ಉಡುಪಿ | ಜೋಡಿ ಕೊಲೆ ಪ್ರಕರಣದ ಆರೋಪಿಯಿಂದ ನಾಗೇಂದ್ರ ಪುತ್ರನ್‌ ಗೆ ಜೀವ ಬೆದರಿಕೆ, ಪ್ರಕರಣ ದಾಖಲು

Date:

ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಹಾಗೂ ಸಾಮಾಜಿಕ ಕಾರ್ಯಕರ್ತ ಕೋಟದ ನಾಗೇಂದ್ರ ಪುತ್ರನ್ ಅವರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ, ಜೋಡಿ ಕೊಲೆ ಪ್ರಕರಣದ ಆರೋಪಿ ರಾಘವೇಂದ್ರ ಕಾಂಚನ್ ಮತ್ತು ಆತನ ಸಹಚರ ಜಯಂತ್ ಪುತ್ರನ್ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿಯ ಪ್ರಕಾರ, ನಾಗೇಂದ್ರ ಪುತ್ರನ್ ಅವರು ಕೋಟದಲ್ಲಿ ನಡೆದಿದ್ದ ಭರತ್ ಮತ್ತು ಯತೀಶ್ ಎಂಬ ಯುವಕರ ಜೋಡಿ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಡಿದಾಗ, ಆ ಪ್ರಕರಣದ ಆರೋಪಿ ರಾಘವೇಂದ್ರ ಕಾಂಚನ್ ಅವರಿಗೆ ವಿರೋಧ ವ್ಯಕ್ತಪಡಿಸಿದ್ದರು. ನಂತರ ನ್ಯಾಯಾಲಯದ ಬಂಧನದಿಂದ ಬಿಡುಗಡೆಯಾದ ರಾಘವೇಂದ್ರ ಕಾಂಚನ್, ನಾಗೇಂದ್ರ ಪುತ್ರನ್ ವಿರುದ್ಧ ವೈಯಕ್ತಿಕ ದ್ವೇಷ ಬೆಳೆಸಿಕೊಂಡು, “ಅವನನ್ನು ಬಿಟ್ಟುಬಿಡೋದಿಲ್ಲ, ವಾಶ್ ಔಟ್ ಮಾಡುತ್ತೇನೆ” ಎಂಬ ಹೇಳಿಕೆಗಳನ್ನು ನೀಡಿ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಇದಾದ ನಂತರ ಮಲ್ಪೆ ಮಹಾಲಕ್ಷ್ಮೀ ಬ್ಯಾಂಕ್ ಹಗರಣ ವಿಚಾರದಲ್ಲಿ ನಾಗೇಂದ್ರ ಪುತ್ರನ್ ಸಾಮಾಜಿಕ ಹೋರಾಟ ನಡೆಸುತ್ತಿದ್ದುದರಿಂದ, ಆರೋಪಿಗಳು ಇನ್ನಷ್ಟು ಕೋಪಗೊಂಡು ನಾಗೇಂದ್ರ ಪುತ್ರನ್ ಮತ್ತು ಅವರ ಆಪ್ತರಿಗೆ ಪುನಃಪುನಃ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 10 27 at 12.50.43 AM 1
ಕೋಟ ನಾಗೇಂದ್ರ ಪುತ್ರನ್ (ಸಾಮಾಜಿಕ ಹೋರಾಟಗಾರರು)

ನಾಗೇಂದ್ರ ಪುತ್ರನ್ ಅವರ ಸ್ನೇಹಿತ ಕಿಶೋರ್ ಶೆಟ್ಟಿ ಅವರಿಗೆ ಜುಲೈ 17ರಂದು ಆರೋಪಿಗಳು ಕರೆ ಮಾಡಿ – “ನಿನ್ನ ಸ್ನೇಹಿತಗೆ ಬುದ್ಧಿ ಹೇಳು, ಇಲ್ಲದಿದ್ದರೆ ಒಂದು ವಾರದೊಳಗೆ ಜೀವದಿಂದ ತೆಗೆಯುವುದು ಗ್ಯಾರಂಟಿ” ಎಂದು ಬೆದರಿಕೆ ಹಾಕಿದ್ದಾರೆ. ಬಳಿಕ “ಅವನು ಬೆಂಗಳೂರಿಗೆ ಓಡಿ ಹೋಗಿದ್ದಾನೆ, ಅಲ್ಲೇ ಮುಗಿಸುತ್ತೇನೆ” ಎಂದು ಮತ್ತೊಮ್ಮೆ ಕರೆಮಾಡಿರುವುದಾಗಿ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ, ನಾಗೇಂದ್ರ ಪುತ್ರನ್ ನ್ಯಾಯಾಲಯದ ನಿರ್ದೇಶನದಂತೆ ಪೊಲೀಸರಿಗೆ ದೂರು ನೀಡಿದ್ದು, ಕೋಟ ಪೊಲೀಸ್ ಠಾಣೆಯಲ್ಲಿ ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019ರ ಜ.26ರಂದು ಅವಳಿ ಕೊಲೆ ಪ್ರಕರಣದಲ್ಲಿ ಕೋಟತಟ್ಟು ಗ್ರಾಮದ ಬಾರಿಕೇರಿ ನಿವಾಸಿ ರಾಘವೇಂದ್ರ ಕಾಂಚನ್ ಯಾನೆ ಬಾರಿಕೇರಿ ರಾಘು, ಕೃತ್ಯದ ಒಳ ಸಂಚು ನಡೆಸಿರುವುದು ತನಿಖೆಯಿಂದ ತಿಳಿದು ಬಂದಿತ್ತು. ಅದರಂತೆ ಆರೋಪಿಯನ್ನು ಪೊಲೀಸರು ಫೆ.7ರಂದು ಬಂಧಿಸಿದ್ದರು. ಬಳಿಕ ಪ್ರಕರಣದ ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರವನ್ನು ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು ಈನ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಪ್ರಸ್ತುತ ಕಲಂ 313 ದಂಡ ಪ್ರಕ್ರಿಯಾ ಸಂಹಿತೆಯಡಿ ಯಲ್ಲಿ ಆರೋಪಿ ಹೇಳಿಕೆಯ ಹಂತದಲ್ಲಿದೆ. ಪ್ರಕರಣದ 9ನೇ ಆರೋಪಿಯಾಗಿರುವ ರಾಘವೇಂದ್ರ ಕಾಂಚನ್‌ಗೆ 2023ರ ಜೂ.28ರಂದು ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿ ಬಿಡುಗಡೆ ಮಾಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...