ಮಂಡ್ಯ | ಮೈಶುಗರ್‌ ಕಾರ್ಖಾನೆ ಪುನರಾರಂಭ; ಜೂನ್ 23ರಿಂದ ಕಬ್ಬು ಅರೆಯುವಿಕೆಗೆ ಚಾಲನೆ

Date:

ರಾಜ್ಯದಲ್ಲಿರುವ ಸರ್ಕಾರಿ ಸ್ವಾಮ್ಯದ ಏಕೈಕ ಸಕ್ಕರೆ ಕಾರ್ಖಾನೆ ಮಂಡ್ಯದ ಮೈಶುಗರ್, ಮತ್ತೆ ಕಬ್ಬು ಅರೆಯಲು ಸಜ್ಜಾಗಿದೆ. ಜೂನ್ 23ರಿಂದ ಕಾರ್ಖಾನೆ ಪುನಾರಂಭವಾಗಲಿದ್ದು, ಕಬ್ಬು ಅರೆಯುವಿಕೆ ಮತ್ತು ಸಕ್ಕರೆ ಉತ್ಪಾದನೆ ಆರಂಭವಾಗಲಿದೆ.

ಕಾರ್ಖಾನೆ ನಷ್ಟದಲ್ಲಿದೆ ಅದನ್ನು ಖಾಸಗೀಕರಣಗೊಳಿಸಬೇಕೆಂಬ ಚರ್ಚೆಗಳು ಸರ್ಕಾರದ ಮಟ್ಟದಲ್ಲಿ ಆಗ್ಗಾಗೆ ಮುನ್ನೆಲೆಗೆ ಬರುತ್ತಿದ್ದವು. ಅದಾಗ್ಯೂ, ರೈತರ ಹೋರಾಟದಿಂದಾಗಿ, ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿದಿದೆ. ನಷ್ಟದಲ್ಲಿದ್ದ ಕಾರಣಕ್ಕೆ ಕಾರ್ಖಾನೆಯನ್ನು ಈ ಹಿಂದೆ ಕೆಲ ವರ್ಷಗಳ ಕಾಲ ಮುಚ್ಚಲಾಗಿತ್ತು. ಬಳಿಕ, ರೈತರ ಬೃಹತ್ ಹೋರಾಟದಿಂದಾಗಿ ಪರಿಹಾರ ಒದಗಿಸಿ, ನಷ್ಟವನ್ನು ಸರ್ಕಾರ ತುಂಬಿಕೊಟ್ಟಿತ್ತು.

ಬಳಿಕ, ಕಳೆದ ವರ್ಷ ಕಾರ್ಖಾನೆ ಮತ್ತೆ ಆರಂಭವಾಗಿತ್ತು. ಕಬ್ಬು ಪೂರೈಕೆಯಿಲ್ಲದ ಸಮಯದಲ್ಲಿ ಕಾರ್ಖಾನೆ ಕಾರ್ಯಾಚರಣೆಯನ್ನು ನಿಲ್ಲಿಸಿತ್ತು. ಈಗ ಮತ್ತೆ ಕಬ್ಬು ಅರೆಯುವಿಕೆ ಆರಂಭವಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...