ಎನ್.ರವಿಕುಮಾರ್ ಇರಬೇಕಾಗಿರುವುದು ಪರಿಷತ್‌ನಲ್ಲಿ ಅಲ್ಲ, ನಿಮ್ಹಾನ್ಸ್‌ನಲ್ಲಿ : ಸಚಿವ ಪ್ರಿಯಾಂಕ್ ಖರ್ಗೆ

Date:

ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನಾಲಿಗೆ ಹರಿಬಿಟ್ಟು ಕ್ಷಮೆ ಕೇಳಿದ್ದ ಬಿಜೆಪಿಯ ವಿಧಾನ ಪರಿಷತ್ ಸದಸ್ಯ‌ ಎನ್.ರವಿಕುಮಾರ್ ಅವರು ಈಗ ಮತ್ತೊಮ್ಮೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ತಮ್ಮ ಮಲಿನ ಮನಸಿನ ಕೊಳಕು ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ‘ಬಿಜೆಪಿಯವರು ಕೇಳುವ ಕ್ಷಮೆಯು ಪಶ್ಚಾತಾಪದ ಕ್ಷಮೆಯಲ್ಲ, ಪಲಾಯನವಾದದ ಕ್ಷಮೆ ಎನ್ನುವುದನ್ನು ನಾನು ಹಿಂದೆಯೇ ಹೇಳಿದ್ದೆ’ ಎಂದಿದ್ದಾರೆ.

‘ಮಹಿಳಾ ಅಧಿಕಾರಿಗಳನ್ನು ನಿಂದಿಸುವುದು ಎಂಎಲ್ಸಿ ರವಿಕುಮಾರ್ ಅವರಿಗೆ ಚಟವಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಮಾನಸಿಕ ಚಿಕಿತ್ಸೆಯ ಅಗತ್ಯವಿದೆ ಎಂಬುದು ನನ್ನ ಭಾವನೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಮಾಡಿದ ತಪ್ಪನ್ನೇ ಪದೇ ಪದೇ ಮಾಡುವುದು, ಮತ್ತೆ ಮತ್ತೆ ಕ್ಷಮೆ ಕೇಳುವುದು ಬಿಜೆಪಿಯವರಿಗೆ ಸಾವರ್ಕರ್ ರಿಂದ ಬಂದ ರಕ್ತಗತ ಗುಣ ಇರಬಹುದು! ಮಹಿಳಾ ಅಧಿಕಾರಿಗಳನ್ನೇ ಈ ಪರಿ ನಿಂದಿಸುವ ಬಿಜೆಪಿಯವರು ಸಾಮಾನ್ಯ ಮಹಿಳೆಯರನ್ನು ಹೇಗೆ ನಡೆಸಿಕೊಳ್ಳಬಹುದು?’ ಎಂದು ಪ್ರಶ್ನಿಸಿದರು.

ಇದನ್ನೂ ಓದಿ : ಬೀದರ್‌ | ಮಗನ ಸಾವಿನ ಸುದ್ದಿ ಕೇಳಿ ಅಘಾತಗೊಂಡ ತಾಯಿ ಹೃದಯಾಘಾತದಿಂದ ಸಾವು

‘ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿರುವ ರವಿಕುಮಾರ್ ಅವರು ಘನತೆಯುಕ್ತ ಪರಿಷತ್‌ನಲ್ಲಿ ಮುಂದುವರೆಯಲು ಅನರ್ಹರು. ರವಿಕುಮಾರ್ ಇರಬೇಕಾಗಿರುವುದು ಪರಿಷತ್‌ನಲ್ಲಿ ಅಲ್ಲ, ನಿಮ್ಹಾನ್ಸ್‌ನಲ್ಲಿ’ ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...