ಮೈಸೂರು | ಉದಯಗಿರಿ ಕಲ್ಲು ತೂರಾಟ ಪ್ರಕರಣ; 8 ಮಂದಿ ಬಂಧನ

Date:

ಮೈಸೂರಿನ ಉದಯಗಿರಿಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಈವರೆಗೆ 8 ಮಂದಿಯನ್ನು ಬಂಧಿಸಲಾಗಿದೆ. ವಿಚಾರಣೆಗೆ ಒಳಮಡಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಬಂಧಿತರನ್ನು ಸುಹೇಲ್, ರಾಹಿಲ್, ಅಯಾನ್, ಸೈಯದ್ ಸಾದಿಕ್, ಶೋಹೇಬ್ ಪಾಷಾ, ಸಾದಿಕ್ ಪಾಷಾ, ಅರ್ಬಾಝ್ ಷರೀಫ್, ಇಜಾಝ್‌ ಎಂದು ಹೆಸರಿನಲಾಗಿದೆ. ಸಿಸಿ ಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದ ದೃಶ್ಯಗಳನ್ನು ಆಧರಿಸಿ, ಈ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಅಲ್ಲದೆ, ಘಟನೆಯಲ್ಲಿ ಭಾಗಿಯಾಗಿದ್ದ 60 ಜನರ ಗುರುತು ಪತ್ತೆ ಮಾಡಲಾಗಿದೆ. ಈವರೆಗೆ 15 ಮಂದಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ನಡೆದಾಗ ಆ ಸ್ಥಳದಲ್ಲಿ ಇದ್ದ ಮೊಬೈಲ್‌ಗಳ ಸಂಖ್ಯೆಗಳನ್ನು ಟವರ್ ಸಿಗ್ನಲ್ ಮೂಲಕ ಸಿಸಿಬಿ ತಾಂತ್ರಿಕ ತಂಡ ಪತ್ತೆ ಮಾಡುತ್ತಿದೆ ಎಂದು ತಿಳಿದುಬಂದಿದೆ.

ಸೋಮವಾರ ರಾತ್ರಿ, ಮೈಸೂರಿನ ಉದಯಗಿರಿ ನಿವಾಸಿ ಸುರೇಶ್ ಎಂಬಾತ ಪೋಸ್ಟರ್‌ವೊಂದನ್ನು ಹಂಚಿಕೊಂಡಿದ್ದ, ಅದರಲ್ಲಿ ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಹಾಗೂ ಅರವಿಂದ ಕೇಜ್ರಿವಾಲ್ ಅವರನ್ನು ಅರೆನಗ್ನ ರೀತಿಯಲ್ಲಿ ಚಿತ್ರಿಸಿ, ಅವರ ತೊಡೆಮೇಲೆ ವ್ಯಕ್ತಿಯೊಬ್ಬ ನಮಾಜ್ ಮಾಡುತ್ತಿರುವಂತೆ ಚಿತ್ರಿಸಲಾಗಿತ್ತು. ಜೊತೆಗೆ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಕುರಿತು ಅವಹೇನಾಕಾರಿ ಸಾಲುಗಳನ್ನು ಬರೆಯಲಾಗಿತ್ತು.

ಆ ಪೋಸ್ಟ್‌ ವೈರಲ್ ಆದ ಬಳಿಕ, ಸೋಮವಾರ ರಾತ್ರಿ, ಮುಸ್ಲಿಂ ಸಮುದಾಯ ಮುಖಂಡರು ಉದಯಗಿರಿ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಆರೋಪಿ ಸುರೇಶ್‌ನನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದರು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಯತ್ನಿಸಿದಾಗ, ಕಲ್ಲು ತೂರಾಟ ನಡೆದಿದೆ. ಬಳಿಕ, ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿದ್ದರು. ಆರೋಪಿಯನ್ನು ಬಂಧಿಸುವುದಾಗಿ ಭರವಸೆ ನೀಡಿದ ಬಳಿಕ, ಪ್ರತಿಭಟನೆ ಸ್ಥಗಿತಗೊಂಡಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತ್ತು. ಮಂಗಳವಾರ ಅರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...