ಮೈಸೂರು | ಯುವ ದಸರಾ; ಸ್ಥಳ ಪರಿಶೀಲಿಸಿದ ಸಚಿವ ಮಹದೇವಪ್ಪ

Date:

ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ದಸರಾ ಮಹೋತ್ಸವದ ಅಂಗವಾಗಿ ಉತ್ತನಹಳ್ಳಿ ಸಮೀಪದಲ್ಲಿ ಸೆ.23 ರಿಂದ ಜರುಗಲಿರುವ ಯುವದಸರಾ ಕಾರ್ಯಕ್ರಮದ ಸ್ಥಳವನ್ನು ಪರಿಶೀಲನೆ ಮಾಡಿದರು.

ಕಾರ್ಯಕ್ರಮದ ಆಯೋಜನೆಯ ರೂಪುರೇಷೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಕಳೆದ ಬಾರಿಯಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ಆಯೋಜಿಸಬೇಕು. ಅತೀ ಹೆಚ್ಚು ಜನರು ಸೇರುವ ಯುವ ದಸರಾದಲ್ಲಿ ಯಾವುದೇ ಅನಾನುಕೂಲವಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಸೂಚಿಸಿದರು. ಮೈಸೂರು ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಯುವದಸರಾ ಕಾರ್ಯಕ್ರಮ ವೀಕ್ಷಣೆಗೆಂದು ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯವನ್ನು ಕಲ್ಪಿಸಬೇಕು ಎಂದು ತಿಳಿಸಿದರು.

ಯುವ ದಸರಾಗೆ ಸಹಸ್ರಾರು ಸಂಖ್ಯೆಯಲ್ಲಿ ಯುವಸಮೂಹ ಆಗಮಿಸಿ ಸಂಭ್ರಮಿಸುತ್ತಾರೆ. ಬಹುಮುಖ್ಯವಾಗಿ ಮಹಿಳೆಯರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು. ರಾತ್ರಿ ವೇಳೆ ಕಾರ್ಯಕ್ರಮ ನಡೆಯುವುದರಿಂದ ಎಲ್ಲಾ ಬಗೆಯ ಸೂಕ್ತ ಕ್ರಮ ಅನುಸರಿಸಬೇಕು. ಬೀದಿದೀಪದ ವ್ಯವಸ್ಥೆ, ವಾಹನ ನಿಲುಗಡೆಗೆ ಪಾರ್ಕಿಂಗ್ ಸ್ಥಳ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಿ ಮಾರ್ಗದರ್ಶನ ಮಾಡಬೇಕು ಎಂದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಶೇಷ ಸುದ್ದಿ ಓದಿದ್ದೀರಾ? ಜಾನಪದ ತವರೂರು ಚಾಮರಾಜನಗರದಲ್ಲಿಲ್ಲ ಈ ಬಾರಿಯ ದಸರಾ; ಕಲಾವಿದರ ಮರೆತ ಸರ್ಕಾರ

ಸ್ಥಳ ಪರಿಶೀಲನೆ ವೇಳೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ.ಆರ್. ರಕ್ಷಿತ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...