ಮೈಸೂರು | ಗಿರಿಜನರಿಗೆ ಅರಣ್ಯ ಹಕ್ಕುಪತ್ರ ವಿತರಣೆ

Date:

ನಿಮ್ಮ ಕೃಷಿ ಭೂಮಿಯಲ್ಲಿ ನೀವೇ ವ್ಯವಸಾಯ ಮಾಡಬೇಕು. ಬೇರೆಯವರು ಬಂದು ನಿಮ್ಮ ಭೂಮಿ ಕೇಳಿದರೆ ಮಾರಾಟ ಮಾಡಬಾರದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಸಿ ಮಹದೇವಪ್ಪ ಗಿರಿಜನರಿಗೆ ಕಿವಿಮಾತು ಹೇಳಿದರು.

ಎಚ್‌ ಡಿ ಕೋಟೆ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡಿ.ಪಿ ಕುಪ್ಪೆ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅರಣ್ಯ ಹಕ್ಕುಪತ್ರ ವಿತರಿಸಿ ಮಾತನಾಡಿದರು.

“ಅರಣ್ಯ ಹಕ್ಕು ಕಾಯ್ದೆಯನ್ನು ಅಂದಿನ ಪ್ರಧಾನಿ ಮನಮೋಹನಸಿಂಗ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅರಣ್ಯದಲ್ಲಿ 70 ವರ್ಷಗಳಿಂದ ವಾಸಿಸುವ ಗಿರಿಜನರ ಹೆಸರಿಗೆ ಖಾತೆ ಮಾಡಿಕೊಡಲು ಜಾರಿಗೆ ತಂದರು. ಭೂ ಮಾಲೀಕರಾಗುವುದು ಒಂದು ಬಗೆಯ ಸಾಮಾಜಿಕ ಸಮಾನತೆಯ ಸಂಕೇತವಾಗಿದೆ. ನಿಮ್ಮ ಭೂಮಿಯಲ್ಲಿ ಅಗತ್ಯವಿರುವ ಆಹಾರ ಧಾನ್ಯಗಳನ್ನು ಬೆಳೆಯಬೇಕು‌. ಪೌಷ್ಠಿಕ ಆಹಾರ ಸೇವನೆ ಮಾಡುವ ಮೂಲಕ ನೀವು ಮತ್ತು ನಿಮ್ಮ ಮಕ್ಕಳು ಹೆಚ್ಚು ಆರೋಗ್ಯವಂತರಾಗಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಿರಿಜನರಿಗೆ ಹಕ್ಕುಪತ್ರ

“ಹಾಡಿಯಲ್ಲಿ ವಾಸಿಸುವ ಜನರು ಕಾಡಿನ ಮಕ್ಕಳಾಗಿದ್ದು, ಕಾಡನ್ನು ಸಂರಕ್ಷಿಸುವಲ್ಲಿ ನಿಮ್ಮ ಪಾತ್ರ ಹಿರಿದು‌. ಈ ಹಿನ್ನೆಲೆಯಲ್ಲಿ ನೀವು ಯಾವುದೇ ದುಶ್ಚಟಗಳಿಗೆ ಒಳಗಾಗಬಾರದು‌. ಇದರಿಂದ ಆರೋಗ್ಯ ಕೆಡುತ್ತದೆ. ಆರ್ಥಿಕವಾಗಿ ನಷ್ಟ ಅನುಭವಿಸಬೇಕಾಗುತ್ತದೆ. ಅನೀಮಿಯ ಮುಕ್ತ ಮಾಡಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ. ಇಲ್ಲಿನ ಎಲ್ಲ ಮಹಿಳೆಯರು ಪೌಷ್ಠಿಕಯುಕ್ತ ಆಹಾರ ಸೇವಿಸಬೇಕು” ಎಂದು ಹೇಳಿದರು.

“ಹಾಡಿಗಳ ಜನರ ಜೀವನ ಸುಧಾರಿಸಲು ಜಿಲ್ಲಾ ಮಟ್ಟದಲ್ಲಿ ಒಂದು ಸಮಿತಿ ರಚಿಸಿ ಸರ್ಕಾರದ ಯೋಜನೆಗಳು ಗಿರಿಜನರಿಗೆ ತಲುಪಿಸುವಲ್ಲಿ ಕ್ರಮವಹಿಸಲಾಗುವುದು. ಅನುವಂಶಿಕವಾಗಿ ಬರುವ ಖಾಯಿಲೆಗಳನ್ನು ತಡೆಗಟ್ಟಲು ಸಂಬಂಧಗಳಲ್ಲದೆ ಬೇರೆ ಕಡೆಗೆ ವಿವಾಹವಾಗುವುದನ್ನು ರೂಢಿಸಿಕೊಳ್ಳಿ” ಎಂದು ಹೇಳಿದರು.

ಹಕ್ಕುಪತ್ರ 2

ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, “ಈ ಭಾಗದಲ್ಲಿ ಶೈಕ್ಷಣಿಕ ಸೌಲಭ್ಯ ಅಗತ್ಯವಿದೆ. ಒಂದರಿಂದ ಪಿಯುಸಿವರಗೆ ತರಗತಿಗಳನ್ನು ತೆರೆದು ಇಲ್ಲಿನ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ನೆರವು ಒದಗಿಸಬೇಕು. ಉದ್ಯೋಗ ಖಾತ್ರಿ ಯೋಜನೆ ಮೂಲಕ ಜನರಿಗೆ ದಿನನಿತ್ಯ ಕೆಲಸ ನೀಡಬೇಕು. ಸಣ್ಣ ಕೈಗಾರಿಕೆಯನ್ನು ಆರಂಭಿಸುವ ಮೂಲಕ ದುಡಿಯುವ ಕೈಗಳಿಗೆ ಕೆಲಸ ನೀಡಿ ಆರ್ಥಿಕ ಸಬಲರನ್ನಾಗಿಸಲು ಸರ್ಕಾರ ಗಮನಹರಿಸಬೇಕು” ಎಂದು ಹೇಳಿದರು.

ಇದಕ್ಕೂ ಮುನ್ನ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ ಅವರು ತಾಲೂಕಿನ ಭೋಗಾಪುರ, ಹುಲ್ಮೆಟ್ಲು, ಗುಂಡ್ರೆ, ಮಚ್ಚೂರು ಗ್ರಾಮದಲ್ಲಿನ ಬುಡಕಟ್ಟು ಸಮುದಾಯದ 249 ಕುಟುಂಬಳಿಗೆ 2006ರ ಅರಣ್ಯ ಹಕ್ಕು ಕಾಯ್ದೆಯಡಿ ಅರಣ್ಯ ಹಕ್ಕುಪತ್ರಗಳನ್ನು ವಿತರಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯಿತ್ರಿ, ಉಪ ವಿಭಾಗಾಧಿಕಾರಿ ರುಚಿ ಬಿಂದಾಲ್, ತಹಸೀಲ್ದಾರ್ ಶ್ರೀನಿವಾಸ್, ತಾಲೂಕು ಪಂಚಾಯತ್ ಇಒ ಧರಣೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಬಹುತೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...