ಅರ್ಜುನ ಆನೆಗೆ ಮೈಸೂರು ರಕ್ಷಣಾ ವೇದಿಕೆ ಶ್ರದ್ಧಾಂಜಲಿ

Date:

ಮೈಸೂರು ದಸರಾ ಅಂಬಾರಿಯನ್ನು ಹೊತ್ತು ಜನರ ಪ್ರೀತಿಗೆ ಪಾತ್ರವಾಗಿದ್ದ ಅರ್ಜುನ ಅನೆಯ ಸಾವಿಗೆ ಹಲವರು ಕಂಬನಿ ಮಿಡಿದಿದ್ದಾರೆ. ಮೈಸೂರು ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ರಾತ್ರಿ ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಮೇಣದಬತ್ತಿ ಬೆಳಗಿಸಿ ಆನೆಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ವೇದಿಕೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಭಟ್, “ಕಳೆದ ನಾಲ್ಕೂವರೆ ದಶಕಗಳಿಂದ ಅರ್ಜುನ ಆನೆ ನಾಡಿನ ಸೇವೆ ಮಾಡಿದೆ. ಸೇವೆ ಮಾಡುತ್ತಲೇ ಸಾವಿಗೀಡಾಗಿದೆ. ಸಾರ್ಥಕ ಜೀವನ ನಡೆಸಿದ ಅರ್ಜುನನಿಗೆ ನಾಡಿನ ಜನರ ಪರವಾಗಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಈ ಸಮಯದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯರಾದ ಕೆ ಜೆ ರಮೇಶ್, ಅಹಿಂದ ಮುಖಂಡರಾದ ನಜರ್ಬಾದ್ ನಟರಾಜ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಅಜಯ್ ಶಾಸ್ತ್ರಿ, ಪ್ರತಾಪ್, ಮಧು ಏನ್ ಪೂಜಾರ್, ಟಿ ಎಸ್ ಅರುಣ್, ಶ್ರೀಕಾಂತ್ ಕಶ್ಯಪ್, ಬೈರತಿ ಲಿಂಗರಾಜು, ಚಕ್ರಪಾಣಿ, ಮೈ ಲಾ ವಿಜಯ್ ಕುಮಾರ್, ಕೃಷ್ಣನಾಯಕ, ವರುಣ ಮಹಾದೇವ್, ಜಟ್ಟಿ ಹುಂಡಿ ಗೋಪಾಲ್, ಪಂಕಜ್, ಮಧು, ಸೂರಜ್, ಸದಾಶಿವ, ದಯಾನಂದ್, ಶಿವಲಿಂಗ ಸ್ವಾಮಿ, ವಕೀಲರಾದ ಹೇಮಂತ್, ಶಿವರಾಜ್, ಬಸವರಾಜ್ ಬಸಪ್ಪ ಹಾಗೂ ಇನ್ನಿತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...