ಮೈಸೂರು | ದಸರಾಕ್ಕೆ ರಾಜಮನೆತನವನ್ನು ಆಹ್ವಾನಿಸಿದ ಡಾ. ಹೆಚ್.ಸಿ ಮಹದೇವಪ್ಪ

Date:

ಮೈಸೂರು ದಸರಾ ಉತ್ಸವಕ್ಕೆ ಮೈಸೂರು ಒಡೆಯರ್ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಆಹ್ವಾನಿಸಿದ್ದಾರೆ.

ಶುಕ್ರವಾರ ಅರಮನೆಯಲ್ಲಿರುವ ನಿವಾಸದಲ್ಲಿ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ಅಧಿಕೃತ ಆಹ್ವಾನ ನೀಡಿದ್ದಾರೆ. ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನದ ಚೆಕ್‌ಅನ್ನೂ ನೀಡಿದ್ದಾರೆ.

ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಶಾಸಕ ಶ್ರೀವತ್ಸ, ಮೇಯರ್ ಶಿವಕುಮಾರ್, ಉಪಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು, ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ, ಅರಮನೆ ಎಸಿಪಿ ಹೆಚ್.ಎಂ.ಚಂದ್ರಶೇಖರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...