ಕಾವೇರಿ ವಿವಾದ | ಶಾಶ್ವತ ಪರಿಹಾರಕ್ಕೆ ಸುತ್ತೂರು ಸ್ವಾಮೀಜಿ ಸಲಹೆ

Date:

ಕಾವೇರಿ ನೀರು ಹಂಚಿಕೆ ವಿವಾದ ರಾಜ್ಯದಲ್ಲಿ ಹೋರಾಟ ಕಿಚ್ಚು ಹಚ್ಚಿದೆ. ಸೆ.26ರಂದು ಬೆಂಗಳೂರು ಬಂದ್‌ ನಡೆದಿದ್ದು, ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ಕೊಡಲಾಗಿದೆ. ಈ ನಡುವೆ, ಕಾವೇರಿ ನೀರು ಹಂಚಿಕೆ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ರಾಜ್ಯ ಸರ್ಕಾರಕ್ಕೆ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಲಹೆ ನೀಡಿದ್ದಾರೆ.

ಕಾವೇರಿ ವಿವಾದಕ್ಕೆ ಸಂಬಂದಿಸಿದಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಕಾವೇರಿ ನೀರಿನ ಸಮಸ್ಯೆ ಮತ್ತೊಮ್ಮೆ ಉಲ್ಬಣಿಸಿದೆ. ಪ್ರತಿ ವರ್ಷವೂ ಈ ಸಮಸ್ಯೆ ಉಂಟಾಗುತ್ತಲೇ ಇದೆ. ಶತಮಾನಗಳಿಂದ ಇದೊಂದು ಜ್ವಲಂತ ಸಮಸ್ಯೆಯಾಗಿದೆ. ಪ್ರಾರಂಭದ ದಿನಗಳಿಂದಲೂ ತಮಿಳುನಾಡು ತನಗೆ ಅಗತ್ಯವಾದುದಕ್ಕಿಂತ ಹೆಚ್ಚಿನ ನೀರನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುತ್ತಲೇ ಇದೆ. ಕರ್ನಾಟಕದ ಕಾವೇರಿ ನದಿ ಪಾತ್ರದ ರೈತರು ಸಂಕಷ್ಟಕ್ಕೆ ಒಳಗಾಗುತ್ತಲೇ ಇದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಮೈಸೂರು ಬೆಂಗಳೂರು ಇತರೆಡೆಗಳಿಗೆ ಕುಡಿಯುವ ನೀರಿಗೂ ಸಮಸ್ಯೆ ತಲೆದೋರುತ್ತಿದೆ ಇದಕ್ಕೆ ಅಂತಿಮ ಪರಿಹಾರ ಯಾವಾಗ ಎಂಬುದೇ ಪ್ರಶ್ನಾರ್ಥಕವಾಗಿದೆ. ಕರ್ನಾಟಕ ಸರ್ಕಾರವು ಎಲ್ಲ ಸಂದರ್ಭಗಳಲ್ಲಿಯೂ ನೆರೆ ರಾಜ್ಯದ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಲೇ ಬಂದಿದೆ. ತನಗೆ ಎಷ್ಟೇ ತೊಂದರೆಗಳಾದರು ನ್ಯಾಯಾಧೀಕರಣ ಮತ್ತು ನ್ಯಾಯಾಲಯಗಳ ತೀರ್ಪುಗಳನ್ನು ಜನಾಭಿಪ್ರಾಯದ ಕಡು ವಿರೋಧದ ನಡುವೆಯೂ ಗೌರವಿಸಿ ಪಾಲಿಸುತ್ತ ಬಂದಿದೆ. ಇದನ್ನು ತಮಿಳುನಾಡಾಗಲಿ ಅಥವಾ ಸಂಬಂಧಪಟ್ಟವರು ಯಾರೇ ಆಗಲಿ ದೌರ್ಬಲ್ಯವೆಂದು ಭಾವಿಸಬಾರದು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸುತ್ತೂರು

“ಕಾವೇರಿ ಸಮಸ್ಯೆಗೆ ಅಂತಿಮ ಪರಿಹಾರದ ಅಗತ್ಯವಿದೆ. ಮಳೆ ಆಧರಿಸಿ ನೀರಿನ ಸಂಗ್ರಹದ ಆಧಾರದ ಮೇಲೆ ನೀರು ಹಂಚಿಕೆಯ ಬಗೆಗೆ ಪ್ರತಿವರ್ಷವೂ ಕ್ರಮ ತೆಗೆದುಕೊಳ್ಳಬೇಕಾದುದು ಅಗತ್ಯ. ಪ್ರತಿ ವರ್ಷ ಆಯಾ ಕಾಲಕ್ಕೆ ಸರಿಯಾಗಿ ಮಳೆಯಾದರೆ ಈ ಸಮಸ್ಯೆ ಉಂಟಾಗುವುದಿಲ್ಲ. ಆದರೆ ಅನಾವೃಷ್ಟಿಯಾದಾಗಲೆಲ್ಲ ಈ ಸಮಸ್ಯೆ ಸಹಜವಾಗಿ ಉಂಟಾಗುತ್ತಲೇ ಇರುತ್ತದೆ. ಇದೀಗ ಉಲ್ಬಣಿಸಿರುವ ಸಮಸ್ಯೆಗೆ ಭಾರತ ಸರ್ಕಾರ, ಸರ್ವೋಚ್ಚ ನ್ಯಾಯಾಲಯ ಮತ್ತು ನ್ಯಾಯಾಧೀಕರಣಗಳು ಸಮಾಲೋಚಿಸಬೇಕು. ಕರ್ನಾಟಕ ತಮಿಳುನಾಡು ಹೊರತಾದ ಹೊರ ರಾಜ್ಯಗಳ ನೀರಾವರಿ ತಜ್ಞರ ಸಮಿತಿ ರಚಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನೀರಿನ ಸಂಗ್ರಹಣೆಯ ವಾಸ್ತವಾಂಶವನ್ನು ಅಧ್ಯಯನ ಮಾಡಿ ಸಮಸ್ಯೆಗೆ ಪರಿಹಾರ ಸೂಚಿಸುವುದು ಇಂದಿನ ತುರ್ತು ಅಗತ್ಯವಾಗಿದೆ. ಕರ್ನಾಟಕದ ಜನರ ಕುಡಿಯುವ ನೀರಿಗೆ, ರೈತರ ಬೆಳೆಗಳಿಗೆ ಹಾಗೂ ಜಾನುವಾರುಗಳಿಗೆ ಅಗತ್ಯವಾಗುವ ನೀರನ್ನು ಬಳಸಿಕೊಂಡು ನಂತರ ಹೆಚ್ಚಿನ ನೀರನ್ನು ತಮಿಳುನಾಡಿಗೂ ಅನುಕೂಲವಾಗುವಂತೆ ಹರಿಸಲು ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟವರೆಲ್ಲರು ಮುಂದಾಗಬೇಕೆಂದು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...