ಮೈಸೂರು | ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿಬಿದ್ದಿದ್ದ ಉಪನ್ಯಾಸಕನ ವಿರುದ್ಧ ಮತ್ತೊಂದು ಆರೋಪ

Date:

ಕಳೆದ ಕೆಲ ದಿನಗಳ ಹಿಂದೆ ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ನಂಜನಗೂಡಿನ ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮನೆ ಮೇಲೆ ದಾಳಿ ಮಾಡಿದ್ದರು. ಇದೀಗ ಉಪನ್ಯಾಸಕ ಮಹದೇವಸ್ವಾಮಿ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದ್ದು, ನಿವೇಶನ ಕೊಡಿಸುವುದಾಗಿ ₹70 ಕೋಟಿ ಹಣ ಪಡೆದು ವಂಚಿಸಿರುವುದಾಗಿ ಆರೋಪ ವ್ಯಕ್ತವಾಗಿದೆ.

ಕರ್ನಾಟಕ ರಾಜ್ಯ ಕಾಲೇಜು ಅಧ್ಯಾಪಕರು ಹಾಗೂ ಶಾಲಾ ಶಿಕ್ಷಕರ ಗೃಹನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಮಹದೇವಸ್ವಾಮಿ ಮೈಸೂರಿನ ಗುರುಕುಲ ಬಡಾವಣೆಯಲ್ಲಿ ₹40 ಲಕ್ಷ ಮೌಲ್ಯದ 70 ನಿವೇಶನ ಕೊಡಿಸುವುದಾಗಿ ಶಿಕ್ಷಕರಿಂದ ₹28 ಕೋಟಿ ಹಣ ಪಡೆದಿದ್ದು, ಶಿಕ್ಷಕರಿಗೆ ನಿವೇಶನ ನೀಡದೆ, ಹೆಂಡತಿ ಮಕ್ಕಳು ಸಂಬಂಧಿಕರ ಹೆಸರಿಗೆ ಮಾಡಿಕೊಂಡಿರುವುದಾಗಿ ಆರೋಪ ಕೇಳಿಬಂದಿದೆ.

ಮತ್ತೊಂದು ಬಡಾವಣೆ ನಿರ್ಮಾಣಕ್ಕೆ ಶಿಕ್ಷಕರಿಂದ 2014 ರಿಂದ ₹40 ಕೋಟಿ ಹಣ ವಸೂಲಿ ಮಾಡಿದ್ದು, ಬಡಾವಣೆ ನಿರ್ಮಾಣಕ್ಕೆ ಮಹದೇವಸ್ವಾಮಿ ಭೂಮಿಯನ್ನೇ ಖರೀದಿ ಮಾಡಿಲ್ಲ. ಈ ಬಗ್ಗೆ ಪೊಲೀಸರು, ಸಹಕಾರ ಇಲಾಖೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಮಹದೇವಸ್ವಾಮಿ ಸಂಬಂಧಿಕರಿಗೆ ಸೈಟ್ ಮಾರಿ ತನ್ನ ಹೆಸರಿಗೆ ದಾನವಾಗಿ ಮಾಡಿಕೊಂಡಿರುವ ಬಗ್ಗೆ ಆರೋಪಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್‌ಗೆ ʼನ್ಯಾಷನಲ್ ಇನ್ನೋವೇಟಿವ್ ಅವಾರ್ಡ್ʼ

ಲೋಕಾಯುಕ್ತ ಅಧಿಕಾರಿಗಳು ಒಂದು ವಾರದ ಹಿಂದೆ ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮೇಲೆ ದಾಳಿ ಮಾಡಿ, ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ಪರಿಶೀಲನೆ ನಡೆಸಿದ್ದರು. ಕುಟುಂಬದ ಹೆಸರಿನಲ್ಲಿ ಎಂ ಎಸ್ ಗ್ರೂಪ್ ಕಂಪನಿ, ಆದಾಯಕ್ಕೂ ಮೀರಿ ಅಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಹಾಗೂ ಐಜಿಪಿ, ಸುಬ್ರಮಣ್ಣೀಶ್ವರ ರಾವ್ ಎಸ್. ಪಿ ಸುರೇಶ್ ಬಾಬು ಮಾರ್ಗದರ್ಶ‌ನದಲ್ಲಿ ಡಿಎಸ್‌ಪಿ, ಕೃಷ್ಣಯ್ಯ ನೇತೃತ್ವದಲ್ಲಿ 12 ತಂಡಗಳು ವಿವಿಧ ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದರು. ದಾಳಿ ಬಳಿಕ 8 ಕೋಟಿ ಅಕ್ರಮ ಆಸ್ತಿ ಇದೆ ಎಂದು ಲೋಕಾ ಪೊಲೀಸರು ತಿಳಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...