ಮೈಸೂರು | ʼಸಂಸದರನ್ನು ಅಮಾನತು ಪ್ರಜಾಪ್ರಭುತ್ವದ ಹತ್ಯೆʼ

Date:

ಸಂಸದರನ್ನು ಅಮಾನತು ಮಾಡಿರುವ ಮೋದಿ ಸರ್ಕಾರದ ಈ ನಡೆ ಪ್ರಜಾಪ್ರಭುತ್ವದ ಹತ್ಯೆ ಎಂದು ಎಸ್‌ಡಿಪಿಐ ಖಂಡಿಸಿದ್ದು ಪ್ರತಿಭಟನೆ ನಡೆಸಿದೆ.

ಈ ವೇಳೆ ಮಾತನಾಡಿದ ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷ ರಫತ್ ಖಾನ್,  ಭಾರತದ ಸಂಸತ್ತು ಪ್ರಜಾಪ್ರಭುತ್ವದ ಆತ್ಮ. ಅಲ್ಲಿ ಆಡಳಿತ ಪಕ್ಷದ ಪ್ರಾಮುಖ್ಯತೆ ಎಷ್ಟಿದೆಯೋ ವಿರೋಧ ಪಕ್ಷದ ಅವಶ್ಯಕತೆಯೂ ಅಷ್ಟೇ ಮುಖ್ಯವಾಗಿರುತ್ತದೆ. ವಿಪಕ್ಷವಿಲ್ಲದ ಪ್ರಜಾಪ್ರಭುತ್ವ ಆತ್ಮವಿಲ್ಲದ ದೇಹವಿದ್ದ ಹಾಗೆ.

ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಕೇವಲ ಪ್ರಶ್ನೆ ಮಾಡಿದ್ದಕ್ಕೆ, ಸುಮಾರು 141 ಜನ ವಿಪಕ್ಷದ ಸಂಸತ್ ಸದಸ್ಯರನ್ನು ಅಂದರೆ ಶೇ.70 ರಷ್ಟು ವಿರೋಧ ಪಕ್ಷದ ಚುನಾಯಿತ ಪ್ರತಿನಿಧಿಗಳನ್ನು ಅಮಾನತು ಮಾಡಿರುವ ಕ್ರಮ ನಿರಂಕುಶ ಪ್ರಭುತ್ವದ ಪರಮಾವಧಿ ಮತ್ತು ಪ್ರಜಾಪ್ರಭುತ್ವದ ಹತ್ಯೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ ಅತಿದೊಡ್ಡ ಪಂಚಾಯತ್ ಎಂದು ಕರೆಯಲ್ಪಡುವ ಸಂಸತ್ತಿನ ಒಳಗೆ ನಿರಾಯಾಸವಾಗಿ ಅಪರಿಚಿತರು ಪ್ರವೇಶ ಮಾಡಿ ಹೊಗೆ ಬಾಂಬೆ ಸ್ಪೋಟಿಸಿರುವುದು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ವೈಫಲ್ಯ. ಆ ಕುರಿತು ಸಂಸತ್ತಿನಲ್ಲಿ ದೇಶದ ಗೃಹಮಂತ್ರಿ ಹೇಳಿಕೆ ನೀಡಬೇಕಾದದ್ದು ಅವರ ಪ್ರಾಥಮಿಕ ಕರ್ತವ್ಯ. ಆದರೆ, ಸರ್ವಾಧಿಕಾರಿ ಧೋರಣೆಯ ಈ ಸರ್ಕಾರ ಹೇಳಿಕೆ ನೀಡುವ ಬದಲು ಈ ವಿಚಾರದಲ್ಲಿ ಸಂಸತ್ ನಲ್ಲಿ ಚರ್ಚೆಗೆ ಒತ್ತಾಯಿಸಿದ ವಿಪಕ್ಷದ ಸಂಸದರನ್ನು ಅಮಾನತು ಮಾಡುವ ಮೂಲಕ ವಿಪಕ್ಷದ ಬಾಯಿಯನ್ನು ಮಾತ್ರವಲ್ಲ, ಇಡೀ ದೇಶದ ಬಾಯಿ ಮುಚ್ಚಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಇದು ದೇಶದಲ್ಲಿ ಅಘೋಷಿತ ತುರ್ತುಸ್ಥಿತಿಯ ವಾತಾರಣ ಇದೆ ಎಂದು ತೋರಿಸುತ್ತದೆ. ಮೋದಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಎಸ್‌ಡಿಪಿಐ ತೀವ್ರವಾಗಿ ಖಂಡಿಸುತ್ತದೆ. ಸದನದಲ್ಲಿ ಬಹುತೇಕ ಎಲ್ಲ ವಿಪಕ್ಷ ಸದಸ್ಯರು ಅಮಾನತಾಗಿ ಹೊರಗುಳಿದಿರುವ ಸಂದರ್ಭದಲ್ಲಿ ಭಾರತದ ನ್ಯಾಯ ಸಂಹಿತೆಗಳನ್ನು ಮರು ವ್ಯಾಖ್ಯಾನ ಮಾಡುವಂತಹ ಬಹುಮುಖ್ಯ ಕಾಯಿದೆಯನ್ನು ಮಂಡಿಸಿ ಅದನ್ನು ಅಂಗೀಕರಿಸುವ ಸಂಚು ಮಾಡಲಾಗಿದೆ.

ಈ ಅಮಾನತುಗಳ ಹಿಂದೆ ಈ ಮಸೂದೆಗೆ ಎದುರಾಗಬಹುದಾದ ಆಕ್ಷೇಪಣೆ ಮತ್ತು ವಿರೋಧವನ್ನು ಇಲ್ಲವಾಗಿಸುವುದೇ ಆಗಿದೆ. ಬಿಜೆಪಿ ಮತ್ತು ಪ್ರಧಾನಿ ಮೋದಿಯವರು ತಮ್ಮ ಈ ನಿರಂಕುಶ ಆಡಳಿತ, ಸಂವಿಧಾನ ವಿರೋಧಿ ನಡವಳಿಕೆಯನ್ನು ತಿದ್ದಿಕೊಂಡು ವಿಪಕ್ಷದ ಎಲ್ಲ ಸದಸ್ಯರ ಅಮಾನತು ವಾಪಸ್ ಪಡೆದು ಪ್ರಜಾಪ್ರಭುತ್ವದ ಗೌರವವನ್ನು ಉಳಿಸಬೇಕು ಎಂದು ಎಸ್‌ಡಿಪಿಐ ಆಗ್ರಹಿಸುತ್ತದೆ ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...