ಬೀದರ್‌ | ಏ. 14ರಂದು ʼನಮ್ಮ ಮೂಲನಿವಾಸಿ ಫೌಂಡೇಶನ್ʼ ಆರಂಭ

Date:

ದಲಿತ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಬರುವ ಏ.14ರಂದು ʼನಮ್ಮ ಮೂಲನಿವಾಸಿ ಫೌಂಡೇಶನ್ʼ ಶುರು ಮಾಡಲಾಗುತ್ತಿದೆ ಎಂದು ಹಿರಿಯ ಚಿಂತಕರಾದ ವೈಜಿನಾಥ ಸೂರ್ಯವಂಶಿ, ವಿಠಲ್ ದಾಸ್ ಪ್ಯಾಗೆ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ದಲಿತ ಸಮುದಾಯದ ಸರ್ವಾಂಗೀಣ ಏಳಿಗೆ ಹಾಗೂ ಅಭಿವೃದ್ಧಿಗಾಗಿ ಡಾ.ಬಿ.ಆರ್.‌ಅಂಬೇಡ್ಕರ್  ಅವರ ಜಯಂತಿ ದಿನವೇ ಬುದ್ಧ ಬಸವ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನಿರ್ದಿಷ್ಟ ನೀತಿಗಳ ತಳಹದಿಯಲ್ಲಿ ಕಾರ್ಯ ಚಟುವಟಿಕೆ ನಡೆಸುವ ಘನವಾದ ಉದ್ದೇಶದಿಂದ ಈ ಸಂಸ್ಥೆ ಹುಟ್ಟು ಹಾಕಲಾಗುತ್ತಿದೆ” ಎಂದರು.

“ಏ.2 ರಿಂದ 7 ರವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ 6 ದಿನಗಳ ಕ್ರೀಡಾಕೂಟ ಆಯೋಜಿಸಲಾಗುವುದು. ಕುಸ್ತಿ, ಕಬಡ್ಡಿ, ಅಥ್ಲೆಟಿಕ್ಸ್, ವಾಲಿಬಾಲ್ ಹಾಗೂ ಕ್ರಿಕೆಟ್ ಟೂರ್ನಿ ಆಯೋಜನೆ ಮಾಡಲಾಗುವುದು. ಈ ಮೂಲಕ ಪ್ರಖರ ಪ್ರತಿಭೆಗಳ ಗುರುತಿಸುವ ಕಾರ್ಯ ಮಾಡುವ ಉದ್ದೇಶವಿದೆ. ಇದರ ಪ್ರಚಾರದ ಚಟುಟಿಕೆಗಳಿಗಾಗಿ ಸಂಸ್ಥೆಯ ಸಂಯೋಜಕರ ತಂಡ ರಚಿಸಿ ತಾಲೂಕಿನ ಎಲ್ಲ ಊರುಗಳಿಗೆ ಹೋಗಿ ಅಂಬೇಡ್ಕರ ಭವನ, ಬುದ್ಧ ವಿಹಾರಗಳನ್ನು ಸ್ವಚ್ಚಗೊಳಿಸುವುದು. ಬುದ್ಧ, ಬಸವ, ಅಂಬೇಡ್ಕರರ ಸದಾಶಯಗಳನ್ನು ಮನೆ-ಮನೆಗೆ ತಲುಪಿಸುವ ಕಾರ್ಯ ಮಾಡುವ ಗುರಿಯಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಲಿತ ಸಮುದಾಯದ ಆರ್ಥಿಕ, ದೈಹಿಕ, ಮಾನಸಿಕ ಹಾಗೂ ಬೌದ್ಧಿಕ ಶಕ್ತಿ ವರ್ಧಿಸುವುದು, ವಿವಿಧ ಬಗೆಯ ಕ್ರೀಡಾಕೂಟ ಆಯೋಜಿಸಿ ಉನ್ನತ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸಕಲ ರೀತಿಯಲ್ಲೂ ಬೆಂಬಲಿಸಿ ವೃತ್ತಿಪರ ಕ್ರೀಡಾಪಟು ಆಗಲು ಸಹಾಯ ಮಾಡುವುದು. ನಗರದಲ್ಲಿ ಸುಸಜ್ಜಿತ ಗ್ರಂಥಾಲಯ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ಹಾಗೂ ಕ್ರೀಡಾ ಅಕಾಡೆಮಿ ಸ್ಥಾಪಿಸಲಾಗುವುದು” ಎಂದು ಮಾಹಿತಿ ನೀಡಿದರು.

“ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ, ಶಿಷ್ಯವೇತನಗಳ ಒದಗಿಸುವುದು ಮತ್ತು ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸಲಾಗುವುದು. ಸಮಾಜದಲ್ಲಿ ಸಮುದಾಯದ ಧ್ವನಿಯಾಗಿ ಅವರ ಹಕ್ಕುಗಳ ರಕ್ಷಣೆ ಮತ್ತು ಸಮಾನತೆಯ ಹೋರಾಟದಲ್ಲಿ ಸಹಾಯ ಮಾಡುವುದು. ಸಾಮಾಜಿಕ ನ್ಯಾಯವನ್ನು ಒದಗಿಸುವ ಪ್ರಯತ್ನ ಮಾಡುವುದು. ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವದ ಹಾಗೂ ಸಂವಿಧಾನದ ಆಶಯಗಳ ಸಂಕೇತವಾದ ಸಮಾಜ ಕಟ್ಟಲು ಶ್ರಮಿಸುತ್ತೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಿಲ್ಲೆಯಲ್ಲಿ ತೀವ್ರ ಬರ; ನೀರಿಗಾಗಿ ತೆಲಂಗಾಣಕ್ಕೆ ಹೊರಟ ತಾಂಡಾ ಜನರು

“ಬಾಬಾ ಸಾಹೇಬ್ ಅಂಬೇಡ್ಕರ ಅವರ ಜಯಂತಿ ಉತ್ಸವವನ್ನು ಅದ್ಧೂರಿಯಿಂದ ಮೌಲ್ಯಾಧಾರಿತ, ಅರ್ಥಗರ್ಭಿತವಾಗಿ, ರಚನಾತ್ಮಕ, ಧನಾತ್ಮಕ ಹಾಗೂ ಕ್ರಿಯಾಶೀಲ ಚಟುವಟಿಕೆಗಳು ಆಯೋಜಿಸಿ ಸಮಾಜಕ್ಕೊಂದು ಸಕರಾತ್ಮಕ ಸಂದೇಶ ಕೊಡುವ ಪ್ರಯತ್ನ ನಮ್ಮದಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...