ಮೈಸೂರು | ರಸ್ತೆಗೆ ಅಡ್ಡ ಇಟ್ಟಿರುವ ಬ್ಯಾರಿಕೇಡ್‌ಗಳ ತೆರವಿಗೆ ಆಗ್ರಹ

Date:

ಮೈಸೂರು ಬಸ್ ನಿಲ್ದಾಣದ ಎದುರು ಬಿಎನ್ ರಸ್ತೆಯಲ್ಲಿ 15 ಅಡಿಗಳ ರಸ್ತೆಗೆ ಅಡ್ಡ ಇಟ್ಟಿರುವ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ ನಾರಾಯಣಗೌಡ ಅವರು ಮೈಸೂರು ನಗರ ಪೊಲೀಸ್‌ ಆಯುಕ್ತರಿಗೆ ಮನವಿ ಮಾಡಿದ್ದಾರೆ.

“ಮೈಸೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರಿನ ಬಿಎನ್ ರಸ್ತೆಯಲ್ಲಿ ಬಾಡಿಗೆ ಟ್ಯಾಕ್ಸಿ, ಕಾರುಗಳ ಎದುರು ಸುಮಾರು 15 ಅಡಿಗಳಷ್ಟು ರಸ್ತೆ ಸೇರಿಸಿ ಬ್ಯಾರಿಕೇಡ್‌ಗಳನ್ನು ಇಟ್ಟು, ಸುಮಾರು 250 ಅಡಿಗಳಷ್ಟು ಉದ್ದದ ರಸ್ತೆಯನ್ನು ಅವೈಜ್ಞಾನಿಕವಾಗಿ ಮುಚ್ಚಲಾಗಿದೆ. ಇದು ಯಾವ ಉಪಯೋಗಕ್ಕೂ ಬರುವುದಿಲ್ಲ. ಇದರಿಂದ ಯಾರಿಗೂ ಅನುಕೂಲವಾಗುತ್ತಿಲ್ಲ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಆದೇಶ ಪಾಲಿಸದ ಐವರು ಬಿಲ್ಡರ್‌ಗಳಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ ಗ್ರಾಹಕ ಆಯೋಗ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಸ್ಸುಗಳಲ್ಲಿ ಬಂದಿಳಿದ ಪ್ರಯಾಣಿಕರನ್ನು ಕರೆದುಕೊಂಡು ಹೋಗಲು ಕೆಲವು ಸಾರ್ವಜನಿಕರು ಕಾರುಗಳನ್ನು ನಿಲ್ಲಿಸಿಕೊಂಡು, ಬರುವ ಸಂಬಂಧಿಕರನ್ನು ಕರೆದುಕೊಂಡು ಹೋಗುತ್ತಿದ್ದರು. ಈಗ ಅವರುಗಳು ರಸ್ತೆಯ ಮಧ್ಯ ಭಾಗದಲ್ಲಿ ನಾಲ್ಕು ಚಕ್ರದ ವಾಹನಗಳನ್ನು ನಿಲ್ಲಿಸುವುದರಿಂದ ಇಂತಹ ದೊಡ್ಡ ರಸ್ತೆ ಅರ್ಧ ಮುಚ್ಚಿದಂತೆ ಕಾಣುತ್ತಿದೆ. ಅಲ್ಲಿ ʼNo Parkingʼ ಫಲಕವನ್ನೂ ಹಾಕಲಾಗಿದೆ.  ಬ್ಯಾರಿಕೇಡ್ ಹಾಕಿ 15 ಅಡಿ x 250 ಅಡಿ ರಸ್ತೆ ಮುಚ್ಚಿರುವುದು ಯಾರಿಗೂ ಅನುಕೂಲವಾಗುವುದಿಲ್ಲ. ಆದುದರಿಂದ ರಸ್ತೆ ಸೇರಿಸಿ ಹಾಕಿರುವ ಬ್ಯಾರಿಕೇಡ್‌ಗಳನ್ನು ತೆರೆವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...