ಮೈಸೂರು | ಜೆಡಿಎಸ್‌ಗೆ ಸಾಮೂಹಿಕ ರಾಜೀನಾಮೆ

Date:

ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟಕ್ಕೆ ಜೆಡಿಎಸ್‌ ಸೇರ್ಪಡೆಯಾಗಿದ್ದು, ಜೆಡಿಎಸ್‌ನ ಹಲವರಲ್ಲಿ ಅಸಮಾಧಾನ ಹುಟ್ಟುಹಾಕಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ಹಲವಾರು ಜೆಡಿಎಸ್‌ ಮುಖಂಡರು ಪಕ್ಷ ತೊರೆದಿದ್ದಾರೆ. ಇದೀಗ, ಮೈಸೂರಿನಲ್ಲಿ ಪಕ್ಷದ ಮುಸ್ಲಿಂ ನಾಯಕರು ಜೆಡಿಎಸ್‌ಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಜೆಡಿಎಸ್‌ನ ರಾಜ್ಯ ಕಾರ್ಯದರ್ಶಿ ಶಾಹಿದ್ ಸೇರಿದಂತೆ ಹಲವಾರು ಮಂದಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. “ಜಾತ್ಯತೀತ ಪಕ್ಷವು ಕೋಮುವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವುದು ಸರಿಯಲ್ಲ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಜೆಡಿಎಸ್‌ ಜಾತ್ಯತೀಯ ಪಕ್ಷವೆಂದು ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಬಂದಿದ್ದೆವು. ಆದರೆ, ಪಕ್ಷವು ಕೋಮುವಾದಿ ಪಕ್ಷದ ಜೊತ ಮೈತ್ರಿ ಮಾಡಿಕೊಂಡಿದೆ. ಇದು ಜಾತ್ಯತೀಯ ನಡೆಯಲ್ಲ. ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಸೌಹಾರ್ದತೆ ಹಾಳು ಮಾಡುವ ಕೃತ್ಯಗಳು ನಡೆದಿದ್ದವು. ಆ ಪಕ್ಷದೊಂದಿಗೆ ಮೈತ್ರಿ ಸರಿಯಲ್ಲ” ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...