ಮೈಸೂರು | ಮೃಗಾಲಯ, ಕಾರಂಜಿ ಕೆರೆ ನಿಶ್ಯಬ್ಧ ವಲಯ: ನಗರ ಪೊಲೀಸ್ ಆಯುಕ್ತ

Date:

ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆಯ ಸುತ್ತಮುತ್ತಲಿನ ರಸ್ತೆಗಳನ್ನು ನಿಶ್ಯಬ್ದ ವಲಯಗಳೆಂದು ಘೋಷಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.

ನಗರದ ಚಾಮರಾಜೇಂದ್ರ ಮೃಗಾಲಯವು ವನ್ಯ ಪ್ರಾಣಿಗಳ, ಪಕ್ಷಿ ಸಂಕುಲಗಳ ಹಾಗೂ ದೇಶ, ವಿದೇಶಗಳ ಅಪರೂಪದ ಜೀವ ಸಂಕುಲಗಳ ಆವಾಸ ಸ್ಥಾನವಾಗಿರುತ್ತದೆ. ಋತುಮಾನಕ್ಕೆ ತಕ್ಕಂತೆ ವಲಸೆ ಪಕ್ಷಿಗಳು ಕಾರಂಜಿ ಕೆರೆಯಲ್ಲಿ ಬಂದು ನೆಲೆಸುವ ನೆಚ್ಚಿನ ತಾಣವಾಗಿರುತ್ತದೆ. ಈ ಪ್ರದೇಶಗಳು ಯಾವಾಗಲೂ ಸೂಕ್ಷ್ಮತೆಯಿಂದ ಕೂಡಿದ್ದು, ವನ್ಯಜೀವ ಸಂಕುಲಗಳು ವಾಸಿಸಲು ನಿಶ್ಯಬ್ಧತೆಯಿಂದ ಕೂಡಿದ ಪ್ರಶಾಂತತೆಯ ವಾತಾವರಣ ಸೃಷ್ಟಿಸುವ ಅವಶ್ಯಕತೆ ಇದೆಯೆಂದು ಮೃಗಾಲಯದ ಕಾರ್ಯ ನಿರ್ವಾಹಕ ನಿರ್ದೇಶಕರು ಮನವಿ ಮಾಡಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್‌ ಆಯುಕ್ತ ರಮೇಶ್ ಬಾನೋತ್ ಈ ಆದೇಶ ಹೊರಡಿಸಿದ್ದಾರೆ.

ಎಂ ಎಲ್ ಸೋಮಸುಂದರ ವೃತ್ತದಿಂದ ಲಿಂಗಣ್ಣ ವೃತ್ತದವರೆಗೆ (ಶಾಲಿವಾಹನ ರಸ್ತೆ), ಎಸ್ ಲಿಂಗಣ್ಣ ವೃತ್ತದಿಂದ ಸರ್ಕಸ್ ಗ್ರೌಂಡ್ ಜಂಕ್ಷನ್ (ಲೋಕರಂಜನ್ ರಸ್ತೆ), ಸರ್ಕಸ್ ಗ್ರೌಂಡ್ ಜಂಕ್ಷನ್‌ನಿಂದ ಮಹಾರಾಣಾ ಪ್ರತಾಪ್ ಸಿಂಹಜಿ ಜಂಕ್ಷನ್ (ಟ್ಯಾಂಕ್ ಬಂಡ್ ರಸ್ತೆ), ಮಹಾರಾಣಾ ಪ್ರತಾಪ್ ಸಿಂಹಜಿ ವೃತ್ತದಿಂದ ಎಂ ಎಲ್ ಸೋಮಸುಂದರಂ ವೃತ್ತದ(ಎಂಜಿ ರಸ್ತೆ)ವರೆಗಿನ ಜಂಕ್ಷನ್‌ಗಳು ಮತ್ತು ರಸ್ತೆಗಳಲ್ಲಿ ಪಟಾಕಿ ಸಿಡಿಸುವುದು, ಧ್ವನಿವರ್ಧಕಗಳ ಬಳಕೆ ಮತ್ತು ವಾಹನಗಳ ಹಾರ್ನ್ ಶಬ್ಧ ಮಾಡುವುದನ್ನು ನಿಷೇಧಿಸಿದ್ದು, ಗುರುವಾರದಿಂದ ಜಾರಿಗೆ ಬರುವಂತೆ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | 3,469 ವಿದ್ಯಾರ್ಥಿಗಳಿಗೆ ಎರಡೇ ಶೌಚಾಲಯ; ಪ್ರತೀ ನಿತ್ಯ ಪರದಾಟ

“ನಿಯಮಗಳನ್ನು ಉಲ್ಲಂಘಿಸುವ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ನಗರ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...