ಮೈಸೂರು | ವಕ್ಫ್ ತಿದ್ದುಪಡಿ ಕಾಯ್ದೆ: ಸುಪ್ರೀಂ ತೀರ್ಪಿನ ಕುರಿತು ಎಸ್‌ಡಿಪಿಐ ಪ್ರತಿಕ್ರಿಯೆ

Date:

ವಕ್ಫ್ ತಿದ್ದುಪಡಿ ಕಾಯ್ದೆ 2025 ಕುರಿತು ಸರ್ವೋಚ್ಚ ನ್ಯಾಯಾಲಯ ನೀಡಿದ ಮಧ್ಯಂತರ ತೀರ್ಪನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸ್ವಾಗತಿಸಿದೆ.

ಸೆಪ್ಟೆಂಬರ್ 15ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಈ ಪಿಟಿಷನ್‌ (ನಂ.445)‌ಗೆ ತಾವು ಅರ್ಜಿದಾರರಾಗಿದ್ದು, ಮೈಸೂರು ಮೂಲದ ಅಡ್ವೊಕೆಟ್ ಮೊಹಮ್ಮದ್ ಫೈಝಾನ್ ಮಜೀದ್ ಹಾಗೂ ದೆಹಲಿ ಮೂಲದ ಅಡ್ವೊಕೆಟ್‌ಗಳಾದ ಮೊಹಮ್ಮದ್ ಅಶಾಬ್ ಮತ್ತು ಅಸ್ಲಂ ಅಹ್ಮದ್ ಅವರ ಮಾರ್ಗದರ್ಶನದಲ್ಲಿ ಅರ್ಜಿ ಸಿದ್ಧಪಡಿಸಿದ್ದಾಗಿ ತಿಳಿಸಿದ್ದಾರೆ.

ಅವರು, ವಖ್ಫ್ ಆಸ್ತಿಗಳನ್ನು ಕಬಳಿಸುವುದನ್ನು ತಡೆಯುವ ಹಾಗೂ ಐದು ವರ್ಷ ಇಸ್ಲಾಂ ಧರ್ಮವನ್ನು ಅನುಸರಿಸಿರುವುದರ ಶರತ್ತುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದನ್ನು ಸ್ವಾಗತಿಸಿದರೂ, ಹಲವು ಗಂಭೀರ ಆಕ್ಷೇಪಗಳನ್ನು ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಿಮಿಟೇಶನ್ ಆ್ಯಕ್ಟ್ ಅನ್ನು ವಖ್ಫ್‌ಗೆ ಅನ್ವಯಿಸುವುದು, ಬಳಕೆ ಇಲ್ಲದಿದ್ದರೆ ವಕ್ಫ್ ರದ್ದು ಮಾಡುವ ಪ್ರಾವಧಾನ,‌ ನಿಗದಿತ ಪ್ರದೇಶಗಳಲ್ಲಿ (Scheduled Areas) ವಕ್ಫ್ ರಚನೆಗೆ ನಿರ್ಬಂಧ,‌ ಇವುಗಳೆಲ್ಲವೂ ವಕ್ಫ್ ಅಸ್ತಿತ್ವಕ್ಕೆ ಪೆಟ್ಟು ತರುತ್ತವೆ ಎಂದು ಅವರು ತಿಳಿಸಿದ್ದಾರೆ.‌ ಇದೇ ವೇಳೆ, ವಖ್ಫ್ ಮಂಡಳಿ ಹಾಗೂ ರಾಷ್ಟ್ರೀಯ ವಕ್ಫ್ ಕೌನ್ಸಿಲ್‌ನಲ್ಲಿ ಮುಸ್ಲಿಮೇತರರನ್ನು ಸೇರಿಸುವುದನ್ನು ನ್ಯಾಯಾಲಯ ತಡೆಗಟ್ಟದಿರುವುದನ್ನು ನಿರಾಶಾಜನಕವೆಂದು ಅಬ್ದುಲ್ ಮಜೀದ್ ಹೇಳಿದ್ದಾರೆ. ವಕ್ಫ್ ಪ್ರತಿನಿಧಿತ್ವ ಸಂಪೂರ್ಣವಾಗಿ ಮುಸ್ಲಿಂ ಸಮುದಾಯದಲ್ಲಿಯೇ ಉಳಿಯಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೈಸೂರು | ‘ಸಮ್ಮಿಲನ-2025’ ರ ಸಂವಾದ

“ವಕ್ಫ್ ಒಂದು ಸಾಮೂಹಿಕ ದಾನಧರ್ಮವಾಗಿದ್ದು, ಯಾವುದೇ ಧರ್ಮಕ್ಕೆ ಸೇರಿದವರಾದರೂ ಅಲ್ಲಾಹನ ಹೆಸರಿನಲ್ಲಿ ವಕ್ಫ್ ಮಾಡಬಹುದಾಗಿದೆ. ಆದರೆ ಕಾಯ್ದೆಯ ಕೆಲ ಅಂಶಗಳು ಸಮುದಾಯದ ಧಾರ್ಮಿಕ ಹಕ್ಕುಗಳನ್ನು ಹಾಳುಮಾಡುವ ಉದ್ದೇಶ ಹೊಂದಿವೆ” ಎಂದು ಆರೋಪಿಸಿದ್ದಾರೆ.

ಸಮುದಾಯದ ಧಾರ್ಮಿಕ ಹಕ್ಕುಗಳ ರಕ್ಷಣೆಗೆ ಕಾನೂನು, ಸಾಮಾಜಿಕ ಹಾಗೂ ಪ್ರಜಾಪ್ರಭುತ್ವ ಹೋರಾಟವನ್ನು ಮುಂದುವರಿಸುವುದಾಗಿ ಎಸ್‌ಡಿಪಿಐ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...