ಮೈಸೂರು | ಮಹಿಳೆಯರು ಮೂಢನಂಬಿಕೆಗೆ ಒಳಗಾಗದೆ, ವೈಚಾರಿಕ ಮನೋಭಾವ ಬೆಳಿಸಿಕೊಳ್ಳಬೇಕು: ಸಚಿವ ಹೆಚ್‌ ಸಿ ಮಹದೇವಪ್ಪ

Date:

ಮಹಿಳೆಯರು ಮೂಢನಂಬಿಕೆಗೆ ಒಳಗಾಗದೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಸಲಹೆ ನೀಡಿದರು.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯಿಂದ ನಗರದ ಜೆ ಕೆ ಮೈದಾನದಲ್ಲಿ ಆಯೋಜಿಸಿದ್ದ ಮಹಿಳಾ ದಸರಾ ಉದ್ಘಾಟಿಸಿ ಮಾತನಾಡಿ, “ಆಧುನಿಕ ಜಗತ್ತಿನಲ್ಲಿ ಬದುಕು ಕಂಡುಕೊಂಡಿದ್ದರೂ ಕೂಡ ಮಹಿಳೆಯರು ಹೆಚ್ಚಾಗಿ ಮೂಢನಂಬಿಕೆಗೆ ಮಾರುಹೋಗುತಿದ್ದು, ಮಾನಸಿಕ ದೃಢತೆ ಮಹಿಳೆಯರಲ್ಲಿ ಕ್ಷೀಣವಾಗುತ್ತಿದೆ. ಹಾಗಾಗದೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು” ಎಂದು ಹೇಳಿದರು.

ಮಹಿಳಾ ದಸರಾ 1

“ಇಂದು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿ ಮಹಿಳಾ ಹಬ್ಬಕ್ಕೆ ಕಳೆ ತಂದಿರುವುದು ಸಂತಸವಾಗಿದೆ. ಮಹಿಳೆಯರು ಯಾರಮೇಲೂ ಅವಲಂಬಿತರಾಗದೆ ಸರ್ಕಾರದ ಯೋಜನೆಗಳು ಹಾಗೂ ಕಡ್ಡಾಯ ಶಿಕ್ಷಣದ ಮೂಲಕ ಸ್ವಾವಲಂಬಿಯಾಗಿ ಬದುಕು ನಡೆಸುವಲ್ಲಿ ಸಫಲರಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ವಾವಲಂಬನೆ ಜೀವನ ನಡೆಸುವ ಅನೇಕ ಮಹಿಳೆಯರು ಇಂದು ಕರಕುಶಲ ಪ್ರದರ್ಶನ ಮತ್ತು ಅಳಿವಿನ ಅಂಚಿನಲ್ಲಿರುವ ಗುಡಿ ಕೈಗಾರಿಕೆಗಳ ಉಳಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಅಂತಹವರ ಜೀವನ ಸುಖಕರವಾಗಿ ಸಾಗಬೇಕು. ಮೂಢನಂಬಿಕೆಯನ್ನು ಅನುಸರಿಸುವಲ್ಲಿ ಮಹಿಳೆಯರೇ ಹೆಚ್ಚಾಗಿರುವುದರಿಂದ ಇಂದು ಮೂಢನಂಬಿಕೆಯ ಹೆಸರಿನಲ್ಲಿ ಎಷ್ಟೋ ಹೆಣ್ಣುಮಕ್ಕಳು ಶೋಷಣೆಗೆ ಒಳಗಾಗುತ್ತಿದ್ದಾರೆ. ಮೊದಲು ಸುಶಿಕ್ಷಿತರಾಗಿ ವೈಜ್ಞಾನಿಕವಾಗಿ ವಿಚಾರಣೆ, ಚಿಂತನೆ ನಡೆಸಬೇಕು” ಎಂದು ಸಲಹೆ ನೀಡಿದರು.

