ಮೈಸೂರು | 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 25 ಸ್ಥಾನ ಗೆಲ್ಲುವ ಗುರಿ; ಆರೋಗ್ಯ ಸಚಿವ ವಿಶ್ವಾಸ

Date:

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 25 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷವು ಗೆಲ್ಲುವ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕರೆ ನೀಡಿದರು.

ಚಾಮರಾಜನಗರ ಮತ್ತು ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿಯಿಂದ ತಾಂಡವಪುರದ ಕವಲಂದೆ ಬಳಿ ಇರುವ ನೀಲಾಂಬಿಕೆ ಕಲ್ಯಾಣ ಮಂಟಪದಲ್ಲಿ ನಡೆದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಆಕಾಂಕ್ಷಿಗಳ ಹಾಗೂ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ವೀಕ್ಷಕರಾಗಿ ಭಾಗವಹಿಸಿ ಮಾತನಾಡಿದರು.

“ಕಳೆದ ಬಾರಿ ಮಾಡಿದ ತಪ್ಪುಗಳನ್ನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಗೊಂದಲ ಮತ್ತು ತಪ್ಪುಗಳನ್ನು ಮಾಡದೆ ಒಗ್ಗಟ್ಟಿನಿಂದ ಪಕ್ಷದ ಕಾರ್ಯಕರ್ತರು ಮುಖಂಡರುಗಳು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲುವು ಸಾಧಿಸಲು ಶ್ರಮ ವಹಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಭೆಯಲ್ಲಿ ಈಗಾಗಲೇ ಎಂಟು ಜನ ಆಕಾಂಕ್ಷಿಗಳು ತಮ್ಮ ತಮ್ಮ ಅಭಿಪ್ರಾಯಗಳನ್ನು ಸಭೆಯಲ್ಲಿ ತಿಳಿಸಿದ್ದಾರೆ. ಅವರೂ ಕೂಡ, ʼಪಕ್ಷದ ವರಿಷ್ಠರು ಯಾರಿಗೆ ಟಿಕೆಟ್‌ ನೀಡಿದರೂ ನಾವು ಕಾಂಗ್ರೆಸ್ ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ದುಡಿಯುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಮುಂಬರುವ ಲೋಕಸಭಾ ಚುನಾವಣೆಗೆ ಇಂದಿನಿಂದಲೇ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಮ್ಮ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ಪ್ರತಿ ಮನೆಮನೆಗೂ ತಿಳಿಸಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಬೇಕು” ಎಂದು ಆರೋಗ್ಯ ಸಚಿವ ಹಾಗೂ ಚಾಮರಾಜನಗರ ಲೋಕಸಭಾ ವೀಕ್ಷಕ ದಿನೇಶ್ ಗುಂಡೂರಾವ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅಸ್ಪೃಶ್ಯತಾ ನಿಷೇಧ ಮತ್ತು ನಿಯಂತ್ರಣ ಎಸ್‌ಸಿ/ಎಸ್‌ಟಿ ಕಾಯ್ದೆಯ ಮಹತ್ವದ ಕಾರ್ಯಗಾರ

ಪೂರ್ವಭಾವಿ ಸಭೆಯಲ್ಲಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್, ಶಾಸಕರುಗಳಾದ ಪುಟ್ಟರಂಗಶೆಟ್ಟಿ, ಕೃಷ್ಣಮೂರ್ತಿ, ಅನಿಲ್ ಚಿಕ್ಕಮಾದು, ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್, ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳಾದ ಸುನಿಲ್ ಬೋಸ್ ಎಂ ಶಿವಣ್ಣ, ನಂಜುಂಡಸ್ವಾಮಿ, ಡಾ. ಕಿರಣ್ ಪುಷ್ಪ, ಅಮರನಾಥ್ ಸೇರಿದಂತೆ ಒಟ್ಟು ಎಂಟು ಮಂದಿ ಆಕಾಂಕ್ಷಿಗಳು ಸಭೆಯಲ್ಲಿದ್ದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳಾದ ಮರಿಸ್ವಾಮಿ, ಡಾ. ಬಿ ಜೆ ವಿಜಯ್ ಕುಮಾರ್, ಕಾಂಗ್ರೆಸ್ ಪಕ್ಷದ ಎಂ ಲಕ್ಷ್ಮಣ್ ವೀರಶೈವ ಮುಖಂಡ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಗುರುಪಾದ ಸ್ವಾಮಿ ಜಿಲ್ಲಾ ಪಂಚಾಯತಿಯ ಮಾಜಿ ಅಧ್ಯಕ್ಷ ಎಸ್‌ ಸಿ ಬಸವರಾಜು, ಬಿ ಎಂ ರಾಮು, ಬ್ಲಾಕ್ ಅಧ್ಯಕ್ಷರುಗಳಾದ ರಂಗಸ್ವಾಮಿ, ರಮೇಶ್, ಮುದ್ದೇಗೌಡ ಸೇರಿದಂತೆ ಎರಡು ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಕಾಂಗ್ರೆಸ್ ಕಾರ್ಯಕರ್ತರು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...