ಮೈಸೂರು | ಸಂಸದ ಪ್ರತಾಪ್ ಸಿಂಹ ವಿರುದ್ಧ ತನಿಖೆಯಾಗಲಿ: ಸಚಿವ ಡಾ. ಹೆಚ್.ಸಿ ಮಹದೇವಪ್ಪ 

Date:

ಲೋಕಸಭಾ ಚುನಾವಣೆ ಅವಧಿ ಹತ್ತಿರ ಬಂತೆಂದರೆ ಸಾಕು, ಒಂದಿಲ್ಲೊಂದು ರೀತಿಯ ಭದ್ರತಾ ವೈಫಲ್ಯಗಳು ಉಂಟಾಗಿರುವುದನ್ನು ಇತಿಹಾಸ ನಮಗೆ ತಿಳಿಸಿಕೊಡುತ್ತದೆ. ಮೈಸೂರಿನ ಸಂಸದರೇ ಆಗಂತುಕ ಆರೋಪಿಗೆ ಪಾಸ್ ನೀಡಿರುವುದು ಸ್ಪಷ್ಟವಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ.

“2001ರಲ್ಲಿ ಎಲ್.ಕೆ ಅಡ್ವಾಣಿ ಅವರು ಗೃಹ ಸಚಿವರಾಗಿದ್ದಾಗ ಸಂಸತ್ ಮೇಲೆ ದಾಳಿ ನಡೆದಿತ್ತು. ಕಳೆದ ಚುನಾವಣೆ ಸಂದರ್ಭದಲ್ಲಿ ಭದ್ರತಾ ವೈಫಲ್ಯದ ಪರಿಣಾಮ ಪುಲ್ವಾಮ ಗಡಿಯ ಒಳಗೆ ಬರೋಬ್ಬರಿ 300 ಕೆ.ಜಿ.ಯಷ್ಟು ಆರ್‌ಡಿಎಕ್ಸ್‌ ಪ್ರವೇಶಿಸಿತ್ತು. ಅದರ ಸ್ಪೋಟದಿಂದ ನಮ್ಮ ಸೈನಿಕರು ಬಲಿಯಾದರು. ಅಚ್ಚರಿ ಎಂದರೆ ಈವರೆಗೂ ಕೂಡಾ ಪುಲ್ವಾಮ ಗಡಿಯಲ್ಲಿ ಆರ್‌ಡಿಎಕ್ಸ್‌ ಹೇಗೆ ಬಂತು ಎಂಬುದರ ಬಗ್ಗೆ ಯಾವ ತನಿಖೆಯೂ ಆಗಿಲ್ಲ” ಎಂದು ಆರೋಪಿಸಿದ್ದಾರೆ.

“ಇದೀಗ ಮತ್ತೆ ಲೋಕಸಭೆಯೊಳಗೆ ಭದ್ರತಾ ವೈಫಲ್ಯದಿಂದಾಗಿ ಆತಂಕ ಸೃಷ್ಟಿ ಆಗಿದೆ. ಒಂದು ವೇಳೆ ಲೋಕಸಭೆಯಲ್ಲಿ ಏನಾದರೂ ದೊಡ್ಡ ಅನಾಹುತ ಘಟಿಸಿದ್ದರೆ ಅದಕ್ಕೆ ಯಾರು ಜವಾಬ್ದಾರಿ? ಭದ್ರತಾ ದೃಷ್ಟಿಯಿಂದ ಸಂಸದ ಪ್ರತಾಪ್ ಅವರನ್ನು ತನಿಖೆಗೆ ಒಳಪಡಿಸಬೇಕು ಮತ್ತು ಇದರ ಹಿಂದಿನ ನೈಜ ಕಾರಣಗಳನ್ನು ಪತ್ತೆ ಹಚ್ಚಬೇಕು” ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸತ್‌ ಮೇಲೆ ದಾಳಿ: ನಜರ್ಬಾದ್ ನಟರಾಜ್ ಖಂಡನೆ

“ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ದೇಶದ ಸಂಸತ್ ಭವನದ ಮೇಲೆ ದಾಳಿ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಕರ್ತವ್ಯವಾಗಿದೆ” ಎಂದು ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್ ತಿಳಿಸಿದ್ದಾರೆ.

“22 ವರ್ಷಗಳ ಹಿಂದೆ ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. ಅಂದು ಕೂಡ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಂಸತ್‌ ಘಟನೆಯ ಆರೋಪಿ ಎಸ್‌ಎಫ್‌ಐನವರೆಂದು ಅಪಪ್ರಚಾರ; ಕಾನೂನು ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

“ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕನಿಗೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ” ಎಂದರು.

“ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...