ಮೈಸೂರು | ನಮ್ಮ ಸರ್ಕಾರ ರೈತರ ಪರವಿದೆ: ಸಚಿವ ಡಾ.ಹೆಚ್.ಸಿ ಮಹದೇವಪ್ಪ

Date:

ನಮ್ಮ ಸರ್ಕಾರವು ರೈತರ ಬೇಡಿಕೆಯ ಪರವಾಗಿಯೇ ಇದೆ. ಈಗಾಗಲೇ ರೈತರ ಸಮಸ್ಯೆ ಕುರಿತು ಮುಖ್ಯಮಂತ್ರಿಗಳೊಟ್ಟಿಗೆ ಮಾತನಾಡಿಗದ್ದೇ‌ನೆ. ರೈತರಿಗೆ ಅಗತ್ಯವಿರುವ ಸಮಯಕ್ಕೆ ವಿದ್ಯುತ್ ನೀಡಲು ತಿಳಿಸಿದ್ದಾರೆ. ಅದರಂತೆ ಚಸ್ಕಾಂ ಅಧಿಕಾರಿಗಳೊಂದಿಗೆ ವಿದ್ಯುತ್ ಸಮಸ್ಯೆ ಕುರಿತು ಚರ್ಚಿಸಿ ರೈತರಿಗೆ ಬೆಳೆ ಬೆಳೆಯಲು ಪಂಪ್ ಸೆಟ್‌ಗಳಿಗೆ ಅಗತ್ಯಗನುಸಾರ ಗುಣಾತ್ಮಕ ವಿದ್ಯುತ್ ನೀಡುವಂತೆ ಸೂಚಿಸುತ್ತೇನೆ ಎಂದು ಸಚಿವ ಡಾ. ಹೆಚ್‌.ಸಿ ಮಹದೇವಪ್ಪ ಭರವಸೆ ನೀಡಿದರು.

ಮೈಸೂರಿನ ವಿಜಯನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಕಚೇರಿಯ ಎದುರು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯ ಸ್ಥಳಕ್ಕೆ ಭೇಟಿ ನೀಡಿ ರೈತರ ಹಕ್ಕೊತ್ತಾಯಗಳನ್ನು ಸಚಿವರು ಆಲಿಸಿದರು.

ಬಳಿಕ ಮಾತನಾಡಿದ ಸಚಿವರು, “ನೂರು ವರ್ಷಗಳಿಂದ ಇಲ್ಲದ ಬರ ರಾಜ್ಯದಲ್ಲಿ ಉಂಟಾಗಿದೆ. ಅನೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ನಮ್ಮ ರೈತರು ಸಂಕಷ್ಟಕ್ಕೆ ಸಿಲುಕಿರುವುದು ಸರ್ಕಾರದ ಗಮನದಲ್ಲಿದೆ. ಇಂತಹ ಸಂದರ್ಭದಲ್ಲಿ ಸರ್ಕಾರವು ರೈತರ ಜೊತೆ ಇರುತ್ತದೆ. ಎಂದಿಗೂ ಕೈಬಿಡುವುದಿಲ್ಲ. ರೈತರಿಗೆ ಅನುಕೂಲವಾಗುವ ಎಲ್ಲಾ ಕ್ರಮಗಳನ್ನು ಸರ್ಕಾರ ಅನುಸರಿಸಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರು ನೀಡಿರುವ ಎಂಟು ಅಂಶಗಳ ಬೇಡಿಕೆಯನ್ನು ಈಡೇರಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು. ಎಲ್ಲಾ ಅಂಶಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗುವುದು. ಜಿಲ್ಲಾ ಮಟ್ಟದ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವಂತೆ ಅಧಿಕಾರಿಗಳಗೆ ಸೂಚಿಸಿದ್ದೇನೆ” ಎಂದು ತಿಳಿಸಿದರು.

“ಜಿಲ್ಲೆಯಲ್ಲಿ ರೈತರ ವಿವಿಧ ಸಮಸ್ಯೆಗಳ ಬಗ್ಗೆ ಪ್ರತ್ಯೇಕ ಸಭೆ ನಡೆಸಿ ರೈತಮುಖಂಡರಿಗೆ ಆರೋಗ್ಯಕರ ಚರ್ಚೆಗೆ ಅವಕಾಶ ಕಲ್ಪಿಸಲಾಗುವುದು. ಸಭೆಯಲ್ಲಿ ರೈತರು ತಮ್ಮ ಸಲಹೆಗಳನ್ನು ನೀಡಬಹುದು‌‌. ರೈತರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಲ್ಲರೂ ಸೇರಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡೋಣ” ಎಂದರು.

ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರಾಜ್ಯ ಉಪಾಧ್ಯಕ್ಷ ಮಹೇಶ್ ಪ್ರಭು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಸೇರಿದಂತೆ ವಿವಿಧ ತಾಲ್ಲೂಕಿನ ರೈತ ಮುಖಂಡರು ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...