ಮೈಸೂರು | ಅಮಾನವೀಯತೆಗೆ ಸಾಕ್ಷಿಯಾದ ಸರ್ಕಾರಿ ಆಸ್ಪತ್ರೆ; ನೌಕರನನ್ನು ಮಲದಗುಂಡಿಗೆ ಇಳಿಸಿ ದೌರ್ಜನ್ಯ

Date:

ನಾವು ಚಂದ್ರನ ಮೇಲೆ ಕಾಲಿಟ್ಟು ವಿಜ್ಞಾನಯುಗದಲ್ಲಿ ಇದ್ದರೂ, ನಮ್ಮ ಮನಸ್ಥಿತಿಗಳು ಮಾತ್ರ ಮ್ಯಾನ್‌ ಹೋಲ್ಗೆ ಒಬ್ಬ ವ್ಯಕ್ತಿಯನ್ನು ಇಳಿಸುವ ಮಟ್ಟಕ್ಕೆ ಅಮಾನವೀಯವಾಗಿವೆ. ಇದನ್ನು ಮೈಸೂರು ಜಿಲ್ಲೆಯ ಎಚ್‌.ಡಿ ಕೋಟೆ ತಾಲೂಕು ಸರಕಾರಿ ಆಸ್ಪತ್ರೆ ಸಾಬೀತು ಮಾಡಿದೆ. ಆಸ್ಪತ್ರೆ ಆಡಳಿತ ಡಿ ದರ್ಜೆ ನೌಕರರನ್ನು ಬಲವಂತವಾಗಿ ಮ್ಯಾನ್ ಹೋಲ್ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಿದ ಅಮಾನವೀಯತೆ ಘಟನೆ ನಡೆದಿದೆ. ಆರೋಗ್ಯ ಕವಚವೆಂದು ಕರೆಯುವ ಆಸ್ಪತ್ರೆಯೇ ಅನಾರೋಗ್ಯಕರ ಮಲಗುಂಡಿಗಳಲ್ಲಿ ಮನುಷ್ಯರನ್ನು ಇಳಿಸಿ ದುರಂತ ಘಟನೆಗೆ ಸಾಕ್ಷಿಯಾಗಿದೆ.

ಅಕ್ಟೋಬರ್‌ 13ರಂದು ಈ ಘಟನೆ ನಡೆದಿದೆ. ಡಿ ದರ್ಜೆ ನೌಕರರನಿಗೆ ಮಲದಗುಂಡಿಗಳನ್ನು ಸ್ವಚ್ಚ ಮಾಡುವಂತೆ ಆಸ್ಪತ್ರೆಯ ಆಡಳಿಮಂಡಳಿ ಆದೇಶಿಸಿದ್ದು, ಒತ್ತಾಯದಿಂದ ಗುಂಡಿಗೆ ಇಳಿಸಿದ್ದಾರೆ. ಎಚ್‌ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೆಡಿಕಲ್‌ ಆಫೀಸರ್‌ ಡಾ. ಸೋಮಣ್ಣ, ನರ್ಸ್‌ ಪರಿಮಳ, ಪರುಶುರಾಮ್‌ ಎಂಬುವವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಕುರಿತು ಈ ದಿನ.ಕಾಮ್‌ಗೆ ಸಫಾಯಿ ಕರ್ಮಚಾರಿ ಕಾವಲು ಸಮಿತಿಯ ರಾಜ್ಯ ಸಂಚಾಲಕ ಓಬಲೇಶ್‌ ಮಾಹಿತಿ ನೀಡಿದ್ದಾರೆ. “ಘಟನೆ ಬಗ್ಗೆ ವಿಜಲೆನ್ಸ್ ಕಮಿಟಿ ಸದಸ್ಯರು ನನಗೆ ಫೋನ್ ಮಾಡಿ ತಿಳಿಸಿದರು. ನಾನು, ನಮ್ಮ ಸಫಾಯಿ ಕರ್ಮಚಾರಿ ಆಯೋಗದ ಕಾರ್ಯದರ್ಶಿಗಳಿಗೆ ವಾಟ್ಸಪ್ ಮೂಲಕ ದೂರು ನೀಡಿದ್ದೇನೆ. ಅವರು ತಕ್ಷಣ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿಕೊಟ್ಟು ತನಿಖೆ ಮಾಡುವಂತೆ ತಿಳಿಸಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಾವು ಅವರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ದೇಶದಲ್ಲಿ ಮಲಹೊರುವ ಪದ್ಧತಿ ನಿಷೇದವಾಗಿ ವರ್ಷಗಳೇ ಉರುಳಿದರೂ, 1993ರ ಕಾಯ್ದೆ ಇದ್ದಾಗ, ಅದು ಸರಿಯಿಲ್ಲವೆಂದು ಹೊಸ ಕಾಯ್ದೆಯನ್ನು 2013ರಲ್ಲಿ ಜಾಯಿಮಾಡಲಾಗಿದೆ. ಈ ಕಾಯ್ದೆ ಪ್ರಕಾರ, ಯಾರು ಕಾಯ್ದೆ ಉಲ್ಲಂಘನೆ ಮಾಡುತ್ತಾರೋ ಅವರಿಗೆ ಶಿಕ್ಷೆಯಾಗಬೇಕು ಮತ್ತು ಜಾಮೀನು ರಹಿತ ಕೇಸ್‌ ಹಾಕಬೇಕು ಎಂದು ಸ್ಪಷ್ಟವಾಗಿದೆ.ಸರ್ಕಾರ ಸಹ ಸುತ್ತೋಲೆ ಹೊರಡಿಸಿದೆ.ಇಷ್ಟಾದರೂ ದುರಹಂಕಾಋ ತೋರಿಸುವ ಅಧಿಕಾರಿಗಳು, ಸಿಬ್ಬಂದಿ ವರ್ಗ ಉದ್ದೇಶಪೂರ್ವಕವಾಘಿ ಸಫಾಯಿ ಕರ್ಮಚಾರಿಗಳನ್ನು ಮಲದಗುಂಡಿಗೆ ಇಳಿಸಿಸುವ ಕೆಲಸ ಆಗಿಂದಾಗ್ಗೆ ನಡೆಯುತ್ತಲೇ ಇವೆ. ಈ ವಿಷಯವಾಗಿ ಸರ್ಕಾರ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು. ವೈದ್ಯಾಧಿಕಾರಿ ಮತ್ತು ಇನ್‌ಚಾರ್ಜ್‌ ನರ್ಸ್‌ ಹಾಗೂ ಗುತ್ತಿಗೆದಾರನನ್ನು ತಕ್ಷಣವೇ ಬಂಧಿಸಬೇಕು. ಪಿಎಂಎಸ್‌ಆರ್‌ ಕಾಯ್ದೆ ಮತ್ತು ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...