ಮೈಸೂರು | ಜೀತದಾಳಾಗಿ ದುಡಿಯುತ್ತಿದ್ದ ನೇಪಾಳಿ ಮಹಿಳೆ, ಇಬ್ಬರು ಮಕ್ಕಳ ರಕ್ಷಣೆ

Date:

ಮೈಸೂರು ಜಿಲ್ಲೆಯ ಕೈಲಾಸಪುರ ಗ್ರಾಮದ ಜಮೀನಿನಲ್ಲಿ ಜೀತದಾಳುಗಳಾಗಿ ದುಡಿಯುತ್ತಿದ್ದ ನೇಪಾಳಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ನೇಪಾಳ ಮೂಲದ ನಿರ್ಮಲಾ ತನ್ನ ಪತಿ ಗೋಪಾಲ್ ಮತ್ತು ಇಬ್ಬರು ಮಕ್ಕಳೊಂದಿಗೆ ಈರೇಗೌಡ ಎಂಬವರ ಜಮೀನಿನಲ್ಲಿ ಕೆಲಸ ಮಾಡಲು ಬಂದಿದ್ದರು. ಅವರು ಕಳೆದ ಒಂದೂವರೆ ವರ್ಷಗಳಿಂದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು.

ಈರೇಗೌಡ ಎಂಬಾತ ಗೋಪಾಲ್‌ಗೆ ₹300 ಮತ್ತು ನಿರ್ಮಲಾಗೆ ₹200ರಂತೆ ದಿನಗೂಲಿ ನಿಗದಿಪಡಿಸಿದ್ದರು. ಅವರು ಪ್ರತಿದಿನ ಬೆಳಿಗ್ಗೆ 4 ರಿಂದ ರಾತ್ರಿ 8 ರವರೆಗೆ ಕೆಲಸ ಮಾಡಲು ಒತ್ತಾಯಿಸಿದ್ದರು. ಈ ಬಗ್ಗೆ ಪ್ರಶ್ನಿಸಿದಾಗ ದಂಪತಿಗಳನ್ನು ಬೇರ್ಪಡಿಸಿದ್ದ ಈರೇಗೌಡ, ಅವರನ್ನು ಬೇರೆ ಬೇರೆ ಊರುಗಳಲ್ಲಿ ಇಟ್ಟು ದುಡಿಸುತ್ತಿದ್ದ. ಗೋಪಾಲ್ ಅವರನ್ನು ಕೊಡಗಿನಲ್ಲಿ ಇರಿಸಿದ್ದರು. ಕುಟುಂಬದೊಂದಿಗೆ ಸಂವಹನ ನಡೆಸಲು ಮತ್ತು ನಿರ್ಮಲಾಗೆ ಅವನೊಂದಿಗೆ ದೂರವಾಣಿಯಲ್ಲಿ ಮಾತನಾಡಲೂ ಅವಕಾಶವಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತನ್ನ ಮೇಲೆ ಹಲವು ಬಾರಿ ಹಲ್ಲೆ ನಡೆಸಿದ್ದು, ಆಹಾರವನ್ನು ನೀಡದೆ ಚಿತ್ರಹಿಂಸೆ ನೀಡಿದ್ದಾರೆ ಮತ್ತು ಗೌಡರು ನಮ್ಮ ಮಕ್ಕಳಿಂದಲೂ ದುಡಿಮೆ ಮಾಡಿಸಿಕೊಳ್ಳುತ್ತಿದ್ದಾರೆ. ನಾವು ನಮ್ಮ ಊರಿಗೆ ಮರಳದಂತೆಯೂ ತಡೆದಿದ್ದಾರೆ” ಎಂದು ಸಂತ್ರಸ್ತೆ ನಿರ್ಮಲಾ ಆರೋಪಿಸಿದ್ದು, ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಿಡುಗಡೆಯಾಗದ ಅನುದಾನ; ತಾತ್ಕಾಲಿಕ ಶೆಡ್‌ನಲ್ಲಿ ಕುಟುಂಬ

ತಹಶೀಲ್ದಾರ್ ಶ್ರೀನಿವಾಸ್, ಸಿಡಿಪಿಒ ಆಶಾ ಮತ್ತು ಸಮಾಜ ಕಲ್ಯಾಣ ಇಲಾಖೆ ಮತ್ತು ಬುಡಕಟ್ಟು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ನೇತೃತ್ವದ ತಂಡವು ಜಮೀನಿನ ಮೇಲೆ ದಾಳಿ ನಡೆಸಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳನ್ನು ರಕ್ಷಿಸಿದೆ.

ನಿರ್ಮಲಾ ಮತ್ತು ಅವರ ಮಕ್ಕಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ವಶಕ್ಕೆ ಒಪ್ಪಿಸಿದ್ದು, ಅಧಿಕಾರಿಗಳು ಆರೋಪಿ ಭೂಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...