ಮೈಸೂರು | ವಸ್ತು ಪ್ರದರ್ಶನ ಮೈದಾನದಲ್ಲಿ ಬಾಲಕಿ ಮೃತದೇಹ ಪತ್ತೆ; ಅತ್ಯಾಚಾರ ಶಂಕೆ

Date:

ಇತ್ತೀಚೆಗೆ ನಡೆದ ಮೈಸೂರು ದಸರಾ ಸಮಯದಲ್ಲಿ ಬಲೂನು ಮಾರಾಟ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿಯ ಮೃತದೇಹವು ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ಪತ್ತೆಯಾಗಿದೆ. ಆಕೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮೈಸೂರು ಅರಮನೆಯ ಮುಂಭಾಗದಲ್ಲಿಯೇ ಇರುವ ವಸ್ತು ಪ್ರದರ್ಶನ ಮೈದಾನದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಆಕೆ ಸುಮಾರು 9 ರಿಂದ 10 ವರ್ಷ ವಯಸ್ಸಿನವರಾಗಿರಬಹುದು ಎಂದು ತಿಳಿದುಬಂದಿದೆ.

ಬಾಲಕಿಯನ್ನು ಕಲಬುರಗಿ ಮೂಲದವರು ಎಂದು ಗುರುತಿಸಲಾಗಿದೆ. ಆಕೆ, ತನ್ನ ಪೋಷಕರೊಂದಿಗೆ ಮೈಸೂರಿಗೆ ಬಂದಿದ್ದರು. ಮೈಸೂರಿನ ದೊಡ್ಡಕೆರೆ ಮೈದಾನದಲ್ಲಿ ವಾಸ್ತವ್ಯ ಹೂಡಿದ್ದರು. ನವರಾತ್ರಿ ಮತ್ತು ದಸರಾ ದಿನಗಳಲ್ಲಿ ಬಲೂನು ಮಾರಾಟ ಮಾಡುತ್ತಿದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬುಧವಾರ, ಚಾಮುಂಡಿ ಬೆಟ್ಟದಲ್ಲಿ ತೆಪ್ಪೋತ್ಸವ ನಡೆದಿತ್ತು. ಅಲ್ಲಿ, ಬಲೂನು ಮಾರಾಟ ಮಾಡಿ,ರಾತ್ರಿ ತಮ್ಮ ಟೆಂಟ್‌ನಲ್ಲಿ ತನ್ನ ತಾಯಿಯೊಂದಿಗೆ ಮಲಗಿದ್ದರು. ಆದರೆ, ಬೆಳಗ್ಗೆ ವೇಳೆಗೆ ಆಕೆ ಕಾಣೆಯಾಗಿದ್ದಳು. ಆಕೆಗಾಗಿ ಪೋಷಕರು ಹುಡುಕಾಟ ನಡೆಸಿದ್ದು, ಟೆಂಟ್‌ನಿಂದ ಸ್ವಲ್ಪ ದೂರದಲ್ಲಿದ್ದ ಮಣ್ಣಿನ ರಾಶಿ ಬಳಿ, ಆಕೆಯ ಮೃತದೇಹ ಪತ್ತೆಯಾಗಿದೆ.

ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಆಕೆಯ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...