿನ್ನಾಭರಣಗಳು, 26ಗ್ರಾಂ ತೂಕದ ಬೆಳ್ಳಿ ಪದಾರ್ಥಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 11 16 at 12.40.42 PM

ಈ ಬಗ್ಗೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿರುತ್ತಾರೆ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಮತ್ತು ಮಾಲು ಪತ್ತೆ ಕಾರ್ಯವನ್ನು ಮುಂದುವರಿಸಿರುತ್ತಾರೆ.

ಪತ್ತೆ ಕಾರ್ಯಚರಣೆಯನ್ನು ಮೈಸೂರು ನಗರದ ಡಿಸಿಪಿ ಮುತ್ತುರಾಜ್ ಅಪರಾಧ ಮತ್ತು ಸಂಚಾರ ವಿಭಾಗ ಮಾರ್ಗದರ್ಶನದಲ್ಲಿ, ಕೃಷ್ಣರಾಜ ವಿಭಾಗದ ಎಸಿಪಿ ರಮೇಶ್‌ಕುಮಾರ್ ಹೆಚ್ ಬಿ ನೇತೃತ್ವದಲ್ಲಿ, ಕುವೆಂಪುನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಅರುಣ್ ಎಲ್ ಮತ್ತು ಪಿಎಸ್ಐ ಗೋಪಾಲ್ ಎಸ್ ಪಿ ಮದನ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಆನಂದ್ ವಿ, ಮಹೇಶ್ವರ್, ಮಂಜುನಾಥ್ ಕೆ ಟಿ, ಮಂಜುನಾಥ್ ಎಂ ಪಿ, ಯಶವಂತ್, ಮಂಜು ಹೆಚ್ ವಿ. ಹಜರತ್, ಸುರೇಶ್, ರವಿ ಮತ್ತು ನಾಗೇಶ್ ಕೈಗೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...