ಮೈಸೂರು | ವಿಚಾರಣೆಗೆ ಕರೆತಂದಿದ್ದ ಯುವಕ ಆತ್ಮಹತ್ಯೆ ಪ್ರಕರಣ; ಇಬ್ಬರು ಪೊಲೀಸರ ಅಮಾನತು

Date:

ವಿಚಾರಣೆಗಾಗಿ ಕರೆತಂದ ಯುವಕ ಠಾಣೆಯಿಂದ ತಪ್ಪಿಸಿಕೊಂಡು ಹೋಗಿ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ನಂಜನಗೂಡು ತಾಲೂಕು ಬಿಳಿಗೆರೆ ಪೊಲೀಸ್ ಠಾಣೆಯ ಹೆಡ್​ ಕಾನ್ಸ್‌ಟೆಬಲ್​ ನಂಜೇಶ್ ಹಾಗೂ ಕಾನ್ಸ್‌ಟೆಬಲ್‌ ಪ್ರಸನ್ನ ಕುಮಾರ್ ಅಮಾನತಾಗಿರುವ ಸಿಬ್ಬಂದಿಗಳು.

ಗಲಾಟೆ ವಿಚಾರದಲ್ಲಿ ನವೆಂಬರ್ 12 ರಂದು ಬಿಳಿಗೆರೆ ಠಾಣೆಯ ಎಸ್​ಐ, ಇಬ್ಬರು ಆರೋಪಿಗಳನ್ನು ಠಾಣೆಗೆ ಕರೆತಂದಿದ್ದರು. ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆಯಲು ಸಬ್ ಇನ್ಸ್‌ಪೆಕ್ಟರ್ ತೆರಳಿದ್ದರು. ಈ ವೇಳೆ ಇಬ್ಬರು ಆರೋಪಿಗಳ ಜವಾಬ್ದಾರಿ ಕರ್ತವ್ಯದಲ್ಲಿದ್ದ ನಂಜೇಶ್ ಹಾಗೂ ಪ್ರಸನ್ನ ಕುಮಾರ್ ಅವರದ್ದಾಗಿತ್ತು. ಇಬ್ಬರು ಆರೋಪಿಗಳ ಪೈಕಿ ನಗರ್ಲೆ ಗ್ರಾಮದ ಕಿರಣ್ ಕುಮಾರ್(22) ಠಾಣೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ಅಲ್ಲದೆ ಪೊಲೀಸರ ವಿಚಾರಣೆಗೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕಿರಣ್ ಕುಮಾರ್ ನವೆಂಬರ್ 13 ರಂದು ಮೃತಪಟ್ಟಿದ್ದ. ಈ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಇಬ್ಬರು ಸಿಬ್ಬಂದಿಯನ್ನು ಇಲಾಖಾ ವಿಚಾರಣೆಗೆ ಆದೇಶಿಸಿ ಅಮಾನತ್ತಿನಲ್ಲಿಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಹಿನ್ನೆಲೆ : ನವೆಂಬರ್ 12ರ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಕಿರಣ್ ಹಾಗೂ ಆತನ ಸ್ನೇಹಿತರು ಯುವಕರೊಂದಿಗೆ ಸಣ್ಣಪುಟ್ಟ ಗಲಾಟೆ ಮಾಡಿಕೊಂಡಿದ್ದರು. ಬಳಿಕ ಮತ್ತೊಂದು ಗುಂಪಿನ ಯುವಕರಿಗೆ ಕಿರಣ್​ ಹಾಗೂ ಆತನ ಸ್ನೇಹಿತರು ಹೊಡೆದಿದ್ದರು. ಈ ಬಗ್ಗೆ ಯುವಕನೊಬ್ಬ ಬಿಳಿಗೆರೆ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದ. ಈ ದೂರಿನ ಸಂಬಂಧ ಪೊಲೀಸರು ಕಿರಣ್​ ಹಾಗೂ ಆತನ ಸ್ನೇಹಿತರನ್ನು ಭಾನುವಾರ ಸಂಜೆ 6 ಗಂಟೆಗೆ ಠಾಣೆಗೆ ಕರೆಸಿದ್ದರು. ಅಂದು ರಾತ್ರಿ 8.30ರ ಸುಮಾರಿಗೆ ಮೂತ್ರವಿಸರ್ಜನೆಗೆ ಎಂದು ಠಾಣೆಯಿಂದ ಹೊರಹೋಗಿದ್ದ ಕಿರಣ್​ ಅಲ್ಲಿಂದ ಪರಾರಿಯಾಗಿದ್ದ. ಬಳಿಕ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ತಮ್ಮ ಸ್ವಗ್ರಾಮ ನಗರ್ಲೆಗೆ ಬಂದು ತಾನು ಪ್ರೀತಿಸುತ್ತಿದ್ದ ಹುಡುಗಿಯ ಮನೆ ಬಾಗಿಲು ಬಡಿದಿದ್ದ. ಅವರು ಬಾಗಿಲು ತೆರೆಯದಿದ್ದಾಗ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿಯವರೆಗೆ ಸಂಚರಿಸಲಿದೆ ʼವಂದೇ ಭಾರತ್‌’ ರೈಲು

ಕೂಡಲೇ ಆತನನ್ನು ಮೈಸೂರಿನ ಕೆ.ಆರ್​ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಸೋಮವಾರ (ನ.13) ಸಂಜೆ ಕಿರಣ್​ ಸಾವನ್ನಪ್ಪಿದ್ದ. ಈ ಹಿನ್ನೆಲೆಯಲ್ಲಿ ಕಿರಣ್​ ಕುಟುಂಬಸ್ಥರು ಪೊಲೀಸರ ಮೇಲೆಯೇ ಆರೋಪಿಸಿದ್ದು, “ಬಿಳಿಗೆರೆ ಪೊಲೀಸರು ಠಾಣೆಗೆ ಕರೆಸಿ, ವಿಚಾರಣೆ ನೆಪದಲ್ಲಿ ಕಿರಣ್​ಗೆ ಹೊಡೆದಿದ್ದಾರೆ. ಇದರಿಂದ ಹೆದರಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ಕಿರಣ್​ ಸಂಬಂಧಿ ವಿಜಯ್​ ಕುಮಾರ್​ ಆರೋಪಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...