ಮಹಿಳಾ ದಸರಾ 3

“ಮೂಢನಂಬಿಕೆಗೆ ಹೆಣ್ಣುಮಕ್ಕಳು ಬಲಿಯಾಗಬಾರದೆಂದರೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಹಿಂದು ಬಿಲ್‌ ಕೋಡ್ ಬಗ್ಗೆ ತಿಳಿದುಕೊಳ್ಳಬೇಕು. ಮಹಿಳೆಯರು ಮಾಟ ಮಂತ್ರ, ಯಂತ್ರ ತಂತ್ರ, ಶಾಸ್ತ್ರಗಳ ಮೊರೆ ಹೋಗುವುದನ್ನು ಬಿಟ್ಟು, ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಮುಂದೆ ಬಂದು ಸ್ವಾವಲಂಬಿ ಜೀವನ ನಡೆಸಬೇಕು” ಎಂದರು.

“ಮಹಿಳೆಯರ ಶಿಕ್ಷಣಕ್ಕಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅನೇಕ ಕೆಲಸಗಳನ್ನು ಮಾಡಿದ್ದಾರೆ. 17ನೇ ಶತಮಾನದಲ್ಲಿ ಬಸವಣ್ಣನವರು ಲಿಂಗ ತಾರತಮ್ಯದ ವಿರುದ್ಧ ಹೋರಾಡಿ ಸ್ವಂತ ಮನೆ ಬಿಟ್ಟು ಹೊರ ನಡೆದ ರೀತಿಯಾಗಿ ಹಾಗೂ ಮಹಿಳೆಯರ ಸಮಾನತೆಗಾಗಿ ತಮ್ಮ ಕಾನೂನು ಮಂತ್ರಿ ಪದವಿಯನ್ನೇ ತ್ಯಾಗ ಮಾಡಿದ ಡಾ ಬಿ ಆರ್ ಅಂಬೇಡ್ಕರ್ ಅವರನ್ನು ಈ ಸಮಯದಲ್ಲಿ ನೆನೆಯಬೇಕು” ಎಂದರು.

ಮಹಿಳಾ ದಸರಾ 4

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಉಪಾಧ್ಯಕ್ಷೆ ಡಾ ಪುಷ್ಪ ಅಮರನಾಥ್ ಮಾತನಾಡಿ, “ಕರ್ನಾಟಕದಲ್ಲಿ ಮಹಿಳೆಯರಿಗೆ ವಿಶೇಷವಾದ ಶಕ್ತಿಯಿದ್ದು, ಈ ಬಾರಿಯ ಸುಭದ್ರ ಸರ್ಕಾರದಲ್ಲಿ ನವರಾತ್ರಿಯನ್ನು ಆಚರಿಸುತ್ತಿದ್ದೇವೆ. ಮಹಿಳೆ ಮನಸ್ಸು ಮಾಡಿದರೆ ಏನನ್ನಾದರು ಸಾಧಿಸಬಹುದು. ಇಂದು ನಾನಾ ಕ್ಷೇತ್ರದಲ್ಲಿ ಮಹಿಳಾ ಮಣಿಗಳು ಕಾರ್ಯ ನಿರ್ವಹಿಸುತ್ತಿರುವುದನ್ನು ನೋಡಬಹುದು. ನಮ್ಮ ಸರ್ಕಾರ ಮಹಿಳೆಯರ ಏಳಿಗೆಯನ್ನು ಬಯಸುವ ಸರ್ಕಾರವಾಗಿದ್ದು, ಈ ದೃಷ್ಟಿಯಲ್ಲಿ ಪಂಚಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ದಾರಿ ತೋರಿಸಿದೆ” ಎಂದರು.

“ಇಂದು ನಾರಿಶಕ್ತಿ, ಗಂಡಿಗಿಂತಲೂ ಒಂದು ಹೆಜ್ಜೆ ಮುಂದಿದೆ. ಮೊದಲು ಮನುಷ್ಯ ನಂತರ ಧರ್ಮ. ಧರ್ಮದ ಹೆಸರಿನಲ್ಲಿ ಮಹಿಳೆಯರು ಮೂಢನಂಬಿಕೆಗೆ ಒಳಗಾಗಬಾರದು. ಕುಟುಂಬ ಮತ್ತು ಸಮಾಜವನ್ನು ಸರಿದಾರಿಯಲ್ಲಿ ಸಾಮಾಜಿಕ ಅಂಶಗಳಾದ ಆರ್ಥಿಕ, ಶೈಕ್ಷಣಿಕ, ಆರೋಗ್ಯ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಮುಂದೆ ಬಂದು ಸರ್ವತೋಮುಖ ಅಭಿವೃದ್ಧಿಯತ್ತ ಮುಖ ಮಾಡಬೇಕು” ಎಂದರು.

