ರಾಜ್ಯದ ಕೃಷಿ ಇಲಾಖೆಯ 53 ಪ್ರಯೋಗಾಲಯಗಳಿಗೆ NABL ಮಾನ್ಯತೆ: ಎನ್ ಚಲುವರಾಯಸ್ವಾಮಿ

Date:

ರಾಜ್ಯದ 53 ಪ್ರಯೋಗಾಲಯಗಳಿಗೆ NABL ಮಾನ್ಯತೆ ದೊರೆತಿದೆ. ಯಾವುದೇ ಸರ್ಕಾರಗಳು ಬರಲಿ ಕೃಷಿ ಅಧಿಕಾರಿಗಳು ಪ್ರಾಮಾಣಿಕವಾಗಿ ರೈತರ ಪರವಾದ ಕೆಲಸಗಳನ್ನು ಮಾಡಬೇಕು ಎಂದು ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ತಿಳಿಸಿದರು.

ಬೆಂಗಳೂರು ನಗರದ ಕೃಷಿ ಆಯುಕ್ತಾಲಯದಲ್ಲಿರುವ ಸಂಗಮ ಸಂಭಾಗಣದಲ್ಲಿ, NABL(ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತೆ ಮಂಡಳಿ) ಮಾನ್ಯತೆ ಪಡೆದಿರುವ ಪ್ರಯೋಗಾಲಯಗಳ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮತನಾಡಿದರು.

“ಕೃಷಿ ಇಲಾಖೆಯ ಯೋಜನೆಗಳು ರೈತರಿಗೆ ತಲುಪಬೇಕು. ಇದಕ್ಕಾಗಿ ಅಧಿಕಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಉತ್ತಮ ಫಲಿತಾಂಶ ಹೊರಬರಲಿದೆ. ಕೃಷಿ ಇಲಾಖೆಯ 29, ತೋಟಗಾರಿಕೆ ಇಲಾಖೆಯ 6, ರೇಷ್ಮೆ ಇಲಾಖೆಯ 1, ಕೃಷಿ ವಿಶ್ವವಿದ್ಯಾಲಯಗಳ 3 ಮತ್ತು ಕೃಷಿ ವಿಜ್ಞಾನ ಕೇಂದ್ರಗಳ 5 ಮಣ್ಣು ಪರೀಕ್ಷಾ ಪ್ರಯೋಗಾಲಗಳು ಸೇರಿದಂತೆ ಒಟ್ಟು 44 ಮಣ್ಣು ಪರೀಕ್ಷಾ ಪ್ರಯೋಗಾಲಯಗಳು NABL Recognition ಪಡೆದಿರುವುದು ಅಭಿನಂದನೀಯ” ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃಷಿ ಇಲಾಖೆಯ 6 ರಸಗೊಬ್ಬರ ನಿಯಂತ್ರಣ ಪ್ರಯೋಗಾಲಯಗಳು, 2 ರಾಜ್ಯ ಕೀಟನಾಶಕ ಪರೀಕ್ಷಾ ಪ್ರಯೋಗಾಲಯಗಳು ಮತ್ತು ಕರ್ನಾಟಕ ರಾಜ್ಯ ಬಿತ್ತನೆಬೀಜ ಹಾಗೂ ಸಾವಯವ ಪ್ರಮಾಣ ಸಂಸ್ಥೆಯ 1 ಬಿತ್ತನೆಬೀಜ ಪರೀಕ್ಷಾ ಪ್ರಯೋಗಾಲಯ ಸೇರಿ 9 ಪ್ರಯೋಗಾಲಯಗಳು NABL Accreditation ಪಡೆದಿರುತ್ತವೆ. ಈ ಹಿನ್ನಲೆಯಲ್ಲಿ, NABL ಸಹಯೋಗದೊಂದಿಗೆ ʼNABL ಮಾನ್ಯತೆ ಪಡೆದಿರುವ ಪ್ರಯೋಗಾಲಯʼಗಳ ಅಧಿಕಾರಿಗಳಿಗೆ ಸಚಿವರು ಅಭಿನಂದಿಸಿ ಪ್ರಶಸ್ತಿ ಪತ್ರ ನೀಡಿದರು..

ಕಾರ್ಯಕ್ರಮದಲ್ಲಿ NABL ಮಾನ್ಯತೆ ಪಡೆದ ವಿವಿಧ 53 ಪ್ರಯೋಗಾಲಯಗಳನ್ನು ಸನ್ಮಾನಿಸುವ ಜತೆಗೆ ಇತರೆ ಪ್ರಯೋಗಾಲಯಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಗಳನ್ನೂ ಕೂಟ ನಡೆಸಲಾಯಿತು.

