ಮೈಸೂರು | ರಾಜ್ಯ ಶಿಕ್ಷಣ ನೀತಿ ರಚನೆಗೆ ಎಐಡಿಎಸ್‌ಒ ಆಗ್ರಹ

Date:

ರಾಜ್ಯದಲ್ಲಿ ಜನಪರ ಶಿಕ್ಷಣ ನೀತಿ ರಚಿಸುವಂತೆ ಆಗ್ರಹಿಸಿ ಹೋರಾಡಲು ಮುನ್ನುಗ್ಗಿ ಎಂದು ಎಐಡಿಎಸ್‌ಒ ಕಾರ್ಯಕರ್ತರು ಶನಿವಾರದಂದು ಮೈಸೂರು ಜಿಲ್ಲಾ ಮಟ್ಟದ 7ನೇ ವಿದ್ಯಾರ್ಥಿ ಸಮ್ಮೇಳನ ಹಮ್ಮಿಕೊಂಡಿದ್ದು, ಬೃಹತ್‌ ಪ್ರತಿಭಟನೆ ನಡೆಸಿದರು.

ಎಐಡಿಎಸ್ಒ ರಾಜ್ಯ ಉಪಾಧ್ಯಕ್ಷ ಅಭಯ ದಿವಾಕರ್ ಮಾತನಾಡಿ “ರಾಜ್ಯದಲ್ಲಿ ಎನ್‌ಇಪಿ-2020 ತೆಗೆದು ಹಾಕಲು ಮುಖ್ಯ ಕಾರಣ ವಿದ್ಯಾರ್ಥಿಗಳ ಹೋರಾಟ. ರಾಜ್ಯ ಶಿಕ್ಷಣ ನೀತಿಯಲ್ಲಿ ಸರ್ಕಾರಿ ಶಾಲಾ ಕಾಲೇಜು ನಿರ್ವಹಣೆಯ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರ ತೆಗೆದುಕೊಳ್ಳಬೇಕು. ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ನಿರ್ವಹಿಸಲು ವಿದ್ಯಾರ್ಥಿಗಳ ಹಣದ ಮೇಲೆ ಅವಲಂಬಿತರಾಗಬಾರದು. ಕಡಿಮೆ ದಾಖಲಾತಿ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲನಗೊಳಿಸುವುದು ಹಾಗೂ ಮುಚ್ಚುವುದನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದರು.

“ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಕಾರ್ಪೊರೇಟ್ ಕಂಪನಿಗಳ ಬಳಿ ಧನ ಸಹಾಯ ಪಡೆಯುವ ಬದಲು, ಜನಗಳಿಂದ ಸಂಗ್ರಹಿಸಿರುವ ತೆರಿಗೆ ಹಣದಲ್ಲಿ ಸರ್ಕಾರವೇ ನೀಡಬೇಕು. ವಿದೇಶಿ ನೇರ ಬಂಡವಾಳ ಹೂಡಿಕೆ ಹೆಸರಿನಲ್ಲಿ ವಿದೇಶಿ ವಿವಿಗಳನ್ನು ತೆರೆಯಲು ಅವಕಾಶ ಕೊಡಬಾರದು. ವಿದ್ಯಾರ್ಥಿಗಳಿಗೆ ಕೌಶಲ್ಯ ಆಧಾರಿತ ಶಿಕ್ಷಣದ ಹೆಸರಿನಲ್ಲಿ ಮೌಲ್ಯಗಳನ್ನು ಕಡೆಗಣಿಸಬಾರದು. ಈ ಅಂಶಗಳನ್ನು ಗಮನಿಸಿ ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರು | ರಾಜ್ಯ ಶಿಕ್ಷಣ ನೀತಿ ರಚನೆಗೆ ಎಐಡಿಎಸ್‌ಒ ಆಗ್ರಹ

“ವಿದ್ಯಾರ್ಥಿಗಳ ಬೇಡಿಕೆಗಳಂತೆ ಕರ್ನಾಟಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಬೇಕು. ಶೈಕ್ಷಣಿಕ ಕ್ಷೇತ್ರಕ್ಕೆ ಹೆಸರಾಗಿರುವ ಮೈಸೂರಿನಲ್ಲೂ ಕೂಡ ಒಂದು ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಬೇಕು” ಎಂದು ಆಗ್ರಹಿಸಿದರು.

