ಮೈಸೂರು | ಸರ್ಕಾರಿ ಶಾಲಾ‌-ಕಾಲೇಜುಗಳ ಸಂಪೂರ್ಣ ಆರ್ಥಿಕ ಜವಬ್ದಾರಿ ಸರ್ಕಾರವೇ ತೆಗೆದುಕೊಳ್ಳಬೇಕು: ಎಐಡಿಎಸ್ಓ ಆಗ್ರಹ

Date:

ಎಲ್ಲ ವಿದ್ಯಾರ್ಥಿಗಳಿಗೂ ಶಿಕ್ಷಣವನ್ನು ಒದಗಿಸುವ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವು ವಹಿಸಿಕೊಳ್ಳಬೇಕು. ಲಾಲಾ ಲಜಪತ್ ರಾಯ್ ಅವರು ಹೇಳಿರುವಂತೆ, ‘ಶಿಕ್ಷಣಕ್ಕೆ ಹಣಕಾಸು ಒದಗಿಸುವುದು ಸರ್ಕಾರಿ ಖಜಾನೆಯ ಮೊದಲ ಆದ್ಯತೆಯಾಗಬೇಕು’ ಎಂದು ಎಐಡಿಎಸ್‌ಒ ಒತ್ತಾಯಿಸಿದೆ.

ಮೈಸೂರು ವಿಶ್ವವಿದ್ಯಾಲಯದಲ್ಲಿ ಕರ್ನಾಟಕದಲ್ಲಿ ಜನಪರ ಶಿಕ್ಷಣ ನೀತಿಯನ್ನು ರೂಪಿಸುವ ಕುರಿತು ರಾಜ್ಯ ಶಿಕ್ಷಣ ನೀತಿ ಆಯೋಗ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಎಐಡಿಎಸ್‌ಒ ಪ್ರತಿನಿಧಿಗಳು ಭಾವಹಿಸಿ ಹಕ್ಕೊತ್ತಾಯಗಳನ್ನು ಮುಂದಿಟ್ಟಿದ್ದಾರೆ. ಎನ್‌ಇಪಿ-2020ಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

“ಶಿಕ್ಷಣದ ಖಾಸಗೀಕರಣ ಮತ್ತು ವ್ಯಾಪಾರೀಕರಣದ ನೀಲಿನಕ್ಷೆಯಾಗಿರುವ ಎನ್‌ಇಪಿ-2020ನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು. ಈಗಾಗಲೇ ಅನುಷ್ಠಾನಗೊಳಿಸಿರುವ, ಆರ್ಥಿಕ ಸ್ವಾಯತ್ತ ಸಂಸ್ಥೆಗಳನ್ನು ಕೊನೆಗಾಣಿಸಬೇಕು. ವಿಲೀನೀಕರಣದ ಹೆಸರಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳ ಮುಚ್ಚುವಿಕೆಯನ್ನು ಕೈಬಿಡಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೌಶಲ್ಯ ಅಭಿವೃದ್ಧಿಯ ಹೆಸರಿನಲ್ಲಿ ಒದಗಿಸಲಾಗುವ ವೃತ್ತಿ ಶಿಕ್ಷಣವು ಶಿಕ್ಷಣದ ಅಡಿಪಾಯವನ್ನೇ ಅಲುಗಾಡಿಸುತ್ತದೆ. ಎಲ್ಲ ವಿದ್ಯಾರ್ಥಿಗಳು ಎಲ್ಲ ವಿಷಯಗಳನ್ನು ಕಲಿಯಬೇಕೆಂಬ ಬಣ್ಣದ ಮಾತಿನೊಂದಿಗೆ, ಕಲಾವಿಭಾಗದ ವಿದ್ಯಾರ್ಥಿಯು ಕಡ್ಡಾಯವಾಗಿ ವಿಜ್ಞಾನದ ವಿಷಯವನ್ನು, ವಿಜ್ಞಾನದ ವಿದ್ಯಾರ್ಥಿಯು ಕಡ್ಡಾಯವಾಗಿ ವಾಣಿಜ್ಯ ವಿಭಾಗದ ವಿಷಯವನ್ನು ಕಲಿಯಲು ಒತ್ತಾಯಪಡಿಸುವ ಬಹು ಶಿಸ್ತೀಯ ಪದ್ದತಿಯನ್ನು ಹೇರಲಾಗುತ್ತಿದೆ. ಇದು ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಹೊಂದಲು ಪೂರಕ ವಾತಾವರಣವನ್ನು ನಿರ್ಮಿಸುವ ಬದಲು, ಕಾಲೇಜನ್ನು ತೊರೆಯಲು ಉತ್ತೇಜನ ನೀಡುತ್ತದೆ. ಆ ಪದ್ದತಿಯನ್ನು ಕೈಬಿಡಬೇಕು” ಎಂದು ಒತ್ತಾಯಿಸಿದ್ದಾರೆ.

“ಮೂಲಭೂತವಾಗಿ, ಸರ್ಕಾರವು ಸಾರ್ವಜನಿಕ ಶಿಕ್ಷಣಗಳು ಸಂಸ್ಥೆಗಳನ್ನು ಬಲಪಡಿಸಬೇಕು. ಈ ನಿಟ್ಟಿನಲ್ಲಿ ಜನರ ತೆರಿಗೆ ದುಡ್ಡನ್ನು, ಶಿಕ್ಷಣಕ್ಕಾಗಿ ಆದ್ಯತೆಯ ಮೇರೆಗೆ ವಿನಿಯೋಗಿಸಬೇಕು. ಪಠ್ಯಕ್ರಮದ ಮೂಲಕ ಶಿಕ್ಷಣ ವ್ಯವಸ್ಥೆಯಲ್ಲಿ ವೈಜ್ಞಾನಿಕ-ಧರ್ಮನಿರಪೇಕ್ಷ ಅಂಶಗಳನ್ನು ಬಲಪಡಿಸಬೇಕು. ಪ್ರತಿ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಅಧ್ಯಾಪಕರು ಸೇರಿದಂತೆ ಕಟ್ಟಡ ಹಾಗೂ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು” ಎಂದು ಆಗ್ರಹಿಸಿದೆ.

ಸಭೆಯಲ್ಲಿ ಸಂಘಟನೆಯ ಸುಭಾಷ್, ಚಂದ್ರಕಲಾ ಹಾಗೂ ನಿತಿನ್ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...