ನಾಗಮಂಗಲ ಗಲಭೆ ಪ್ರಕರಣ | ಬಂಧನಕ್ಕೆ ಹೆದರಿ ಗ್ರಾಮ ತೊರೆದಿದ್ದ ಯುವಕ ‘ಬ್ರೈನ್ ಸ್ಟ್ರೋಕ್‌’ನಿಂದ ಸಾವು ವದಂತಿ; ಪೊಲೀಸರ ಸ್ಪಷ್ಟನೆ

Date:

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣದಲ್ಲಿ ತಮ್ಮನ್ನೂ ಬಂಧಿಸಬಹುದೆಂಬ ಭಯದಲ್ಲಿ ಊರು ತೊರೆದಿದದ ಯುವಕ ‘ಬ್ರೈನ್‌ ಸ್ಟ್ರೋಕ್‌’ನಿಂದ ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಂಡ್ಯ ಪೊಲೀಸರು, ‘ಮೃತ ಯುವಕ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿಲ್ಲ’ ಎಂದು ತಿಳಿಸಿದ್ದಾರೆ.

ಶನಿವಾರ, ವರದಿ ಮಾಡಿದ್ದ ಮಾಧ್ಯಮಗಳು, “ನಾಗಮಂಗಲ ಗಲಭೆ ಪ್ರಕರಣದಲ್ಲಿ ಬದ್ರಿಕೊಪ್ಪಲು ಗ್ರಾಮದ ಕಿರಣ್ ಕೂಡ ಆರೋಪಿಯಾಗಿದ್ದ. ಬಂಧನ ಭೀತಿಯಿಂದ ಕಿರಣ್ ತಮ್ಮ ಗ್ರಾಮವನ್ನು ತೊರೆದು, ತಲೆಮರೆಸಿಕೊಂಡಿದ್ದರು. ಇದೀಗ, ಅವರು ‘ಬ್ರೈನ್ ಸ್ಕ್ರೋಕ್‌’ನಿಂದ ಸಾವನ್ನಪ್ಪಿದ್ದಾರೆ. ಗಲಭೆ ಪ್ರಕರಣದಲ್ಲಿ ಕಿರಣ್ ಅವರ ತಂದೆಯೂ 17ನೇ ಆರೋಪಿಯಾಗಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ವರದಿ ಮಾಡಿದ್ದವು.

ಈ ವರದಿಯನ್ನು ಅಲ್ಲಗಳೆದಿರುವ ಪೊಲೀಸರು, “ಬ್ರೈನ್ ಸ್ಟ್ರೋಕ್‌ನಿಂದ ಸಾವನ್ನಪ್ಪಿರುವ ಯುವಕ ಕಿರಣ್, ಗಲಭ ಪ್ರಕರಣದಲ್ಲಿ ಆರೋಪಿಯಲ್ಲ. ಗಲಭೆ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದದ್ದು ಕಿರಣ್ ಕುಮಾರ್ ಎಸ್‌ ಎಂಬಾತ. ಆತನನ್ನು ಬಂಧಿಸಲಾಗಿದೆ. ಆತನನ್ನು ಮಂಡ್ಯದ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಸಾವನ್ನಪ್ಪಿರುವ ಕಿರಣ್‌ಗೂ ಗಲಭೆ ಪ್ರಕರಣಕ್ಕೂ ಸಂಬಂಧವಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 09 22 at 8.51.50 AM

ಗಲಭೆ ಪ್ರಕರಣದಲ್ಲಿ ಈವರೆಗೆ ಪೊಲೀಸರು 52 ಮಂದಿಯನ್ನು ಬಂಧಿಸಿದ್ದಾರೆ. ಅವರಲ್ಲಿ, ಬದ್ರಿಕೊಪ್ಪಲು ಗ್ರಾಮದ 13 ಮಂದಿ ಸೇರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...