ನಂದಿನಿ ಹಾಲಿನ ದರ 5 ರೂ. ಹೆಚ್ಚಳವಾಗುವ ಸಾಧ್ಯತೆ

Date:

ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಿಸಲು ಚಿಂತನೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಕರ್ನಾಟಕ ಹಾಲು ಮಾರಾಟ ಮಹಾಮಂಡಳಿ (ಕೆಎಂಎಫ್‌) ನೂತನ ಆಧ್ಯಕ್ಷ, ಕಾಂಗ್ರೆಸ್‌ ಶಾಸಕ ಭೀಮಾ ನಾಯ್ಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದ ಎಲ್ಲ ಹಾಲು ಒಕ್ಕೂಟಗಳಿಂದ ಬೆಲೆ ಏರಿಕೆಗೆ ಬೇಡಿಕೆ ಬಂದಿದೆ. ಹೀಗಾಗಿ, 5 ರೂ. ಏರಿಕೆ ಮಾಡಲು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದೇವೆ. ಬೆಲೆ ಏರಿಕೆ ಮಾಡುವುದರ ಜೊತೆಗೆ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಾಲು ಉತ್ಪನ್ನಗಳನ್ನು ಒದಗಿಸಲು ಆದ್ಯತೆ ನೀಡುತ್ತೇವೆ” ಎಂದು ಅವರು ಹೇಳಿದ್ದಾರೆ.

“ನಂದಿನಿ ಹಾಲಿನ ಬೆಲೆ ಏರಿಕೆ ಮಾಡುವುದು ಮಾತ್ರವಲ್ಲ, ಹಾಲು ಉತ್ಪಾದಕರಿಗೆ ನೀಡುವ ದರವನ್ನೂ ಹೆಚ್ಚಿಸಲು ಸಹಕಾರ ಸಚಿವ ಕೆ.ಎನ್ ರಾಜಣ್ಣ ಪ್ರಸ್ತಾಪ ಇಟ್ಟಿದ್ದಾರೆ. ರಾಜ್ಯದಲ್ಲಿ ಹೈನುಗಾರಿಕೆ ಉತ್ತಮವಾಗಿ ನಡೆಯುತ್ತಿದೆ. ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...