ಮೈಸೂರು | ಆರ್‌ಬಿಐನ ಕನ್ನಡ ಕೈಂಕರ್ಯ ನಾಡು ಮೆಚ್ಚುವಂತದ್ದು: ಸಾಹಿತಿ ಬನ್ನೂರು ರಾಜು

Date:

ಎಲ್ಲ ಜಾತಿ, ಮತ, ಧರ್ಮ, ಜನಾಂಗ, ವರ್ಗ ಸೇರಿದಂತೆ ಅನೇಕ ಭಾಷಿಕರನ್ನು ಒಳಗೊಳ್ಳುತ್ತಿರುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅನೇಕತೆಯಲ್ಲಿ ಏಕತೆಯನ್ನು ಸಾಧಿಸುತ್ತಿದೆ. ಜೊತೆಗೆ ಕನ್ನಡವನ್ನು ಕಟ್ಟುವ ಕೈಂಕರ್ಯವನ್ನು ಅಭಿಮಾನದಿಂದ ಮಾಡುತ್ತಿದೆ. ಆರ್‌ಬಿಐನ ಕನ್ನಡಾಭಿಮಾನ ನಾಡು ಮೆಚ್ಚುವಂತದ್ದು ಎಂದು ಸಾಹಿತಿ ಬನ್ನೂರು ಕೆ.ರಾಜು ಶ್ಲಾಘಿಸಿದ್ದಾರೆ.

ಮೈಸೂರಿನಲ್ಲಿ ಆರ್‌ಬಿಐ ಮುದ್ರಣಾಲಯದ ಕನ್ನಡ ರಾಜ್ಯೋತ್ಸವ ಸಮಿತಿಯು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. “ಇಲ್ಲಿ ಅಧಿಕಾರಿಗಳಿಂದ ಹಿಡಿದು ಸಾಮಾನ್ಯ ಉದ್ಯೋಗಿಗಳ ತನಕ ಭಾರತದ ಬಹುತೇಕ ರಾಜ್ಯಗಳ ಜನರಿದ್ದಾರೆ. ಹಲವು ಭಾಷಿಕರಿದ್ದಾರೆ. ಆರ್‌ಬಿಐ ಒಂದು ಮಿನಿ ಭಾರತವೇ ಆಗಿದೆ” ಎಂದು ಹೇಳಿದ್ದಾರೆ.

“ಪ್ರತಿಯೊಬ್ಬರಿಗೂ ಭಾಷೆಯಷ್ಟೇ ಬದುಕು ದೊಡ್ಡದು. ತಾಯಿ ಕರುಳಿನಿಂದ ಬಳುವಳಿಯಾಗಿ ಬಂದಿರುವ ಕನ್ನಡ ನುಡಿಯೆಂದರೆ ಅದೊಂದು ಮಹದದ್ಭುತ. ಅಂಥಾ ತಾಯ್ತನ ನಮ್ಮ ಮಾತೃ ಭಾಷೆ ಕನ್ನಡದಲ್ಲಿದೆ. ಹಾಗಾಗಿ ಜ್ಞಾನಕ್ಕಾಗಿ, ಅರಿವಿಗಾಗಿ, ಬದುಕಿಗಾಗಿ ಎಷ್ಟು ಭಾಷೆಗಳನ್ನು ಕಲಿತರೂ ಸರಿಯೆ ಆದರೆ ಮಾತೃ ಭಾಷೆ ಜೀವ ಮತ್ತು ಜೀವನವಾಗಬೇಕು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾತೃ ಭಾಷೆ ಎಂದರೆ ಅದು ನಮ್ಮ ವ್ಯಕ್ತಿತ್ವ ಹಾಗು ಅಸ್ತಿತ್ವ. ಪ್ರತಿಯೊಬ್ಬರಿಗೂ ಅವರವರ ಮಾತೃಭಾಷೆ ಅವರವರಿಗೆ ಮಹತ್ವದ್ದೇ ಆಗಿರುತ್ತದೆ. ಅದು ಯಾವುದೇ ಕ್ಷೇತ್ರವಿರಲಿ ಮಾತೃ ಭಾಷೆಯಿಂದ ಮಾತ್ರ ಮಹತ್ತರ ಸಾಧನೆ ಸಾಧ್ಯ. ವಿಶ್ವಮಾನವ ಕುವೆಂಪು ಸಹ ಜಾಗತಿಕವಾಗಿ ಮನ್ನಣೆಗಳಿಸಿದ್ದು ಮತ್ತು ವಿಶ್ವಕವಿಯಾದದ್ದು ಮಾತೃಭಾಷೆ ಕನ್ನಡದಲ್ಲಿ ಬರೆದಿದ್ದರಿಂದಲೇ” ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಆರ್‌ಬಿಐ ಹಿರಿಯ ಪ್ರಧಾನ ವ್ಯವಸ್ಥಾಪಕ ಹರ್ಷಕುಮಾರ್ ಮನ್ರಾಲ್, ಜೋಗಾ ರೆಡ್ಡಿ, ರಜನಿಕಾಂತ್, ಎಸ್.ಎಂ.ಬ್ಯಾನರ್ಜಿ, ಪ್ರಭುಕುಮಾರ್, ಎಲ್.ರವಿ, ಉಪಾಧ್ಯಕ್ಷ ಭಾನುಪ್ರಕಾಶ್, ಪ್ರಧಾನ ಕಾರ್ಯದರ್ಶಿ ಮಹಾಲಿಂಗ ಪ್ರಭು, ಕಾರ್ಯದರ್ಶಿ ತೋಟಪ್ಪ ಶೆಟ್ಟಿ, ಖಜಾಚಿ ಚೇತನ್, ಪಿ.ರಾಜಣ್ಣ, ಚಂದ್ರಶೇಖರ್, ಬಸವರಾಜು ಇನ್ನಿತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...