ಮೈಸೂರು | ಹುಲಿ ದಾಳಿ; ಬಾಲಕ ಬಲಿ

Date:

ಬಾಲಕನ ಮೇಲೆ ಹುಲಿ ದಾಳಿ ನಡೆಸಿದ್ದು, ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಎಚ್‌.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಮೇಟಿಕುಪ್ಪೆ ವನ್ಯಜೀವಿ ವಲಯದಲ್ಲಿ ಬಾಲಕನ ಮೇಲೆ ಹುಲಿ ದಾಳಿ ಮಾಡಿದೆ. ಕಲ್ಲಟ್ಟಿ ಗ್ರಾಮದ ನಿವಾಸಿ ಕೃಷ್ಣ ನಾಯಕ್ ಎಂಬವರ ಪುತ್ರ ಚರಣ್ ನಾಯಕ್ (9) ಮೃತ ಬಾಲಕ ಎಂದು ತಿಳಿದುಬಂದಿದೆ.

ಕೃಷ್ಣ ನಾಯಕ್‌ ಅವರ ಜಮೀನಿನಲ್ಲಿ ಮೆಣಸು ಕೊಯ್ಲು ಕೆಲಸ ನಡೆಯುತ್ತಿತ್ತು. ಚರಣ್‌ನನ್ನು ಮೆಣಸು ಕಾವಲಿಗೆ ಕೂರಿಸಲಾಗಿತ್ತು. ಈ ವೇಳೆ, ಆತನ ಮೇಲೆ ಹುಲಿ ನಡೆಸಿದೆ. ಕಾಲಿನ ಭಾಗವನ್ನು ತಿಂದುಹಾಕಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕ ಚೀರಿಕೊಂಡಿದ್ದು, ಜಮೀನಿನಲ್ಲಿದ್ದವರು ಸ್ಥಳಕ್ಕೆ ಧಾವಿಸಿದ್ದಾರೆ. ಆ ವೇಳೆಗೆ ಹುಲಿ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಅರಣ್ಯ ಇಲಾಖೆಯ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಶಾಸಕ ಅನಿಲ್‌ ಚಿಕ್ಕಮಾದು, ಡಿ.ಸಿ.ಎಫ್‌ ಹರ್ಷಕುಮಾರ್‌, ಎಸಿಎಫ್‌ ರಂಗಸ್ವಾಮಿ, ಡಿ.ವೈ.ಎಸ್‌.ಪಿ. ಮಹೇಶ್‌, ಆರ್‌.ಎಫ್‌.ಓ ಹರ್ಷಿತ್‌ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಬಜೆಟ್ | ಸಾಂಸ್ಕೃತಿಕ ನಗರಿ ಮೈಸೂರಿನ ನಿರೀಕ್ಷೆಗಳೇನು? ಕಳೆದ ಬಜೆಟ್ ಕಡತದಲ್ಲೇ ಉಳಿಯಿತೇ?

ʼಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರು ಈ ಬಾರಿಯ ಬಜೆಟ್‌ನಲ್ಲಿ...

ಮೈಸೂರು | ಸಹಿಷ್ಣುತೆಯ ಗುಣ ವ್ಯಕ್ತಿತ್ವದ ಬೆಳವಣಿಗೆಯಾಗಿದೆ: ಪ್ರೊ ಎಂ ಬಿ ಸುರೇಶ್

ಕೇಂದ್ರ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ರಾಜ್ಯ ಸರ್ಕಾರ,...

ಹುಣಸೂರು | ಮಕ್ಕಳು ವೈಜ್ಞಾನಿಕ ಮನೋಭಾವನೆ-ವೈಚಾರಿಕತೆ ಬೆಳೆಸಿಕೊಳ್ಳಬೇಕು: ಮಹದೇವ

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಕಟ್ಟೆಮಳಲವಾಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ 'ರಾಷ್ಟ್ರೀಯ...

ಮೈಸೂರು | ತಂಬಾಕು ಬೆಳೆಗಾರರ ಹಿತಕಾಯಲು ಬದ್ಧ; ಉತ್ತಮ ಬೆಲೆಗೆ ಖರೀದಿಸಿ: ಎಚ್ಡಿಕೆ

ಮೈಸೂರಿನ ಭಾರತೀಯ ಬಾಷಾ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರದಂದು ಬೃಹತ್ ಕೈಗಾರಿಕೆ ಸಚಿವರಾದ...