ಮೈಸೂರು | ಶೋಷಿತರಿಗೆ ಭೂಮಿ, ಮೂಲ ಸೌಕರ್ಯ ಪೂರೈಕೆಗೆ ದಸಂಸ ಆಗ್ರಹ

Date:

ಶೋಷಿತರಿಗೆ ಭೂಮಿ, ವಾಸಿಸಲು ಮನೆ, ನಿವೇಶನ ರಹಿತರಿಗೆ ನಿವೇಶನ, ಸ್ಮಶಾನ ಭೂಮಿ ಮತ್ತು ಮೂಲ ಸೌಕರ್ಯ ಒದಗಿಸುವಂತೆ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ರಾಜ್ಯದ ಆಯಾ ತಾಲೂಕು ಕಚೇರಿ ಎದುರು ಸಾಂಕೇತಿಕ ಧರಣಿ ನಡೆಸಿದರು.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಕಚೇರಿ ಎದುರು ದಸಂಸ ಕಾರ್ಯಕರ್ತರು ಬೇಡಿಕೆ ಈಡೇರಿಸುವಂತೆ ಧರಣಿ ನಡೆಸಿದ್ದು, ತಹಶೀಲ್ದಾರ್‌ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

“ದೇಶ ಅಮೃತ ಮಹೋತ್ಸವ ಸಂಭ್ರಮ ಕಂಡರೂ ಸಂವಿಧಾನದ ಆಶಯಗಳನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ. ಜಾತಿ ಮತ್ತು ಅಸ್ಪಶ್ಯತೆಯ ಆಚರಣೆಗಳನ್ನು ಜೀವಂತವಾಗಿರುಸುತ್ತ, ಕೋಮುವಾದಿ ಶಕ್ತಿಗಳು ಬಲಗೊಳ್ಳುತ್ತಿವೆ. ಸ್ವಾತಂತ್ರ್ಯ ಬಂದು ಎಪ್ಪತ್ತಾರು ವರ್ಷಗಳು ಕಳೆದರೂ ಜಾತಿ ವ್ಯವಸ್ಥೆಯ ಕಪಿಮುಷ್ಟಿಯಿಂದ ದಲಿತರ ಬಿಡುಗಡೆ ಸಾಧ್ಯವಾಗಿಲ್ಲ. ದಲಿತರ ಮೇಲೆ ಅತ್ಯಾಚಾರ, ದೌರ್ಜನ್ಯಗಳು ನಾನಾ ಕಾರಣಗಳಿಗೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಸಮಾನತೆ ಎಂಬುದು ಬರಿ ಕನಸಾಗಿಯೇ ಉಳಿದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಲಿತರ ರಕ್ಷಣೆಗಾಗಿ ಇರುವ ಕಾನೂನುಗಳು ಉಳ್ಳವರ ಕಾಲಡಿಗೆ ಸಿಕ್ಕಿ ನಲುಗುತ್ತಾ ಅತಂತ್ರದ ಸ್ಥಿತಿ ಅನುಭವಿಸುವಂತಾಗಿದೆ. ದಲಿತರಿಗಾಗಿ ರೂಪಿಸಿರುವ ಅನೇಕ ಯೋಜನೆಗಳು ಜನಸಾಮಾನ್ಯರನ್ನು ತಲುಪದೇ ವಂಚನೆಗೆ ಒಳಗಾಗುತ್ತಿದ್ದಾರೆ. ಆಡಳಿತಾರೂಢ ಸರ್ಕಾರಗಳು ಪ್ರಜಾಪ್ರಭುತ್ವದ ಆಶಯಗಳನ್ನು ಸಮರ್ಪಕವಾಗಿ ಈಡೇರಿಸಲು ಸಾಧ್ಯವಾಗುತ್ತಿಲ್ಲ. ದಲಿತರ ಅಭಿವೃದ್ಧಿಯ ಪ್ರಗತಿ ಕೇವಲ ನೆಪಮಾತ್ರವಾಗಿದೆ” ಎಂದು ಆರೋಪಿಸಿದರು.

“ವ್ಯವಸಾಯ ಮಾಡಿ ದುಡಿದು ಬದುಕುತ್ತೇನೆ ಎನ್ನುವ ಸ್ವಾಭಿಮಾನಿ ಶೋಷಿತರಿಗೆ ಭೂಮಿ, ವಾಸಿಸಲು ಮನೆ, ನಿವೇಶನ ರಹಿತರಿಗೆ ನಿವೇಶನ ಸೇರಿದಂತೆ ಇತರ ಮೂಲ ಸೌಕರ್ಯಗಳು ದೊರೆಯುತ್ತಿಲ್ಲ. ಶೀಘ್ರದಲ್ಲಿಯೇ ಇಂತಹ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಮುಂದಾಗಬೇಕು” ಎಂದು ಒತ್ತಾಯಿಸಿದರು.

