ಮೈಸೂರಿನಲ್ಲಿ 600 ಕೋಟಿ ರೂ. ಹೂಡಿಕೆ, 5 ಸಾವಿರ ಉದ್ಯೋಗ ಸೃಷ್ಟಿ: ಸಚಿವ ಪ್ರಿಯಾಂಕ್ ಖರ್ಗೆ

Date:

ಮೈಸೂರಿನಲ್ಲಿ ಸೆಮಿಕಂಡಕ್ಟರ್, ಎಲಿಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ ಮತ್ತು ಘಟಕ ಗೋದಾಮುಗಳು ಸೇರಿದಂತೆ 20ಕ್ಕೂ ಹೆಚ್ಚು ಇಎಸ್‌ಡಿಎಂ ಕಂಪನಿಗಳು ಕ್ಲಸ್ಟರ್‌ಗೆ ಸೇರ್ಪಡೆಗೊಳ್ಳುತ್ತಿದ್ದು ಸುಮಾರು 600 ಕೋಟಿ ರೂ. ಬಂಡವಾಳ ಹೂಡಿಕೆ ಹರಿದು ಬಂದಿದೆ ಎಂದು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, “150 ಎಕರೆಗಳಷ್ಟು ಪಿಸಿಬಿ ಕ್ಲಸ್ಟರ್‌ಅನ್ನು ಸ್ಥಾಪಿಸುವ ಉದ್ದೇಶದಿಂದ ಪ್ರಸ್ತುತ ಪರೀಕ್ಷಾ ಸೌಲಭ್ಯವನ್ನು ವಿಸ್ತರಿಸಲು, ಮಲ್ಟಿಟೆನೆನ್ಸಿ ಕ್ಲೀನ್ ರೂಮ್‌ಅನ್ನು ಸೇರಿಸಲು ಉದ್ದೇಶಿಸಿದ್ದೇವೆ. ಇದು 5,000 ಹೊಸ ಉದ್ಯೋಗ ಸೃಷ್ಟಿಗೆ ನೆರವಾಗಲಿದೆ” ಎಂದಿದ್ದಾರೆ.

“ಮಹಿಳಾ ಉದ್ಯೋಗಿಗಳನ್ನು ಸಬಲೀಕರಣಗೊಳಿಸಲು ಕೂಡ ಸಹಕಾರವಾಗಲಿದೆ. ಈ ಎಲ್ಲ ಬೆಳವಣಿಗೆಯಿಂದ ಜಾಗತಿಕ ಕಂಪನಿಗಳು ಮೈಸೂರಿನಲ್ಲಿ ಬೆಳೆಯಲು ಇದು ಉತ್ತಮ ಸಮಯವಾಗಿದೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕ ಇಎಸ್‌ಡಿಎಂ (ಎಲೆಕ್ಟ್ರಾನಿಕ್ಸ್ ಸಿಸ್ಟಂಸ್ ಡಿಸೈನ್ ಮತ್ತು ತಯಾರಿಕೆ) ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ನಾಯಕನನ್ನಾಗಿಸುವ ಗುರಿ ಹೊಂದಲಾಗಿದೆ. ವಿಶ್ವ ಮಟ್ಟದಲ್ಲಿ ಹೂಡಿಕೆಗಳ ಹರಿವು ಹೆಚ್ಚಿಸುವುದು, ಹೊಸ ಉದ್ಯಮಗಳನ್ನು ಆರಂಭಿಸಲು ಉತ್ತೇಜನ ನೀಡುವುದು ಮತ್ತು ರಾಜ್ಯದಲ್ಲಿ ಪ್ರಾರಂಭಿಸಿರುವ ಉದ್ಯಮಗಳನ್ನು ಉಳಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿಸುವುದು ಸರ್ಕಾರದ ಉದ್ದೇಶ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...