ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ₹1.06 ಕೋಟಿ ಪರಿಹಾರ

Date:

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಕರ್ತವ್ಯನಿರತ ವೇಳೆ ಪ್ರಾಣ ಕಳೆದುಕೊಂಡ ಕಿರಿಯ ಪವರ್ ಮ್ಯಾನ್ ಕುಟುಂಬಕ್ಕೆ ‌ಸರ್ಕಾರದ ವತಿಯಿಂದ ಶನಿವಾರ 1.06 ಕೋಟಿ ರೂ. ಪರಿಹಾರದ ಚೆಕ್ ವಿತರಿಸಲಾಯಿತು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಸರ್ಕಾರದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶುಂಕುಸ್ಥಾಪನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಕೆ.ಜಾರ್ಜ್ ಅವರು ಇತ್ತೀಚೆಗೆ ಕರ್ತವ್ಯನಿರತದ ವೇಳೆ ಪ್ರಾಣಕಳೆದುಕೊಂಡು ಸೆಸ್ಕ್ ವ್ಯಾಪ್ತಿಯ ಪಾಂಡವಪುರ ಉಪ ವಿಭಾಗದ ಕಿರಿಯ ಪವರ್ ಮ್ಯಾನ್ ಮಹೇಶ್ (27 ವರ್ಷ) ಅವರ ಕುಟುಂಬಕ್ಕೆ 1.06 ಕೋಟಿ ರೂ.ಗಳ ಪರಿಹಾರದ ಚೆಕ್ ವಿತರಿಸಿದರು. ಮೃತ ಪವರ್ ಮ್ಯಾನ್ ಮಹೇಶ್ ಅವರ ತಂದೆ ಬೋರೇಗೌಡ ಅವರು ಪರಿಹಾರದ ಚೆಕ್ ಸ್ವೀಕರಿಸಿದರು.

ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷರೂ ಆಗಿರುವ ರಾಜ್ಯಸಭೆಯ ಪ್ರತಿಪಕ್ಷ‌ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು, ಮೈಸೂರು ವಿಭಾಗದ ಅಧೀಕ್ಷಕ ಇಂಜಿನಿಯರ್ ಸುನೀಲ್ ಮತ್ತಿತರರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಬಜೆಟ್ | ಸಾಂಸ್ಕೃತಿಕ ನಗರಿ ಮೈಸೂರಿನ ನಿರೀಕ್ಷೆಗಳೇನು? ಕಳೆದ ಬಜೆಟ್ ಕಡತದಲ್ಲೇ ಉಳಿಯಿತೇ?

ʼಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರು ಈ ಬಾರಿಯ ಬಜೆಟ್‌ನಲ್ಲಿ...

ಮೈಸೂರು | ಸಹಿಷ್ಣುತೆಯ ಗುಣ ವ್ಯಕ್ತಿತ್ವದ ಬೆಳವಣಿಗೆಯಾಗಿದೆ: ಪ್ರೊ ಎಂ ಬಿ ಸುರೇಶ್

ಕೇಂದ್ರ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ರಾಜ್ಯ ಸರ್ಕಾರ,...

ಹುಣಸೂರು | ಮಕ್ಕಳು ವೈಜ್ಞಾನಿಕ ಮನೋಭಾವನೆ-ವೈಚಾರಿಕತೆ ಬೆಳೆಸಿಕೊಳ್ಳಬೇಕು: ಮಹದೇವ

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಕಟ್ಟೆಮಳಲವಾಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ 'ರಾಷ್ಟ್ರೀಯ...

ಮೈಸೂರು | ತಂಬಾಕು ಬೆಳೆಗಾರರ ಹಿತಕಾಯಲು ಬದ್ಧ; ಉತ್ತಮ ಬೆಲೆಗೆ ಖರೀದಿಸಿ: ಎಚ್ಡಿಕೆ

ಮೈಸೂರಿನ ಭಾರತೀಯ ಬಾಷಾ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರದಂದು ಬೃಹತ್ ಕೈಗಾರಿಕೆ ಸಚಿವರಾದ...