ಕೃಷಿ ಸಚಿವರು ಎಲ್ಲ NABL ಮಾನ್ಯತೆ ಪಡೆದ ಪ್ರಯೋಗಾಲಯಗಳನ್ನು ಅಭಿನಂದಿಸುತ್ತ, “ರಾಜ್ಯದ ರೈತರ ಏಳಿಗೆಗೆ ಗುಣಮಟ್ಟದ ಪರಿಕ್ಷಾ ಫಲಿತಾಂಶ ನೀಡುವಲ್ಲಿ ಮತ್ತು ಗುಣಮಟ್ಟವನ್ನು Lab to Landಗೆ ತಲುಪಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯು ಕಾರ್ಯ ನಿರ್ವಹಿಸುವ ಜವಾಬ್ದಾರಿ ಹೊಂದಿದ್ದು, ಈ ನಿಟ್ಟಿನಲ್ಲಿ ʼNABL ಮಾನ್ಯತೆʼ ಅತ್ಯಂತ ಅವಶ್ಯವಾಗಿರುತ್ತದೆ” ಎಂದು ತಿಳಿಸಿದರು.

NABL ಮಾನ್ಯತೆ ಪಡೆಯುವಲ್ಲಿ ಶ್ರಮಿಸಿದ ಎಲ್ಲ ಹಂತದ ಇಲಾಖಾ ಅಧಿಕಾರಿಗಳು/ಸಿಬ್ಬಂದಿಗಳ ಪ್ರಯತ್ನ ಪ್ರಶಂಸನೀಯ ಎಂದು ಹೇಳಿದರು.

NABL ಎಂದರೆ?

National Accreditation Board for Testing and Calibration Laboratories, ಈ ಸಂಸ್ಥೆಯ ಪ್ರಯೋಗಾಲಯಗಳ ಪರೀಕ್ಷೆ, ಮಾಪನಾಂಕ ನಿರ್ಣಯ ಮತ್ತು ಇತರ ತಾಂತ್ರಿಕ ಚಟುವಟಿಕೆಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ನಿರ್ಣಯಿಸುವುದು ಹಾಗೂ ಗುರುತಿಸುವುದು ಪ್ರಮುಖ ಉದ್ದೇಶವಾಗಿರುತ್ತದೆ. NABL ಮಾನ್ಯತೆ ಪ್ರಕ್ರಿಯೆಯು ಕಠಿಣ ಮೌಲ್ಯಮಾಪನಗಳನ್ನು ಒಳಗೊಂಡಿದ್ದು, ಪ್ರಯೋಗಾಲಯಗಳು ನಿರಂತರ ವಿಶ್ವಾಸ ಮತ್ತು ನಿಖರವಾದ ಫಲಿತಾಂಶ ನೀಡುವುದನ್ನು ಖಚಿತಪಡಿಸುತ್ತವೆ. NABL ಮಾನ್ಯತೆ ಪಡೆದ ಪ್ರಯೋಗಾಲಯಗಳು ಅಂತಾರಾಷ್ಟ್ರೀಯ ಮಾನದಂಡಗಳನ್ನು ಒಳಗೊಂಡಂತೆ ನಿಖರ ಹಾಗೂ ವಿಶ್ವಾಸಾರ್ಹವಾಗಿರುತ್ತವೆ. NABL ಮಾನದಂಡಗಳಿಗೆ ಅನುಗುಣವಾಗಿ ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯಗಳು ಹಾಗೂ ಇತರೆ ಇಲಾಖೆಗಳ ಪ್ರಯೋಗಾಲಯಗಳನ್ನು ವಿವಿಧ ಕೇಂದ್ರ ಪುರಸ್ಕೃತ ಯೋಜನೆಗಳಾದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ(RKVY), SMSP ಹಾಗೂ ರಾಜ್ಯ ವಲಯ ಯೋಜನೆಗಳಡಿ ಅನುದಾನ ಒದಗಿಸಿ ಬಲವರ್ಧನೆಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯದ ಅರ್ಹ ಪಲಾನುಭವಿಗಳಿಗೆ ರೇಷನ್ ಕಾರ್ಡ್ ವಿತರಿಸಲು ಸರ್ಕಾರಕ್ಕೆ ಮನವಿ: ವಿ ಎಂ ಮುನಿಯಪ್ಪ

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್, NABL ಸಿಇಒ ವೆಂಕಟೇಶ್ವರನ್, ಕೃಷಿ ಇಲಾಖೆ ಆಯುಕ್ತ ವೈ ಎಸ್ ಪಾಟೀಲ್, ನಿರ್ದೇಶಕ ಡಾ. ಜಿ‌ ಟಿ ಪುತ್ರ, ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶಕ ವೆಂಕಟರಮಣರೆಡ್ಡಿ, ಕರ್ನಾಟಕ ರಾಜ್ಯ ಬಿತ್ತನೆಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನೂಪ್ ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಇದ್ದರು‌‌‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...