ಮಹಿಳಾ ದಸರಾ 2

ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌದರಿ ಮಾತನಾಡಿ, “ಮೌಢ್ಯ, ಅಂಧಕಾರವನ್ನು ತೊಲಗಿಸುವಲ್ಲಿ ಮಹಿಳೆಯರು ಬದಲಾಗಬೇಕು. ಅಂಬೇಡ್ಕರ್ ಅವರ ಆಶಯದಂತೆ ಮಹಿಳೆಯರು ಶಿಕ್ಷಣ, ಸಂಘಟನೆ ಹೋರಾಟದ ಮಂತ್ರಗಳನ್ನು ಮೈಗೂಡಿಸಿಕೊಳ್ಳಬೇಕು. ಮಹಿಳೆಯರಿಗೆ ಶಿಕ್ಷಣದ ಅವಶ್ಯಕತೆ ಇದೆ. ನಮ್ಮ ಹಕ್ಕುಗಳನ್ನು ನಾವು ಪಡೆದು ಕೊಳ್ಳಬೇಕು. ಹೆಣ್ಣಿನ ಸ್ವರೂಪವೇ ದಸರಾ. ಹೆಣ್ಣು ಅಂದರೆ ಶಕ್ತಿ, ಶಾಂತಿ, ನೆಮ್ಮದಿ, ಸಹನಾ ಶೀಲತೆ, ಸಮೃದ್ಧಿಯ ಪ್ರತಿರೂಪ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಭಾರೀ ಮಳೆಗೆ ಏಕಾಏಕಿ ಕುಸಿದ ಮನೆ; ಮಣ್ಣಿನಡಿ ಸಿಲುಕಿದ್ದ ಮ್ಯರಾಥಾನ್‌ ಓಟಗಾರನ ರಕ್ಷಣೆ

ಮೇಳದಲ್ಲಿ ಚಾಮುಂಡೇಶ್ವರಿ ಒಕ್ಕೂಟ, ಸಿರಿಧಾನ್ಯ ಮಾರಾಟ ಕೇಂದ್ರ, ಕೊಲ್ಲಾಪುರದಮ್ಮ ಸ್ತ್ರೀಶಕ್ತಿ ಸ್ವಹಾಯ ಸಂಘ, ಅನ್ನಪೂರ್ಣೇಶ್ವರಿ ಸ್ತ್ರೀಶಕ್ತಿ ಕೇಂದ್ರ ಸೇರಿದಂತೆ 30ಕ್ಕೂ ಹೆಚ್ಚು ಮಳಿಗೆಗಳು, ಸೀರೆ ಮಾರಾಟ, ಮಹಿಳಾ ಆಭರಣಗಳು, ಚುರುಮುರಿ, ತಿಂಡಿತಿನಿಸುಗಳು, ಬಟ್ಟೆ, ಹೊಸ ಪ್ರಾಡೆಕ್ಟ್, ಪೇಂಟಿಂಗ್ಸ್ ಸೇರಿದಂತೆ ಸ್ತ್ರೀ ಸ್ವಾವಲಂಬನೆ ಸಾರುವ ಮಳಿಗೆಗಳನ್ನು ಸ್ಥಾಪಿಸಿದ್ದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ದಸರಾ ಉಪಾಸಮಿತಿಯ ವಿಶೇಷಧಿಕಾರಿ ಪ್ರಿಯದರ್ಶಿನಿ, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸಮಿತಿಯ ಸದಸ್ಯರು ಸೇರಿದಂತೆ ಅನೇಕ ಮಹಿಳೆಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...