ಮೈಸೂರು | ದಸರಾ ವಿರುದ್ಧ ಪ್ರತಿಭಟನೆ; ಹೆದ್ದಾರಿ ತಡೆಗೆ ಮುಂದಾದ ರೈತರ ಬಂಧನ

Date:

ರಾಜ್ಯದಲ್ಲಿ ಬರ ಆವರಿಸಿದೆ. ರೈತರು ಸಂಕಷ್ಟದಲ್ಲಿದ್ದಾರೆ. ರೈತರನ್ನು ಸಂಕಷ್ಟಕ್ಕೆ ದೂಡಿ ಅದ್ದೂರಿ ದಸರಾ ಆಚರಿಸಲಾಗುತ್ತಿದೆ. ಇದು ಖಂಡನೀಯವೆಂದು ದಸರಾ ಆಚರಣೆಯ ವಿರುದ್ಧ ಮೈಸೂರಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆ ಬಳಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆಗೆ ಮುಂದಾದ ರೈತರನ್ನು ಮುನ್ನೆಚ್ವರಿಕೆ ಕ್ರಮವಾಗಿ ಪೊಲೀಸರು ಬಂಧಿಸಿದ್ದು ಸಿಎಆರ್ ಮೈದಾನಕ್ಕೆ ಕರೆದೊಯ್ದಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ಕುರುಬೂರು ಶಾಂತಕುಮಾರ್, “ರಾಜ್ಯದಲ್ಲಿ ಬರ ಆವತಿಸಿದ್ದರೂ ಸರ್ಕಾರದ ಮಂತ್ರಿಗಳು ದಸರಾ ಆಚರಣೆ ಮಾಡುತ್ತಾ ಮೋಜು ಮಸ್ತಿ ಮಾಡುತ್ತಿದ್ದಾರೆ. ದಸರಾ ಎಂದರೆ ಸಂತೃಪ್ತಿ, ಸಂಭ್ರಮದಿಂದ ಕೂಡಿರಬೇಕು. ಆದರೆ, ರೈತರು ಸಂಕಷ್ಟದಲ್ಲಿದ್ದಾರೆ. ಸೂತಕದ ನಡುವೆ ದಸರಾ ಆಚರಣೆ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ 200 ಕ್ಕೂ ಹೆಚ್ಚು ತಾಲೂಕುಗಳು ಬತಪೀಡಿತವಾಗಿವೆ. ರೈತರಿಗೆ ಪರಿಹಾರ ಕೊಡಲು ಸರ್ಕಾರ ಇನ್ನೂ ಮುಂದಾಗಿಲ್ಲ. ಆ ಬಗ್ಗೆ ಗಮನ ಹರಿಸಿಲ್ಲ. ಹೆದ್ದಾರಿ ಬಂದ್ ಮಾಡುವ ಬಗ್ಗೆ ನಾಲ್ಕು ದಿನಗಳ ಹಿಂದೆಯೇ ಅಧಿಕಾರಿಗಳಿಗೆ ತಿಳಿಸಿದ್ದೇವೆ. ರಾಜ್ಯದ ಹಲವು ಸಚಿವರು ಮೈಸೂರಿನಲ್ಲಿಯೇ ಇದ್ದಾರೆ. ಆದರೂ, ರೈತರ ಅಳಲು ಕೇಳಲು ಅವರಾರು ಬಂದಿಲ್ಲ. ರೈತರನ್ನು ಸಚಿವರು ಮತ್ತು ಸರ್ಕಾರ ನಿರ್ಲಕ್ಷ್ಯಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಅತ್ತಹಳ್ಳಿ ದೇವರಾಜು, ಹಳ್ಳಿಕೆರೆಹುಂಡಿ ಭಾಗ್ಯರಾಜ್, ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...