“ಹುಲ್ಲಹಳ್ಳಿ ಸರ್ವೆ ನಂ. 367ರಲ್ಲಿ 27 ಗುಂಟೆ ಜಮೀನು ಸಿದ್ದಯ್ಯ ಬಿನ್‌ ಸರಕನ ಸಿದ್ದಯ್ಯ ಎಂಬುವರಿಗೆ 1972ರಲ್ಲಿ ಮಂಜೂರಾಗಿದ್ದು, ಕಾಲಾವಧಿಗೂ ಮುಂಚೆ ನಂಬಿಸಿ, ಮೋಸದಿಂದ ಸ್ಥಳೀಯ ಮುಖಂಡ ಎಚ್‌ ಪಿ ಬಸವರಾಜು ಬಿನ್ ಪುಟ್ಟೇಗೌಡ ಆಕ್ರಮವಾಗಿ ಖಾತೆ ಮಾಡಿಸಿಕೊಂಡಿದ್ದಾರೆ. ಆದ್ದರಿಂದ ಇದು ಮೂಲ ಸಾಗುವಳಿದಾರರಿಗೆ ಖಾತೆಯಾಗಬೇಕು. ಹುಲ್ಲಹಳ್ಳಿ ಸರ್ವೆ ನಂ. 12ರಲ್ಲಿ 2 ಎಕರೆ 1 ಗುಂಟೆ ಜಮೀನಿಗೆ ಯಾವುದೇ ಕಡೆಯಿಂದ ರಸ್ತೆ ಇರುವುದಿಲ್ಲ, ಗಜೇಂದ್ರಸಿಂಗ್ ಎಂಬುವವರು ಲೇಔಟ್ ಮಾಡಿ ರಸ್ತೆಯನ್ನು ಬಿಡದೆ ಕಾಂಪೌಂಡ್ ನಿರ್ಮಿಸಿಕೊಂಡಿದ್ದಾರೆ. ಕೂಡಲೇ ರಸ್ತೆಯನ್ನು ಕಲ್ಪಿಸಿಕೊಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಬರಪೀಡಿತ ತಾಲೂಕುಗಳ ಪಟ್ಟಿ; ಅರಸೀಕೆರೆ ಕೈಬಿಟ್ಟಿದ್ದಕ್ಕೆ ಕಾಂಗ್ರೆಸ್‌ ಶಾಸಕ ಕಿಡಿ

“ಚಿಕ್ಕಹಳ್ಳಿ ಗ್ರಾಮದ ಸರ್ವೆ ನಂ 13ರಲ್ಲಿ 2 ಎಕರೆ 17 ಗುಂಟೆ ಜಮೀನು ಹೊಸ ಬಡಾವಣೆಯಾಗಿದೆ. ಇದರಲ್ಲಿ ಒಂದು ಎಕರೆ 2 ಗುಂಟೆ ಅಲಿಲೇಷನ (ಗ್ರಾಮಠಾಣೆ) ಆಗಿದೆ. ಉಳಿದ 1 ಎಕರೆ 4 ಗುಂಟೆ ಅಲಿಲೇಷನ್ ಆಗಿರುವುದಿಲ್ಲ. ಆದರೂ ಸರ್ಕಾರ ಗ್ರಾಮಪಂಚಾಯಿತಿಯಿಂದ ಪರಿಶಿಷ್ಟ ಜಾತಿ ಫಲಾಭವಿಗಳಿಗೆ ತಲಾ 30X40 ನಿವೇಶನ ಹಂಚಿಕೆಯಾಗಿದೆ. ಇದರಲ್ಲಿ 90X60 ನಿವೇಶನ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭವನಕ್ಕೆ ಮೀಸಲಾಗಿದೆ. ಈಗ ಲಿಂಗಾಯತ ಸಮುದಾಯದ ಮಾಧಮ್ಮ ಶಿವಪ್ಪ ಎಂಬುವವರು ಈ ನಿದೇಶನ ನಮಗೆ ಸೇರಬೇಕೆಂದು ತಕರಾರು ನೀಡಿದ್ದಾರೆ. ಆದ್ದರಿಂದ ಡಾ.ಬಿ ಆರ್ ಅಂಬೇಡ್ಕರ್ ಅವರ ಭವನಕ್ಕೆ ಅವಕಾಶ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

ಎಲ್ಲ ಜಾತಿ ಬಡವರು, ಕಾರ್ಮಿಕರು, ಕೃಷಿ ಕೂಲಿಕಾರರು, ಭೂಹೀನ ದಲಿತರು, ವಸತಿ ಮತ್ತು ನಾಗರಿಕ ಸೌಲಭ್ಯಗಳಿಂದ ವಂಚಿತರಾದ ಎಲ್ಲರೂ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಬಜೆಟ್ | ಸಾಂಸ್ಕೃತಿಕ ನಗರಿ ಮೈಸೂರಿನ ನಿರೀಕ್ಷೆಗಳೇನು? ಕಳೆದ ಬಜೆಟ್ ಕಡತದಲ್ಲೇ ಉಳಿಯಿತೇ?

ʼಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರು ಈ ಬಾರಿಯ ಬಜೆಟ್‌ನಲ್ಲಿ...

ಮೈಸೂರು | ಸಹಿಷ್ಣುತೆಯ ಗುಣ ವ್ಯಕ್ತಿತ್ವದ ಬೆಳವಣಿಗೆಯಾಗಿದೆ: ಪ್ರೊ ಎಂ ಬಿ ಸುರೇಶ್

ಕೇಂದ್ರ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ರಾಜ್ಯ ಸರ್ಕಾರ,...

ಹುಣಸೂರು | ಮಕ್ಕಳು ವೈಜ್ಞಾನಿಕ ಮನೋಭಾವನೆ-ವೈಚಾರಿಕತೆ ಬೆಳೆಸಿಕೊಳ್ಳಬೇಕು: ಮಹದೇವ

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಕಟ್ಟೆಮಳಲವಾಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ 'ರಾಷ್ಟ್ರೀಯ...

ಮೈಸೂರು | ತಂಬಾಕು ಬೆಳೆಗಾರರ ಹಿತಕಾಯಲು ಬದ್ಧ; ಉತ್ತಮ ಬೆಲೆಗೆ ಖರೀದಿಸಿ: ಎಚ್ಡಿಕೆ

ಮೈಸೂರಿನ ಭಾರತೀಯ ಬಾಷಾ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರದಂದು ಬೃಹತ್ ಕೈಗಾರಿಕೆ ಸಚಿವರಾದ...