“ವಿದ್ಯಾರ್ಥಿಗಳು ಭಗತ್ ಸಿಂಗ್, ನೇತಾಜಿಯವರ ವಿಚಾರಗಳನ್ನು ಅಳವಡಿಸಿಕೊಂಡು ಅನ್ಯಾಯದ ವಿರುದ್ಧ ಹೋರಾಟ ಮಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳುತ್ತ ಪರಿಪೂರ್ಣ ವಿದ್ಯಾರ್ಥಿಗಳಾಗಬೇಕು” ಎಂದು ಕರೆ ನೀಡಿದರು.

ಪ್ರಗತಿಪರ ಚಿಂತಕ ನಾ ದಿವಾಕರ್ ಅವರು ಎಐಡಿಎಸ್ಒ ಜಿಲ್ಲಾ ಮಟ್ಟದ ವಿದ್ಯಾರ್ಥಿ ಸಮ್ಮೇಳನದ ಬಹಿರಂಗ ಅಧಿವೇಶನ ಉದ್ಘಾಟಿಸಿ ಮಾತನಾಡಿ, “ಸಮಾಜದ ಬಗ್ಗೆ ವಿದ್ಯಾರ್ಥಿ ಸಮುದಾಯ ಅರಿವು ಮೂಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಸಾಮಾಜಿಕವಾಗಿ, ರಾಜಕೀಯವಾಗಿ ಪ್ರಜ್ಞೆಯನ್ನು ಮೂಡಿಸಿಕೊಳ್ಳಬೇಕು. ಜೊತೆಗೆ ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಹೋರಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮನರೇಗಾ ಕಾರ್ಮಿಕರಿಗೆ ಕೆಲಸ ನೀಡದಿದ್ದಲ್ಲಿ ಕಠಿಣ ಕ್ರಮ: ಸಿಇಒ

ಈ ಸಮ್ಮೇಳನದಲ್ಲಿ ಎಐಡಿಎಸ್ಒ ಮೈಸೂರು ಜಿಲ್ಲಾ ಮಟ್ಟದ ನೂತನ ಸಮಿತಿಯನ್ನು ಚುನಾಯಿಸಲಾಯಿತು. ಜಿಲ್ಲಾಧ್ಯಕ್ಷರಾಗಿ ಸುಭಾಷ್, ಕಾರ್ಯದರ್ಶಿಗಳಾಗಿ ಚಂದ್ರಕಲಾ, ಉಪಾಧ್ಯಕ್ಷರುಗಳಾಗಿ ನಿತಿನ್, ಸ್ವಾತಿ ಹಾಗೂ ಕಾರ್ಯದರ್ಶಿ ಮಂಡಳಿ ಸದಸ್ಯರಾಗಿ ಚಂದನ, ಚಂದ್ರಿಕಾ, ಹೇಮಲತಾ, ಅಂಜಲಿ, ದಿಶಾ, ಧನುಶ್ರೀ, ಅಭಿಷೇಕ್ ಬೀರಪ್ಪ, ಜಟ್ಟಪ್ಪ, ಮಣಿಕಂಠ ಹಾಗೂ 17ಮಂದಿ ಕಾರ್ಯಕಾರಿ ಸಮಿತಿ ಸದಸ್ಯರು, 30 ಮಂದಿ ಕೌನ್ಸಿಲ್ ಸದಸ್ಯರು ಚುನಾಯಿಸಲ್ಪಟ್ಟರು.

ಕಾರ್ಯಕ್ರಮದಲ್ಲಿ ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ವಿನಯ್ ಚಂದ್ರ, ಪುಷ್ಪ ಹಾಗೂ ನೂರಾರು ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...