ಮೈಸೂರು | ದಲಿತ ಕೌನ್ಸಿಲರ್ ಮೇಲೆ ಹಲ್ಲೆ – ಜಾತಿ ನಿಂದನೆ; ಪ್ರಕರಣ ದಾಖಲು

Date:

ಕನ್ನಡ ರಾಜ್ಯೋತ್ಸವ ಆಚರಣೆ ವಿಚಾರವಾಗಿ ನಗರಸಭೆಯ ದಲಿತ ಸದಸ್ಯ (ಕೌನ್ಸಿಲರ್) ಮೇಲೆ ಪ್ರಬಲ ಜಾತಿಯವರು ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.

ಹುಣಸೂರು ನಗರಸಭೆಯ ದಲಿತ ಸದಸ್ಯ ಮಂಜು ಅವರು ಹಲ್ಲೆಗೊಳಗಾಗಿದ್ದಾರೆ. ತಮ್ಮ ಮೇಲೆ ಕಾರ್ ಸ್ಟ್ಯಾಂಡ್ ಸಂಘದ ಅಧ್ಯಕ್ಷ ದೇವರಾಜು ಎಂಬಾತ ಹಲ್ಲೆ ಮಾಡಿದ್ದಾರೆಂದು ಹಣಸೂರು ಪೊಲೀಸರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬುಧವಾರ ಹುಣಸೂರಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ, ದೇವರಾಜ್ ಎಂಬಾತ, ‘ಹೊಲೆಯ, ಮಾದಗರಿಂದ ಅಡುಗೆ ಮಾಡಿಸಿ ತಿನ್ನುವ ದರಿದ್ರ ಬಂದಿಲ್ಲ. ಅವರಿಂದ ಅಡುಗೆ ಮಾಡಿಸಬೇಡ’ ಎಂದು ಮಂಜು ಅವರೊಂದಿಗೆ ಗಲಾಟೆ ಮಾಡಿ, ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾತಿ ನಿಂದನೆಯ ಕಾರಣಕ್ಕೆ ಮಂಜು ಮತ್ತು ದೇವರಾಜ್ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆಗೆ ದೇವರಾಜ್ ತಮ್ಮ ಇಬ್ಬರು ಮಕ್ಕಳನ್ನು ಸ್ಥಳಕ್ಕೆ ಕರೆಸಿದ್ದಾರೆ. ಸ್ಥಳಕ್ಕೆ ಬಂದ ರಾಜೇಶ್ ಮತ್ತು ಶರತ್ ಹಾಗೂ ದೇವರಾಜ್ ಅವರು ಮಂಜು ಅವರ ಕೊರಳಪಟ್ಟಿ ಹಿಡಿದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಗೊಳಗಾದ ಮಂಜು ಅವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದರಾಜು ಆಸ್ಪತ್ರೆಗೆ ಭೇಟಿ ನೀಡಿದ್ದು, ಮಂಜು ಅವರ ಯೋಗಕ್ಷೇಮ ವಿಚಾರಿಸಿದ್ದಾರೆ.

ಮಂಜು ಅವರು ಹಣಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅವರ ದೂರಿನ ಆಧಾರ ಮೇಲೆ ಆರೋಪಿಗಳ ವಿರುದ್ಧ ಎಸ್‌ಸಿ.ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 341, 323, 504, 506, 114ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

“ಒಂದು ವೇಳೆ ಪೊಲೀಸರು ತಕ್ಷಣವೇ ಆರೋಪಿಗಳನ್ನು ಬಂಧಿಸದೇ ಇದ್ದಲ್ಲಿ, ಬೃಹತ್ ಪ್ರತಿಭಟನೆ ನಡೆಸುತ್ತೇವೆ” ಎಂದು ದಲಿತ ಸಂಘರ್ಷ ಸಮಿತಿ ಮುಖಂಡ ಅತ್ತಿಕುಪ್ಪೆ ರಾಮಕೃಷ್ಣ ಈದಿನ.ಕಾಮ್‌ಗೆ ತಿಳಿಸಿದ್ದಾರೆ.

ಮಂಜು ಅವರ ಮೇಲೆ ಮಾರಣಾಂತಿಕ ಹಲ್ಲೆ, ಜಾತಿ ನಿಂದನೆ ಮಾಡಿರುವ ಆರೋಪಿಗಳನ್ನು ಬಂಧಿಸುವಂತೆ ಶಿವರಾಜ್,ರಾಜು ಚಿಕ್ಕ ಹುಣಸೂರು,ಪುಟ್ಟರಾಜು,ಚಲುವರಾಜು,ವೆಂಕಟೇಶ್,ಕೃಷ್ಣ,ಸಿದ್ದೇಶ್,ಜಯಣ್ಣ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...