ಚಿಕ್ಕಬಳ್ಳಾಪುರ | ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಾಗಿ ನಂದಕುಮಾರ್: ಕಾರ್ಯಕರ್ತರಲ್ಲಿ ಸಂಭ್ರಮ

Date:

ಪಕ್ಷ ಸಂಘಟನೆ, ನಿಸ್ವಾರ್ಥ ಸೇವೆ ಆಧಾರದಲ್ಲಿ ಕಾಂಗ್ರೆಸ್ ಮುಖಂಡ ನಂದಕುಮಾರ್ ಅವರನ್ನು ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಕೆಪಿಸಿಸಿ ಶುಕ್ರವಾರ ಆದೇಶ ಹೊರಡಿಸಿದ್ದು, ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಮಾಹಿತಿ ಸಿಕ್ಕ ಕೂಡಲೇ ರಾಜ್ಯಾಧ್ಯಕ್ಷರನ್ನು ಸನ್ಮಾನಿಸಿದ ನೂರಾರು ಕಾರ್ಯಕರ್ತರು, ನಗರದಲ್ಲಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದರು.

ಕಾರ್ಯಕರ್ತರ ಸನ್ಮಾನ ಸ್ವೀಕರಿಸಿ ಬಳಿಕ ಮಾತನಾಡಿದ ನಂದಕುಮಾರ್, ‘ಕಾರ್ಮಿಕ ಇಲಾಖೆಯ ಸಣ್ಣಪುಟ್ಟ ಲೋಪಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು, ನಿಷ್ಠೆಯಿಂದ ನನ್ನ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ’ ಎಂದರು.

ಬಾಲಕಾರ್ಮಿಕ ಪದ್ಧತಿ ಸಮಾಜದ ಪಿಡುಗಾಗಿದೆ. ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತೇನೆ. ಯಾರಾದರೂ ಬಾಲ ಕಾರ್ಮಿಕರನ್ನು ದುಡಿಸಿಕೊಂಡಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ನಂದಕುಮಾರ್‌ ಆಯ್ಕೆ 2

ಕಾಂಗ್ರೆಸ್ ಹಿರಿಯ ನಾಯಕ ಮಂಡಿಕಲ್ ಕುಪೇಂದ್ರ ಮಾತನಾಡಿ, ಕೆಪಿಸಿಸಿಯಿಂದ ನಂದ ಕುಮಾರ್ ಅವರಿಗೆ ಅಧಿಕಾರ ಸಿಕ್ಕಿರುವುದು ಸ್ವಾಗತಾರ್ಹ ಎಂದರು.

ಪರ್ಲ್ ಸಂಸ್ಥೆಯ ನಿರ್ದೇಶಕ ಮತ್ತು ವರ್ಣ ಸೇವಾ ಟ್ರಸ್ಟಿನ ಅಧ್ಯಕ್ಷ ಜಿ.ಉಮೇಶ್ ಮಾತನಾಡಿ, ಕಿರಿಯ ವಸ್ಸಿನಲ್ಲಿ ಇಂತಹ ಅವಕಾಶ ಪಡೆದುಕೊಂಡಿರುವುದಕ್ಕೆ ನಂದಕುಮಾರ್ ಅವರ ಪ್ರಾಮಾಣಿಕ ಸೇವೆ ಕಾರಣ. ಪಕ್ಷದ ನಂಬಿಕೆಗೆ ಬದ್ಧರಾಗಿ ಉತ್ತಮ ಸೇವೆ ಸಲ್ಲಿಸಿ ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಜಮಾಅತೆ ಅಹ್ಲೇ ಇಸ್ಲಾಂ ಚುನಾವಣೆ: ಚುನಾವಣಾಧಿಕಾರಿ ಬದಲಾವಣೆಗೆ ಒತ್ತಾಯ

ಈ ವೇಳೆ ಕಾಂಗ್ರೆಸ್ಸಿನ ಹಿರಿಯ ಮುಖಂಡರಾದ ಡ್ಯಾನ್ಸ್ ಶ್ರೀನಿವಾಸ್, ಆರ್ಯ ಅಧ್ಯಕ್ಷರು ಪರ್ಲ್ ಪೌಂಡೇಶನ್ ನ ಡಾಕ್ಟರ್ ರಜನೇಶ್, ರೂಪ ಕುಮಾರ್, ದಿನೇಶ್ ಎಸ್ ಗೌಡ, ಲಕ್ಷ್ಮಿಪತಿ, ಮಂಜುನಾಥ್, ಮೋಲ್ಡ್ ವೆಂಕಟೇಶ್, ರಾಮಚಂದ್ರಪ್ಪ, ಜಿ ಟಿ ಮಂಜುನಾಥ್, ನಾಗೇಶ್ ಗೌಡ ಹಾಗೂ ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...