ಮೈಸೂರು | ರೈತನ ಮೇಲೆ ಹುಲಿ ದಾಳಿ; ಪರಿಶೀಲನೆಗೆ ಬಂದ ಅರಣ್ಯ ಸಿಬ್ಬಂದಿಗೆ ಥಳಿಸಿದ ಗ್ರಾಮಸ್ಥರು

Date:

ಹುಲಿ ದಾಳಿಯಿಂದ ರೈತರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದಾಳಿ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿದ್ದು, ಆ ವೇಳೆ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ನಂಜನಗೂಡು ತಾಲೂಕಿನ ಮಹದೇವನಗರ ಗ್ರಾಮದಲ್ಲಿ ರೈತ ಮಹದೇವೇಗೌಡ ಮೇಲೆ ಹುಲಿ ದಾಳಿ ಮಾಡಿತ್ತು. ಗಾಯಗೊಂಡ ರೈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಇತ್ತ, ಗ್ರಾಮಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿ ದಾಳಿಯಿಂದ ಬೇಸತ್ತಿದ್ದ ಗ್ರಾಮಸ್ಥರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಮಹಾಂತೇಶ್ ಹಲ್ಲೆಗೀಡಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...